ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿರುವ (Belgaum Rural Constituency) ಐತಿಹಾಸಿಕ ರಾಜಹಂಸಗಡ (Rajahamsagada) ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು (Statue of Chhatrapati Shivaji Maharaj) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು (Chief Minister Basavaraja Bommai) ರಿಬ್ಬನ್ ಕಟ್ ಮಾಡುವುದರ ಮೂಲಕ ಶಿವಾಜಿ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ. ಶಿವಾಜಿ ಪ್ರತಿಮೆ ಎದುರು ನಗಾರಿ ಬಾರಿಸಿ ಪ್ರತಿಮೆಗೆ ಹೂವು ಸಮರ್ಪಿಸಿದ್ರು, ವೇದಿಕೆ ಕಾರ್ಯಕ್ರಮದಲ್ಲಿ ಸಚಿವ ಗೋವಿಂದ ಕಾರಜೋಳ, (Minister Govinda Karajola) ಸಂಸದೆ ಮಂಗಲಾ ಅಂಗಡಿ, ಶಾಸಕರಾದ ರಮೇಶ್ ಜಾರಕಿಹೊಳಿ, ಅಭಯ್ ಪಾಟೀಲ್, ಅನಿಲ್ ಬೆನಕೆ ಭಾಗಿಯಾಗಿದ್ದು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ (Congress MLA Lakshmi Hebbalkar) ಗೈರಾಗಿದ್ದಾರೆ.
ಜಿಲ್ಲಾಡಳಿತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆ.ಆರ್.ಐ.ಡಿ.ಎಲ್. ಸಹಯೋಗದೊಂದಿಗೆ ರಾಜಹಂಸಗಡದ ಕೋಟೆಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ, ಮುಖ್ಯಮಂತ್ರಿಗಳು ಶಿವಾಜಿ ಪ್ರತಿಮೆಯ್ನು ಅನಾವರಣಗೊಳಿಸಿದರು.
ಶಿವಾಜಿ ಪ್ರತಿಮೆ ಅನಾವರಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಡುವೆ ಸಂಘರ್ಷದ ಕಿಡಿ ಹೊತ್ತಿಸಿದ್ದು, ಇದರ ನಡುವಲ್ಲೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರತಿಮೆಯನ್ನು ಅನಾವರಣ ಮಾಡಿದ್ದಾರೆ.
ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪತ್ರಿಕಾ ಪ್ರಕಟಣಿ ಕೊಟ್ಟಿದ್ದರು 5 ರಂದು ದೊಡ್ಡ ಮಟ್ಟದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಕರಸಿ ಅನಾವರಣಿ ಮಾಡತ್ತೇವೆ ಎಂದು ಹೇಳಿದ್ರೆ ಇಲ್ಲ ಇದು ಸರ್ಕಾರದ ಹಣದಲ್ಲಿ ಆಗಿರೋ ಪ್ರತಿಮೆ ಆ ಕಾರಣಕ್ಕಾಗಿ ಸರ್ಕಾರದ ವತಿಯಿಂದ ಉದ್ಘಾಟನೆ ಆಗುಬೇಕು ಜಿಲ್ಲಾ ಆಡಳಿತ ಉಸ್ತುವರಿ ಮಾಡಬೇಕು ಎಂದು ಪಟ್ಟು ಇಡಿದಿದ್ದರು ಆದರ ಭಾಗವಾಗಿ ಇಂದು ಛತ್ರಪತಿ ಶಿವಾಜಿ ಮಹಾರಾಜರ ಬೃಹತ್ ಪತ್ರಿಮೆಯ ಅನಾವರಣಿ ಮಾಡಲಾಯಿತ್ತು .
ಶಿವಾಜಿ ಈ ದೇಶ ಕಂಡ ಅಪ್ರತಿಮ ನಾಯಕ. ಬೆಳಗಾವಿಯ ರಾಜಹಂಸಗಡ ಕೋಟೆಯಲ್ಲಿ ಶಿವಾಜಿ ಪ್ರತಿಮೆ ಅನಾವರಣ ಮಾಡಲಾಗಿದೆ. ಹಿಂದೂ ಸಾಮ್ರಾಜ್ಯ ಉಳಿಸಲು ಶಿವಾಜಿ ಮಹಾರಾಜರ ಪಾತ್ರ ದೊಡ್ಡದು. ತಮ್ಮ ಹೃದಯದಲ್ಲಿ ಛಲ, ಧೈರ್ಯ ಎಲ್ಲವನ್ನೂ ತುಂಬಿಕೊಂಡಿದ್ದರು. ದೇಶ ಕಾಪಾಡಲು ಮೊಟ್ಟ ಮೊದಲು ಹೋರಾಟ ಮಾಡಿದ್ದು ಶಿವಾಜಿ ಎಂದು ಹೇಳಿದ್ರು .
ಇನ್ನು ರಾಜಹಂಸಗಡ ಕೋಟೆಯಲ್ಲಿ ಮಾಡಿದ್ದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮಾಡಲಾಗಿದೆ. ಗಾರ್ಡನ್, ಕೋಟೆ ನವೀಕರಣ, ನೀರಿನ ವ್ಯವಸ್ಥೆ ಸೇರಿದಂತೆ ಹಲವು ಕಾರ್ಯಕ್ರಮ ಉದ್ಘಾಟಿಸಲಾಗಿದೆ. ಇನ್ನು ಶಿವಾಜಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, 2008 ರಲ್ಲೇ 4.5 ಕೋಟಿ ರೂಪಾಯಿ ಬಿಡುಗಡೆ ಆಗಿತ್ತು. ಕೆಲವರ ಕಾಲದಲ್ಲಿ ಅಭಿವೃದ್ಧಿ ಆಗಲ್ಲ, ಮಾತಾಡುವುದೇ ಕೆಲಸ. ಕೋಟೆ ಅಭಿವೃದ್ಧಿಗೆ ಹೆಚ್ಚುವರಿಯಾಗಿ 5 ಕೋಟಿ ಅನುದಾನ ಕೊಡ್ತೇನೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.
.
ಇ