ಸಿಎಂ ಬೊಮ್ಮಾಯಿ ಇಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ಸಚಿವ ಸಂಪುಟ ವಿಸ್ತರಣೆ, ಚುನಾವಣೆಯ ಬಗ್ಗೆ ಕುರಿತು ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಇಂದು ಬಿ.ಎಸ್. ಯಡಿಯೂರಪ್ಪ ಅಧಿಕೃತ ನಿವಾಸ ಕಾವೇರಿಗೆ ಆಗಮಿಸಿದ ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಸಚಿವ ಸಂಪುಟ ವಿಸ್ತರಣೆ, ಪರಿಷತ್ನ ಏಳು ಸ್ಥಾನ, ಶಿಕ್ಷಕ, ಪದವೀಧರ ಕ್ಷೇತ್ರದ ನಾಲ್ಕು ಸ್ಥಾನ, ರಾಜ್ಯಸಭೆಯ ನಾಲ್ಕು ಸ್ಥಾನಕ್ಕೆ ಚುನಾವಣೆ ಘೋಷಣೆ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಅವರು ಮಾಜಿ ಸಿಎಂ ಯಡಿಯೂರಪ್ಪ ನಿವಾಸಕ್ಕೆ ತೆರಳಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.