• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪತ್ರಕರ್ತರಿಗೆ ಉಡುಗೊರೆ; ಕಾಂಗ್ರೆಸ್‌ಗೆ ಮಾತನಾಡುವ ನೈತಿಕ ಹಕ್ಕಿಲ್ಲ : ಸಿಎಂ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
October 30, 2022
in ಕರ್ನಾಟಕ, ರಾಜಕೀಯ
0
ಈ ಭಾರೀ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧವಿಲ್ಲ : ಆರ್ ಅಶೋಕ್
Share on WhatsAppShare on FacebookShare on Telegram

ಇನ್ಸ್ಪೆಕ್ಟರ್ ನಂದೀಶ್ ಪ್ರಕರಣದ ಬಗ್ಗೆ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿ ಎಲ್ಲಾ ಮಾಹಿತಿ ಪಡೆದು ತನಿಖೆ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ತನಿಖೆ ಕೈಗೊಳ್ಳುವುದರ ಬಗ್ಗೆ ಹಿಂದೆ ಮುಂದೆ ಯೋಚಿಸುವುದಿಲ್ಲ ಎಂದರು.

ADVERTISEMENT

ಪತ್ರಕರ್ತರಿಗೆ ಉಡುಗೊರೆ: ಕಾಂಗ್ರೆಸ್ ಗೆ ಮಾತನಾಡುವ ನೈತಿಕ ಹಕ್ಕಿಲ್ಲ

ಪತ್ರಕರ್ತರಿಗೆ ಗಿಫ್ಟ್ ನೀಡಿರುವ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಕಾಂಗ್ರೆಸ್ಸಿನ ಟೂಲ್ ಕಿಟ್ ನ ಪರಿಣಾಮ. ಸುಳ್ಳನ್ನು ಸೃಷ್ಟಿಸುವ ಕೆಲಸವನ್ನು ಅವರು ಮಾಡುತ್ತಿದ್ದಾರೆ. ನಾನು ಯಾರಿಗೂ ಸೂಚನೆಯನ್ನು ನೀಡಿಲ್ಲ. ಕಾಂಗ್ರೆಸ್ ಇದ್ದಾಗ ಹಲವಾರು ಜನರಿಗೆ ಏನೇನು ಉಡುಗೊರೆಗಳನ್ನು ನೀಡಿದ್ದಾರೆ ಎನ್ನುವುದು ಸ್ಪಷ್ಟವಾಗಿದೆ. ಪತ್ರಿಕೆಗಳಲ್ಲಿ ವರದಿಯೂ ಆಗಿದೆ. ಐ ಫೋನ್, ಲ್ಯಾಪ್ಟಾಪ್, ಬಂಗಾರದ ನಾಣ್ಯಗಳನ್ನೇ ಕೊಟ್ಟಿದ್ದಾರೆ. ಇವರಿಗೆ ಮಾತನಾಡಲು ಯಾವ ನೈತಿಕ ಹಕ್ಕೂ ಇಲ್ಲ. ಯಾರೋ ಒಬ್ಬರು ಲೋಕಾಯುಕ್ತಕ್ಕೆ ದೂರನ್ನು ನೀಡಿದ್ದು, ತನಿಖೆಯಾಗುತ್ತದೆ. ಇದರ ಅರ್ಥ ಎಲ್ಲಾ ಪತ್ರಕರ್ತರು ಉಡುಗೊರೆಯನ್ನು ಪಡೆದಿದ್ದಾರೆ ಎಂದು ವ್ಯಾಖ್ಯಾನ ಮಾಡುವುದು ಸರಿಯಲ್ಲ. ನಿನ್ನೆ ಕಾಂಗ್ರೆಸ್ ವಕ್ತಾರ ಬಹಳ ಕೆಟ್ಟದಾಗಿ ಅದನ್ನು ವ್ಯಾಖ್ಯಾನ ಮಾಡಿದ್ದು ಅದನ್ನು ನಾನು ಖಂಡಿಸುತ್ತೇನೆ ಎಂದರು.

ಉಡುಗೊರೆ ನೀಡುವ ಬಗ್ಗೆ ನಾನು ಯಾರಿಗೂ ಸೂಚನೆ ನೀಡಿಲ್ಲ. ಲೋಕಾಯುಕ್ತ ತನಿಖೆಯಾಗಲಿ ಎಂದರು.

ಬಿಜೆಪಿಗೆ ಒಬಿಸಿ ಬೆಂಬಲದ ದ್ಯೋತಕವಾಗಿ ಸಮಾವೇಶ

ಒಬಿಸಿ ದೊಡ್ಡ ಪ್ರಮಾಣದ ಬೆಂಬಲ ಬಿಜೆಪಿಗೆ ದೊರೆಯುತ್ತಿರುವ ದ್ಯೋತಕವಾಗಿ ಈ ಕಲಬುರಗಿಯಲ್ಲಿ ಸಮಾವೇಶ ಆಯೋಜನೆಗೊಂಡಿದೆ ಎಂದರು.

ನವೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ಪರಿಶಿಷ್ಟ ಪಂಗಡಗಳ ಸಮಾವೇಶವಿದೆ. ನಂತರ ಪರಿಶಿಷ್ಟ ಜಾತಿಗಳ ಸಮಾವೇಶ ನಡೆಯಲಿದೆ. ಹುಬ್ಬಳ್ಳಿಯಲ್ಲಿ ರೈತರ ಸಮಾವೇಶ ನಡೆಯಲಿದ್ದು, ಡಿಸೆಂಬರ್ ತಿಂಗಳಲ್ಲಿ ಮಹಿಳೆಯರ ಸಮಾವೇಶ ಆಯೋಜನೆ ಮಾಡಲಾಗುವುದು ಎಂದು ಪಕ್ಷದ ಅಧ್ಯಕ್ಷರು, ಕೋರ್ ಸಮಿತಿ ತೀರ್ಮಾನ ಮಾಡಿದೆ. ಆ ಪ್ರಕಾರ ಇಂದು ಕಲಬುರಾಗಿಯಲ್ಲಿ ಹಿಂದುಳಿದ ವರ್ಗಗಳ ಸಮಾವೇಶವನ್ನು ಅದ್ದೂರಿಯಾಗಿ ಆಯೋಜಿಸಲಾಗಿದೆ. ಸುಮಾರು 2 ಲಕ್ಷ ಜನ ಸೇರಲಿದ್ದು, ಒಬಿಸಿ ಮೋರ್ಚಾ ಪದಾಧಿಕಾರಿಗಳು ದೊಡ್ಡ ಪ್ರಮಾಣದಲ್ಲಿ ಸೇರುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ʼದಿ ವೈರ್‌ʼ ವಿರುದ್ಧ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ದೂರು; ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

Next Post

T-20 ವಿಶ್ವಕಪ್‌; ಬಾಂಗ್ಲಾದೇಶ ವಿರುದ್ದ ವಿರೋಚಿತ ಸೋಲುಂಡ ಜಿಂಬಾಬ್ವೆ

Related Posts

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?
ರಾಜಕೀಯ

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

by ಪ್ರತಿಧ್ವನಿ
May 21, 2026
0

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “Cockroach Janata Party” ಎಂಬ ಪದ ಭಾರೀ ವೈರಲ್ ಆಗುತ್ತಿದೆ. ಮೊದಲ ನೋಟಕ್ಕೆ ಇದು ಹಾಸ್ಯ, ಮೀಮ್ ಅಥವಾ ಟ್ರೋಲ್ ರಾಜಕೀಯದ...

Read moreDetails
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
Next Post
T-20 ವಿಶ್ವಕಪ್‌; ಬಾಂಗ್ಲಾದೇಶ ವಿರುದ್ದ ವಿರೋಚಿತ ಸೋಲುಂಡ ಜಿಂಬಾಬ್ವೆ

T-20 ವಿಶ್ವಕಪ್‌; ಬಾಂಗ್ಲಾದೇಶ ವಿರುದ್ದ ವಿರೋಚಿತ ಸೋಲುಂಡ ಜಿಂಬಾಬ್ವೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada