ದೇಶದಲ್ಲಿ ದಿನದಿಂದ ದಿನಕ್ಕೆ ಓಮಿಕ್ರಾನ್ ಉಪತಳಿ BF7 ಸೋಂಕಿನ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿದ್ದು ಸಂಭಾವ್ಯ ನಾಲ್ಕನೇ ಅಲೆಯನ್ನ ತಡೆಯುವ ನಿಟ್ಟಿನಲ್ಲಿ ಸರ್ಕಾರ ಕಠಿಣ ನಿಯಮಗಳನ್ನ ಜಾರಿಗೆ ತರಲು ಚಿಂತನೆ ನಡೆಸಿದೆ.
ಸಂಭಾವ್ಯ ನಾಲ್ಕನೇ ಅಲೆ ತಡೆಯುವ ನಿಟ್ಟಿನಲ್ಲಿ ನೂತನ ವರ್ಷಾಚರಣೆಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ವಿದೇಶಗಳಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನೂತನ ಮಾರ್ಗಸೂಚಿ ಹೊರಡಿಸಲಾಗುವುದು ಈ ಬಗ್ಗೆ ಕಂದಾಯ ಸಚಿವ ಆರ್.ಅಶೋಕ್ ಹಾಗೂ ಆರೋಗ್ಯ ಸಚಿವ ಸುಧಾಕರ್ ಭಾನುವಾರ ಸಭೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.
ಬೂಸ್ಟರ್ ಡೋಸ್ ನೀಡುವಿಕೆಯನ್ನು ಹೆಚ್ಚಿಸಬೇಕು ಈ ಬಗ್ಗೆ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಶಿಬಿರಗಳನ್ನ ಏರ್ಪಡಿಸಬೇಕು ಆಸ್ಪತ್ರೆಯಲ್ಲಿರುವ ಆಮ್ಲಜನಕದ ಪ್ಯ್ಲಾಂಟ್‌ಗಳನ್ನು ಪ್ರಾಯೋಗಿಕವಾಗಿ ಚಾಲನೆಯಲ್ಲಿಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
ಒಳಾಂಗನ-ಹೊರಾಂಗಣದಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರವನ್ನ ಕಾಯ್ದುಕೊಳ್ಳಬೇಕು ಯಾರೂ ಭಯಪಡುವ ಅವಶ್ಯಕತೆಯಿಲ್ಲ ಎಲ್ಲರೂ ಮುಂಜಾಗ್ರತಾ ಕ್ರಮ ಹಾಗೂ ಎಚ್ಚರಿಕೆಯಿಂದಿರುವುದು ಸೂಕ್ತ ಎಂದಿದ್ದಾರೆ.
ಹಾಲಿ ವಿಧಾನಸಭೆ ಚಳಿಗಾಲದ ಅಧಿವೇಶನದ ಕುರಿತು ಕೇಳಿದ ಪ್ರಶ್ನೆಗೆ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಚರ್ಚಿಸಲು ನಾನು ಸಭಾಧ್ಯಕ್ಷರಲ್ಲಿ ಸಮಯ ನೀಡುವಂತೆ ಮನವಿ ಮಾಡಿದ್ದೇನೆ ಈ ಬಗ್ಗೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಉತ್ತರಿಸಿದ್ದಾರೆ.