• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮಳೆ ಅವಾಂತರ ತಡೆಯಲು ಸಿಎಂ ಬೊಮ್ಮಾಯಿ ಬಿಬಿಎಂಪಿಯಲ್ಲಿ ಸಭೆ : ನಗರದ ನೀರುಗಾವಲು ಪುನರ್ ನಿರ್ಮಾಣಕ್ಕೆ ಸಿಎಂ ಸೂಚನೆ !

ಕರ್ಣ by ಕರ್ಣ
November 25, 2021
in ಕರ್ನಾಟಕ
0
ಎನ್ಇಪಿ ಜಾರಿಗೊಳಿಸುವಾಗ ಉನ್ನತ ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ:  ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ ನಿರಂತರ ಮಳೆಯಿಂದಾಗಿ ಸಾಲು ಸಾಲು ಅನಾಹುತ ಸಂಭವಿಸಿದೆ. ಇದೀಗ ಅವಾಂತರಗಳ ಬಳಿಕ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಬಿಎಂಪಿ ಇಂಜಿನಿಯರ್​​ಗಳ ತುರ್ತು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಜನರಿಗೆ ತೊಂದರೆಯಾಗದಂತೆ ಸೂಕ್ತ ಕ್ರಮವಹಿಸಲು ಖಡಕ್ ಸೂಚನೆ ಕೊಟ್ಟಿದ್ದಾರೆ.

ADVERTISEMENT

ಮಳೆ ಅನಾಹುತ ತಡೆಯಲು ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ.!!

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ಬಿಬಿಎಂಪಿಯಲ್ಲಿ ಮಹತ್ತರವಾದ ಸಭೆ ನಡೆಸಿ ಪಾಲಿಕೆ ವ್ಯಾಪ್ತಿಯಲ್ಲಿರುವ ರಾಜಕಾಲುವೆಗಳನ್ನು ವಿಸ್ತರಿಸಲು ಸೂಚಿಸಿದರಲ್ಲದೆ ಒತ್ತುವರಿದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ. ಹೆಚ್ಚಿನ ಮಳೆ ಬಂದಾಗ ನಗರದಲ್ಲಿ ರಾಜಕಾಲುವೆ ತುಂಬಿ ಹರಿದು ಮನೆಗಳಿಗೆ ನೀರು ನುಗ್ಗುವಂತಹ ಘಟನೆಗಳ ತಡೆಗಟ್ಟುವ ಕ್ರಮಗಳ ಕುರಿತು ಸಭೆಯಲ್ಲಿ ಮಾಹಿತಿ ಪಡೆದ ಸಿಎಂ, ಈಗಾಗಲೇ ಕೆಲವು ಸ್ಥಳಗಳ ಪರಿಶೀಲನೆ ಆರಂಭವಾಗಿದ್ದು, ಸಮಸ್ಯೆ ಇರುವ ಸ್ಥಳಗಳನ್ನು ಗುರುತಿಸಿ ಕೂಡಲೇ ದುರಸ್ತಿ ಕಾರ್ಯ ನಡೆಸಲು ಮತ್ತು ಹೊಸ ಕಾಲುವೆ ನಿರ್ಮಿಸಲು ಸೂಚನೆ ನೀಡಿದ್ದಾರೆ.

ನಗರದ ನೀರುಗಾವಲು ಪುನರ್ ನಿರ್ಮಾಣಕ್ಕೆ ‌ಸಿಎಂ ಸೂಚನೆ.!!

ಇನ್ನು ಪಾಲಿಕೆಯ ಹಿರಿಯ ಅಧಿಕಾರಿಗಳಿಗೆ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಬೃಹತ್ ನೀರುಗಾಲುವೆಗಳ ಪುನರ್‌ ನಿರ್ಮಾಣಕ್ಕೆ ನೀಲಿ ನಕ್ಷೆ ತಯಾರಿಸಲು ಹೇಳಿದರು. ಚರಂಡಿ ನೀರು ರಾಜಕಾಲುವೆ ಸೇರಲು ಒತ್ತುವರಿಯಿಂದ ಜಾಗದ ಅಭಾವವಿದೆ. ಬೆಂಗಳೂರಿನಲ್ಲಿ ಏಕಾಏಕಿ ಒತ್ತುವರಿ ತೆರವುಗೊಳಿಸಲು ಸಾಧ್ಯವಿಲ್ಲ ಆದ್ದರಿಂದ ಹಂತಹಂತವಾಗಿ ತೆರವುಗೊಳಿಸಲು ಆದೇಶಿಸಿದ್ದಾರೆ. ಬಡವರಿಗೆ ಸೂಕ್ತ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಒತ್ತುವರಿ ತೆರವುಗೊಳಿಸಬೇಕಾಗಿದೆ. ಹೆಬ್ಬಾಳ ವ್ಯಾಲಿ ನೀರು ಸರಾಗವಾಗಿ ಹರಿದುಹೋಗಲು ರೈಲ್ವೆ ವೆಂಟ್ ಅಗಲೀಕರಣದ ಅಗತ್ಯವಿದೆ.‌ ಪಾಲಿಕೆಯ ಅಧಿಕಾರಿಗಳು ಯಾವಾಗಲು ಸಜ್ಜಾಗಿರುವಂತೆಯೂ, ಈಗಾಗಲೇ ನಗರದಾದ್ಯಂತ ತೆಗೆದುಕೊಂಡಿರುವ ಕಾಮಗಾರಿಗಳನ್ನು ಸಂಪೂರ್ಣವಾಗಿ ಪರಿಶೀಲಿಸಿ, ಎಲ್ಲೆಲ್ಲಿ ನೀರು ಸರಾಗವಾಗಿ ಹರಿಯುವುದಿಲ್ಲವೋ ಅಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು.

ಮಳೆಯಿಂದಾಗುವ ಅನಾಹುತಕ್ಕೆ ಶಾಶ್ವತ ಪರಿಹಾರ.!!

110 ಹಳ್ಳಿಗಳಲ್ಲಿ ರಾಜಕಾಲುವೆಗಳ ಅಗಲೀಕರಣ ಮಾಡುವ ಅಗತ್ಯವಿದೆ.‌ ಕಾಂಕ್ರೀಟ್ ಹಾಕಿ ರಾಜಕಾಲುವೆ ಅಗಲೀಕರಣ ಮಾಡಬೇಕಿದೆ. ವೃಷಭಾವತಿ, ಹೆಬ್ಬಾಳ, ಛಲಗಟ್ಟ, ಕೋರಮಂಗಲ ವ್ಯಾಲಿ ಸ್ವಚ್ಛಗೊಳಿಸೋಕೆ ಸೂಚನೆ ನೀಡಲಾಗಿದೆ. ಈಗಾಗಲೇ 400 ಕಿಲೋ ಮೀಟರ್ ರಾಜಕಾಲುವೆ ದುರಸ್ತಿಯಾಗಿದೆ. 94 ಕ್ರಿಟಿಕಲ್ ಪಾಯಿಂಟ್ಸ್ ಗುರ್ತಿಸಲಾಗಿದೆ. ಎರಡು ತಿಂಗಳಲ್ಲಿ ದುರಸ್ತಿಗೆ ಸೂಚನೆ ನೀಡಲಾಗಿದೆ. 51 ಕಿಲೋ ಪ್ರೈಮರಿ ಬೃಹತ್ ಕಾಲುವೆ ಶೀಘ್ರದಲ್ಲೇ ಆಗಬೇಕಿದೆ. ಉಳಿದಂತೆ 38 ಕಿಲೋ ಮೀಟರ್ ಸೆಕೆಂಡರಿ ಡ್ರೈನ್ ಆಗಬೇಕಿದೆ. ಇವೆಲ್ಲದಕ್ಕೂ 900 ಕೋಟಿ ವೆಚ್ಚ ಅಂದಾಜಿಸಲಾಗಿದೆ.‌ ರಾಜಕಲುವೆ ದುರಸ್ತಿಗೆ 1060 ಕೋಟಿ ಬಿಡುಗಡೆಯಾಗಿದೆ. ರಾಜಕಾಲುವೆ ಒತ್ತುವರಿ ಮಾಡಿಕೊಂಡು 718 ಕಟ್ಟಡಗಳಿವೆ ಶೀಘ್ರದಲ್ಲೇ ತೆರವು ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ಸ್ಪಷ್ಟ ಪಡಿಸಿದ್ದಾರೆ.

ಚರಂಡಿಗಳಲ್ಲಿ ನೀರು ಹೊರ ಹರಿಯುವುದಕ್ಕೆ ಮುಖ್ಯ ಕಾರಣಗಳನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶಿಸಿ ಸರ್ಕಾರದಿಂದ ಸಂಪೂರ್ಣ ನೀಡುವುದಾಗಿ ಸ್ಪಷ್ಟಪಡಿಸಿದರು. 

ಹೊಸದಾಗಿ ಎಲ್ಲೆಲ್ಲಿ ಕಾಲುವೆಗಳನ್ನು ನಿರ್ಮಿಸಲು ಅಗತ್ಯವಿದೆಯೋ ಅಲ್ಲಲ್ಲಿ ಇದಕ್ಕೆ ಸೂಕ್ತ ಸಲಹೆ-ಕ್ರಮಗಳನ್ನು ಸೂಚಿಸಿದರು. 

ಒಟ್ಟಾರೆ ಸತತ ಮಳೆಯಿಂದಾಗಿ ಸಿಲಿಕಾನ್ ಸಿಟಿ ಬೆಂಗಳೂರು ಹೈರಾಣಾಗಿ ಹೋಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಇಂಥಾ ಅನಾಹುತಗಳಿಗೆ ದಾರಿ ಮಾಡಿಕೊಡದಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟರಲ್ಲದೆ, ಶಾಶ್ವತ ಪರಿಹಾರಕ್ಕಾಗಿ ಇಂದು ಮಹತ್ವದ ಸಭೆ ನಡೆಸಿ ಕೆಲವು ನಿರ್ಧಾರ ಕೈಗೊಂಡಿದ್ದಾರೆ. ಅಂದಹಾಗೆ, ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಸೇರಿದಂತೆ ಪಾಲಿಕೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಇಂದಿನ ಸಭೆಯಲ್ಲಿ ಸಚಿವರು ಸೇರಿದಂತೆ ನಗರದ ಬಹುತೇಕ ಶಾಸಕರು ಭಾಗಿಯಾಗಿದ್ದರು.

Tags: CM Bommai meets with BBMP to stop rains
Previous Post

ಭಾರತದ ಕೃಷಿ ವಲಯಕ್ಕೆ ಕನಿಷ್ಟ ಬೆಂಬಲ ಬೆಲೆ ಬೇಕೆ? ಬೇಡವೇ?

Next Post

ಚಳಿಗಾಲದ ಅಧಿವೇಶನದಲ್ಲಿ ಎರಡು ಸರ್ಕಾರಿ ಬ್ಯಾಂಕುಗಳ ಖಾಸಗೀಕರಣ ಮಸೂದೆ ಮಂಡನೆ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಚಳಿಗಾಲದ ಅಧಿವೇಶನದಲ್ಲಿ ಎರಡು ಸರ್ಕಾರಿ ಬ್ಯಾಂಕುಗಳ ಖಾಸಗೀಕರಣ ಮಸೂದೆ ಮಂಡನೆ

ಚಳಿಗಾಲದ ಅಧಿವೇಶನದಲ್ಲಿ ಎರಡು ಸರ್ಕಾರಿ ಬ್ಯಾಂಕುಗಳ ಖಾಸಗೀಕರಣ ಮಸೂದೆ ಮಂಡನೆ

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada