ಸಿದ್ದರಾಮಯ್ಯ ಮನೆಗೆ ಹೋಗುವುದು ನಿಶ್ಚಿತವಾಗಿದ್ದು, ಹೀಗಾಗಿ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾವು ಸುಮ್ಮನೇ ಕುಳಿತಿದ್ದರೂ ಸಹ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂಬ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ಹೋಗುವ ಕಾರ್ಯಕ್ರಮ ಇದೆ. ಅದಕ್ಕಾಗಿ ಅವರು ಆ ರೀತಿ ಹೇಳುತ್ತಿದ್ದಾರೆ. ಇನ್ನು ಗುಜರಾತ್ ಚುನಾವಣೆ ನಂತರ ಸಹಜವಾಗಿಯೇ ಕರ್ನಾಟಕದಲ್ಲಿ ಚುನಾವಣೆ ಬಗ್ಗೆ ಚರ್ಚೆಯಾಗುತ್ತಿದೆ. ನಾವು ಸಂಘಟನೆ ದೃಷ್ಟಿಯಿಂದ ಎಲ್ಲಾ ತಯಾರಿ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಈ ಬಾರಿ ಹಳೇ ಮೈಸೂರು ಭಾಗದಲ್ಲಿ ಅತಿ ಹೆಚ್ಚಿನ ಸ್ಥಾನಗಳನ್ನು ನಾವು ಗೆಲ್ಲುತ್ತೇವೆ. ಅದಕ್ಕಾಗಿ ಎಲ್ಲಾ ತಯಾರಿ ನಡೆಸಿದ್ದೇವೆ. ಅವಧಿಗೆ ಮುನ್ನ ಚುನಾವಣೆ ಪ್ರಶ್ನೆಗೆ ಇಂತಹ ಸುದ್ದಿಗಳನ್ನ ನಿಮ್ಮಗೆ ಯಾರು ಹೇಳುತ್ತಾರೆ ಎಂದು ಮಾಧ್ಯಮದವರ ಮೇಲೆ ಗರಂ ಆಗಿ ಹೊರಟರು.