• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಂಗವಿಕಲರ ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ : ಸಿಎಂ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
December 3, 2022
in ಕರ್ನಾಟಕ, ರಾಜಕೀಯ
0
ಅಂಗವಿಕಲರ ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ : ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ಅಂಗವಿಕಲರ ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ ರೂಪಿಸಿ, 5 ಲಕ್ಷದ ವರೆಗಿನ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವ ಯೋಜನೆ ಪ್ರಾರಂಭಿಸುವುದಾಗಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಘೋಷಿಸಿದ್ದಾರೆ.

ADVERTISEMENT

ಶನಿವಾರ ನಗರದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ -2022 ಕಾರ್ಯಕ್ರಮವನ್ನುದ್ದೇಶಿಸಿ ಮತಾನಾಡಿದ ಸಿಎಂ ವಿಕಲಚೇತನರು ದೈರ್ಯದಿಂದ ಯಶಸ್ವಿಯಾಗಿ.‌ಬದುಕು ನಡೆಸಲು ಸರ್ಕಾರ ಎಲ್ಲ ಸಹಕಾರವನ್ನು ನೀಡಲಿದೆ. ಸರ್ಕಾರ ನಿರ್ಮಿಸುವ ಮನೆಗಳಲ್ಲಿ ಅಂಗವಿಕಲರಿಗೆ ನೀಡುವಲ್ಲಿ ಶೇ.3 ರಷ್ಟು ಮೀಸಲಾತಿಯನ್ನು ನೀಡಲಾಗುವುದು. ಬುದ್ಧಿಮಾಂದ್ಯ ಮಕ್ಕಳಿಗೆ ಶೆಲ್ಟರ್ಡ್ ವರ್ಕ್ ಶಾಪ್ ಸ್ಥಾಪಿಸಲು ತೀರ್ಮಾನಿಸಲಾಗಿದೆ.

ಸರ್ಕಾರದ ವತಿಯಿಂದ ಅಂಗವಿಕಲಿಗೆ ಪವರ್ಡ್ ಟ್ರೈಸೈಕಲ್ ನೀಡಲಾಗುತ್ತಿದೆ. ಈ ವರ್ಷ ಈ ಯೋಜನೆಗೆ 25 ಕೋಟಿ ರೂ.ಗಳನ್ನು ನೀಡಿ 2 ಸಾವಿರ ಟ್ರೈ ಸೈಕಲ್ ಗಳನ್ನು ಮಾರ್ಚ್ 31ರೊಳಗೆ ನೀಡಲು ತೀರ್ಮಾನಿಸಿರುವುದಾಗಿ ತಿಳಿಸಿದ್ದಾರೆ.

https://twitter.com/BSBommai/status/1598953459285250048?ref_src=twsrc%5Etfw%7Ctwcamp%5Etweetembed%7Ctwterm%5E1598953459285250048%7Ctwgr%5E4ad49e8fb9189c05330915a8e31258a75cc22fec%7Ctwcon%5Es1_&ref_url=https%3A%2F%2Fwww.prajavani.net%2Fkarnataka-news%2Fhealth-insurance-and-3-percent-reservation-will-be-given-to-disabled-says-basavaraj-bommai-994032.html

ವಸತಿ ಶಾಲೆಗಳಲ್ಲಿ ಬುದ್ದಿಮಾಂದ್ಯ ಮಕ್ಕಳಿಗೆ ನೀಡಲಾಗುತ್ತಿದ್ದ 6800 ರೂ.ಗಳನ್ನು 10200 ರೂ.ಗಳಿಗೆ ಹೆಚ್ಚಿಸಲಾಗಿದೆ. ಬುದ್ಧಿಮಾಂದ್ಯ ಮಕ್ಕಳ ವಸತಿರಹಿತ ಶಾಲೆಗಳಲ್ಲಿ ನೀಡಲಾಗುತ್ತಿದ್ದ 6000 ರೂ.ಗಳನ್ನು 9000 ರೂ.ಹೆಚ್ಚಿಸಿ ನೀಡಲಾಗುತ್ತಿದೆ. ಅಂಧಕಿವುಡ ಮಕ್ಕಳ ವಸತಿ ಶಾಲೆಗಳಲ್ಲಿರುವವರಿಗೆ 9300 ರೂ.ಗಳನ್ನು, ವಸತಿರಹಿತ ಶಾಲೆಗಳ ಅಂಧಕಿವುಡ ಮಕ್ಕಳಿಗೆ 7800 ರೂ.ಗಳನ್ನು ,ಹಗಲುಸೇವೆ ಯೋಗಕ್ಷೇಮ ಕೇಂದ್ರಗಳಿಗೆ 15000 ರೂ.ಗಳನ್ನು , ವೃದ್ಧಾಶ್ರಮ ಕೇಂದ್ರಗಳ ನಿರ್ವಹಣೆಗೆ 12 ಲಕ್ಷ ರೂ. ನೀಡಲಾಗುತ್ತಿದೆ. ಮುಖ್ಯಮಂತ್ರಿಯಾದ ತಕ್ಷಣ ವಿಕಲಚೇತನರ ಮಾಸಾಶನವನ್ನು ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಸವಲತ್ತುಗಳನ್ನು ಹೆಚ್ಚಿಸಲಾಗುವುದು. ಆಸಿಡ್ ದಾಳಿಯಿಂದ ಬಳಲುವ ಹೆಣ್ಣು ಮಕ್ಕಳಿಗೆ 3000 ರೂ. ದಿಂದ 10000 ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ. ವಿಕಲಚೇತನರ ವಿದ್ಯಾಭ್ಯಾಸಕ್ಕಾಗಿ ಮುಂದಿನ ಬಜೆಟ್ ನಲ್ಲಿ ವಿಶೇಷ ಅನುದಾನವನ್ನು ಮೀಸಲಿರಿಸಲಾಗುವುದು ಎಂದು ಹೇಳಿದ್ದಾರೆ.

ದೇವರು ಸೃಷ್ಟಿ ಮಾಡುವಾಗ ಹಲವಾರು ಸವಾಲುಗಳನ್ನು ಮನುಷ್ಯನಿಗೆ ಇಟ್ಟಿರುತ್ತಾನೆ. ಎಲ್ಲ ಅಂಗ ಇದ್ದವರಿಗೂ ದೇವರು ಸವಾಲು ಇಟ್ಡಿರುತ್ತಾನೆ‌. ಅಂಗಾಂಗಳ ಕೊರತೆ ಇದೆಯೆಂಬ ಕೀಳರಿಮೆ ಬೇಡ.ವಿಕಲಚೇತನರು ವಿಶೇಷವಾದ ದೇವರ ಮಕ್ಕಳು. ಸವಾಲುಗಳನ್ನು ಎದುರಿಸುವ ವಿಶೇಷ ಶಕ್ತಿಯನ್ನು ಹಾಗೂ ಮನೋಸ್ಥೈರ್ಯವನ್ನು ದೇವರು ನಿಮಗೆ ನೀಡಿದ್ದಾನೆ. ನೀವು ಆತ್ಮ ವಿಶ್ವಾಸದಿಂದ ಇರಬೇಕು. ನಾವೂ ಇತರರಂತೆ ಬದುಕಿ ತೋರಿಸುತ್ತೇವೆ ಎಂಬ ಛಲ ಮತ್ತು ನಂಬಿಕೆ ಇರಬೇಕು. ನಿಮಗೆ ಅನುಕಂಪದ ಅವಶ್ಯಕತೆ ಇಲ್ಲ. ವಿಕಲಚೇತನರನ್ನು ಸಶಕ್ತಗೊಳಿಸುವ ಸಮಾಜದ ಅವಶ್ಯಕತೆ ಇದೆ. ಕೆಳಗೆ ಬೀಳುವ ವ್ಯಕ್ತಿಯನ್ನು ಮೇಲೆತ್ತುವುದು ಮಾನವ ಧರ್ಮ, ಅದನ್ನು ಮನುಷ್ಯರು ಮರೆಯದೇ ನೆರವು ನೀಡಬೇಕು. ಇದು ವಿಶ್ವ ಮಾನವ ಸಮಾಜ. ಒಬ್ಬರಿಗೊಬ್ಬರು ಕೈ ಹಿಡಿದು ನಡೆಯುವ ಮಾನವೀಯ ಗುಣವನ್ನು ಎಲ್ಲರೂ ಪಾಲಿಸಬೇಕು.

ಎಲ್ಲ ಅಂಗಾಂಗಳು ಸರಿಯಿದ್ದವರಿಗೂ ಸಮಾಧಾನ ಇರುವುದಿಲ್ಲ. ಪರೋಪಕಾರದ ಗುಣವನ್ನು ಬೆಳೆಸಿಕೊಂಡರೆ ಮಾತ್ರ ಸಮಾಧಾನ ದೊರೆಯುತ್ತದೆ. ಸಶಕ್ತರಾಗಿರುವವರು ದಿವ್ಯಾಂಗ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಿ, ಸಹಾಯ ಮಾಡಬೇಕು. ರಾಜ್ಯದಲ್ಲಿ ಸುಮಾರು 40 ರಿಂದ 50 ಲಕ್ಷ ದಿವ್ಯಾಂಗ ಮಕ್ಕಳಿದ್ದು, ಅವರ ಬೆಳವಣಿಗೆಗೆ ಏಳು ಕೊಟಿ ಕನ್ನಡಿಗರು ಸಹಾಯ ಮಾಡುವ ಹೃದಯಶ್ರೀಮಂತಿಕೆಯನ್ನು ಬೆಳೆಸಿಕೊಳ್ಳಬೇಕು. ದೇವರ ಮಕ್ಕಳಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆಯಬೇಕು.ದಿವ್ಯಾಂಗ ಮಕ್ಕಳನ್ನು ಬೆಳೆಸುವ ಪ್ರತಿಜ್ಞೆ ತೆಗೆದುಕೊಳ್ಳಬೇಕು ಎಂದು ಕನ್ನಡ ಜನತೆಗೆ ಕರೆ ನೀಡಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Bond Ravi: ಅಪ್ಪುಗೆ ನಮನ ಸಲ್ಲಿಸಿದ ಬಾಂಡ್‌ ರವಿ ಚಿತ್ರತಂಡ | Pramod | Kajal Kunder | Puneeth Rajkumar

Next Post

ನಾನು ರೌಡಿ ಶೀಟರ್, ಬಿಜೆಪಿಯಲ್ಲಿ ನನಗೂ ಸ್ಥಾನ-ಮಾನ ಕೊಡಿ

Related Posts

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ
ಕರ್ನಾಟಕ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ಸಚಿವರಿಗಾಗಿ ವಿಶೇಷ ಉಪಹಾರ ಕೂಟ ಏರ್ಪಡಿಸಿದ್ದು, ರಾಜಕೀಯ ವಲಯದಲ್ಲಿ ಹೊಸ...

Read moreDetails
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
Next Post
ನಾನು ರೌಡಿ ಶೀಟರ್, ಬಿಜೆಪಿಯಲ್ಲಿ ನನಗೂ ಸ್ಥಾನ-ಮಾನ ಕೊಡಿ

ನಾನು ರೌಡಿ ಶೀಟರ್, ಬಿಜೆಪಿಯಲ್ಲಿ ನನಗೂ ಸ್ಥಾನ-ಮಾನ ಕೊಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada