• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಾರಪ್ಪ ಬಾ ಸಿದ್ರಾಮಣ್ಣ ನೋಡು ಬಾ: ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಲೇವಡಿ

ಪ್ರತಿಧ್ವನಿ by ಪ್ರತಿಧ್ವನಿ
October 17, 2021
in ಕರ್ನಾಟಕ, ರಾಜಕೀಯ
0
ಬಾರಪ್ಪ ಬಾ ಸಿದ್ರಾಮಣ್ಣ ನೋಡು ಬಾ: ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಲೇವಡಿ
Share on WhatsAppShare on FacebookShare on Telegram

ರಾಜ್ಯದಲ್ಲಿ ಉಪಚುನಾವಣೆ ಕಾವು ಜೋರಾಗುತ್ತಿದ್ದು ರಾಜಕೀಯ ಪಕ್ಷಗಳ ನಾಯಕರು ಆರೋಪ ಪ್ರತ್ಯಾರೋಪಗಳ ಸುರಿಮಳೆ ಗೈಯುತ್ತಿದ್ದಾರೆ. ಇದೀಗ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಚುನಾವಣ ಪ್ರಚಾರದ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಏಕವಚನದಲ್ಲಿ ಲೇವಡಿ ಮಾಡುವ ಮೂಲಕ ಸುದ್ದಿಯಲ್ಲಿದ್ದಾರೆ.

ADVERTISEMENT

ಹಾನಗಲ್‌ನಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ್‌ ಸಜ್ಜನರ್‌ ಪರ ಪ್ರಚಾರ ಮಾಡುವ ವೇಳೆ ಬೊಮ್ಮಾಯಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಹಿರೇಕೌಂಸಿ-ಬಾಳಬೀಡ ನೀರಾವರಿ ಯೋಜನೆ ಮಾಡಿದ್ದು ಬಿಜೆಪಿ. ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿದ್ದ ವೇಳೆ ಎನೂ ಕೆಲಸ ಮಾಡಿದ್ರು ಎಂದು ಪ್ರಶ್ನಿಸಿದ್ದಾರೆ. ಕೆರೆ ತುಂಬಿಸುವ ಯೋಜನೆ ಬಗ್ಗೆ ಸಿದ್ದರಾಮಯ್ಯ ನವರಿಗೆ ದಾಖಲೆ ಕಳುಹಿಸಿಕೊಡುವೆ. ಬಾರಪ್ಪ ಬಾ. ಸಿದ್ದರಾಮಣ್ಣ ಬಾ.. ಬಂದು ನೋಡಪ್ಪ ಎಂದು ಸಿಎಂ ಲೇವಡಿ ಮಾಡಿದ್ದಾರೆ. ಬೊಮ್ಮಾಯಿ ಎನು ಅಭಿವೃದ್ಧಿ ಮಾಡಿದ್ದಾರೆ ಅಂತಾ ನೋಡು ಬಾರಪ್ಪ. ನಾವೂ ಜನರ ಜೊತೆ ಇರುವವರು, ನಾವೂ ಭೂಮಿಯಲ್ಲಿ ಆಳವಾಗಿ ಬೇರು ಉರಿರುವವರು. ನಾವೂ ನಿಮ್ಮ ಹಾಗೆ ಕುಂಡಲಿಯಲ್ಲಿ ಇರುವ ಗಿಡಗಳಲ್ಲ ಎಂದು ಸಿದ್ದರಾಮಯ್ಯ ಹಾಗು ಕಾಂಗ್ರೆಸ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮೈಸೂರನಲ್ಲಿ ಮಾಡಲು ಸಾಧ್ಯವಾಗದವರು ಹಾನಗಲ್ಗೆ ಬಂದೂ ಎನು ಮಾಡ್ತೀರಾ. ಮೈಸೂರು ಜನರೇ ನಿಮ್ಮ ಮೇಲೆ ವಿಶ್ವಾಸ ಇಟ್ಟಿಲ್ಲ. ಹಾನಗಲ್ ಜನರು ಯಾಕೆ ನಿಮ್ಮ ಮೇಲೆ ವಿಶ್ವಾಸ ಇಡಬೇಕು ಎಂದು ಗುಡುಗಿದ್ದಾರೆ. ಸಿದ್ದರಾಮಣ್ಣ ಮಾತು ಮಾತಿಗೂ ಮೋದಿ ಬಗ್ಗೆ ಮಾತನಾಡುತ್ತಾರೆ. ಮೋದಿಯ ವಿರುದ್ದ ಮಾತನಾಡಿದ್ರೆ ದೊಡ್ಡ ವ್ಯಕ್ತಿ ಆಗುತ್ತೇನೆ ಅಂದುಕೊಂಡಿದ್ದಾರೆ ಎಂದು ಮಾತಿನಲ್ಲೇ ತಿವಿದಿದ್ದಾರೆ.

ಸಿದ್ದರಾಮಯ್ಯ ಅಚ್ಚೇದಿನ ಎಲ್ಲಿದೆ ಅಂತಾ ಪದೇ ಪದೇ ಪ್ರಶ್ನೆ ಮಾಡುತ್ತಾರೆ. ಅಚ್ಚೇ ದಿನ ದೇಶದ ಜನರಿಗೆ ಬರುತ್ತಿದೆ. ಸಿದ್ದರಾಮಯ್ಯ ಕಾಂಗ್ರೆಸ್ ನಲ್ಲಿ ಇರುವವರೆಗೂ ಅಚ್ಚೇ ದಿನ ಬರಲ್ಲ. ಸಿದ್ದರಾಮಯ್ಯ ನವರಿಗೆ ಅಚ್ಚೇದಿನ ಬರಲು ಡಿಕೆಶಿ ಬಿಡಲ್ಲ ಎಂದು ಕಾಂಗ್ರೆಸ್ ಒಳರಾಜಕೀಯದ ಬಗ್ಗ ಪರೋಕ್ಷವಾಗಿ ಪ್ರಸ್ತಾಪಿಸಿದ್ದಾರೆ. ಕಾಂಗ್ರೆಸ್ ನಲ್ಲಿ ಪಿಸು ಮಾತುಗಳು ಶುರುವಾಗಿದೆ. ಸಿದ್ದರಾಮಯ್ಯ ದೆಹಲಿಗೆ ಹೋಗುವುದನ್ನು ತಪ್ಪಿಸಿಕೊಳ್ಳಲು. ರಾಜ್ಯದಲ್ಲಿ ಗದ್ದುಗೆ ಗಟ್ಟಿ ಮಾಡಿಕೊಳ್ಳಲು ಸಿದ್ದರಾಮಯ್ಯ ತಮ್ಮ ಶಿಷ್ಯರ ಮೂಲಕ ಪಿಸುಮಾತು ಆಡಿಸುತ್ತಿದ್ದಾರೆ. ಕಾಂಗ್ರೆಸ್ ಮುಗಿಸಲು ಕಾಂಗ್ರೆಸ್ ನಾಯಕರೇ ಸಾಕು ಎಂದು ಸಿಎಂ ಬೊಮ್ಮಾಯಿ ಕೈ ಪಾಳಯದ ವಿರುದ್ಧ ವಾಗ್ಬಾಣ ಬಿಟ್ಟಿದ್ದಾರೆ.

ಚುನಾವಣೆ ಹತ್ತಿರ ಬಂದಾಗ ಸಿದ್ದರಾಮಣ್ಣ ಏಳು ಕೆ.ಜಿ ಅಕ್ಕಿ ಅಂತಾರೆ‌. ಸಿದ್ದರಾಮಯ್ಯ ಮನೆಗಳನ್ನ ಕಟ್ತೀನಿ ಅಂದರು. ಹಾನಗಲ್ ತಾಲೂಕಿನಲ್ಲಿ ಎಷ್ಟು ಮನೆಗಳನ್ನ ಕಟ್ಟಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಕಳೆದ ತಿಂಗಳು ನಾನು ಐದು ಲಕ್ಷ ಮನೆಗಳನ್ನ ಮಂಜೂರು ಮಾಡಿದ್ದೇನೆ. ಹಾನಗಲ್ ತಾಲೂಕಿಗೆ 7400 ಮನೆಗಳನ್ನ ಮಂಜೂರು ಮಾಡಿದ್ದೇವೆ‌. ಬಡವರ ಮನೆ ಕಟ್ಟೋ ಕೊಡುಗೆ, ಕೆರೆಗಳಿಗೆ ನೀರು ತುಂಬೋ ಕೊಡುಗೆ. ಕೋವಿಡ್ ಸಮಯದಲ್ಲಿ ಜನರ ರಕ್ಷಣೆ ಮಾಡೋ ಕೊಡುಗೆ ಕೊಟ್ಟಿದ್ದೇವೆ. ಇಷ್ಟೆಲ್ಲ ಇದ್ದರೂ ಸಿದ್ದರಾಮಯ್ಯ ಬಿಜೆಪಿಯವರಿಗೆ ಏನು ಕೊಡುಗೆ ಕೊಟ್ಟಿದ್ದೀರಿ ಅಂತಾರೆ.ಎಲ್ಲ ಸಮುದಾಯಗಳನ್ನ ಸಮನಾಗಿ ನೋಡುವಂಥಾ ಸರ್ಕಾರ ನಮ್ಮದು. ಯಾವುದೇ ಸಮುದಾಯಕ್ಕೆ ಅನ್ಯಾಯ ಆಗಲು ನಾನು ಬಿಡೋದಿಲ್ಲ. ಎಲ್ಲರಿಗೂ ನ್ಯಾಯ ಕೊಡೋ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

Tags: Basavaraj BommaiBJPBy-electionCongress PartyCovid 19hanagalsindhagiಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಜೈಲಿಗೆ ಕಳುಹಿಸುತ್ತೇವೆ ಎಂದು ಬೆದರಿಸಿ ಬಿಜೆಪಿ ಹೈಕಮಾಂಡ್ ಬಿಎಸ್‌ವೈ ರಾಜೀನಾಮೆ ಪಡೆದಿದೆ: ಸಿದ್ದರಾಮಯ್ಯ

Next Post

ಬಿಎಂಟಿಸಿಯಲ್ಲಿ ಸ್ಪೇರ್ ಪಾರ್ಟ್ಸ್ ಖರೀದಿ ಮಾಡಲು ಹಣ ಇಲ್ವಾ? : ಬ್ರೇಕ್ ಫೇಲ್ ಆಗಿ ಆಕ್ಸಿಡೆಂಟ್ ಆದ್ರೆ ಅಮಾಯಕರ ಪ್ರಾಣಕ್ಕೆ ಯಾರು ಹೊಣೆ?

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಬಿಎಂಟಿಸಿಯಲ್ಲಿ ಸ್ಪೇರ್ ಪಾರ್ಟ್ಸ್ ಖರೀದಿ ಮಾಡಲು ಹಣ ಇಲ್ವಾ? : ಬ್ರೇಕ್ ಫೇಲ್ ಆಗಿ ಆಕ್ಸಿಡೆಂಟ್ ಆದ್ರೆ ಅಮಾಯಕರ ಪ್ರಾಣಕ್ಕೆ ಯಾರು ಹೊಣೆ?

ಬಿಎಂಟಿಸಿಯಲ್ಲಿ ಸ್ಪೇರ್ ಪಾರ್ಟ್ಸ್ ಖರೀದಿ ಮಾಡಲು ಹಣ ಇಲ್ವಾ? : ಬ್ರೇಕ್ ಫೇಲ್ ಆಗಿ ಆಕ್ಸಿಡೆಂಟ್ ಆದ್ರೆ ಅಮಾಯಕರ ಪ್ರಾಣಕ್ಕೆ ಯಾರು ಹೊಣೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada