ರಾಜ್ಯ ರಾಜಧಾನಿಯ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಸೋಮವಾರ ವಿಧಾನಸೌಧ ಬ್ಯಾಂಕ್ವೆಟ್ ಹಾಲ್ನಲಿ ನಡೆದ 513ನೇ ಕೆಂಪೇಗೌಡ ಜಯಂತ್ಯೋತ್ಸವ ಕಾರ್ಯಕ್ರಮವನ್ನ ಉದ್ದೇಶಿಸಿ ಮಾತನಾಡಿದ ಬೊಮ್ಮಾಯಿ 2017ರಲ್ಲೇ ಕೆಂಪೇಗೌಡರ ಪ್ರತಿಮೆಯನ್ನು ಸ್ಥಾಪಿಸಲು ಬಿಬಿಎಂಪಿ ಸ್ಥಳವನ್ನು ಗುರುತಿಸಿ ಅನುದಾನವನ್ನ ಮೀಸಲಿಟ್ಟಿತ್ತು ಆದರೆ, ಕಾರಣಾಂತರಗಳಿಂದ ಪ್ರತಿಮೆ ಸ್ಥಾಪನೆಯಾಗಿಲ್ಲ ಮುಂದಿನ ಕೆಂಪೇಗೌಡ ಜಯಂತಿಯ ಒಳಗಾಗಿ ಪ್ರತಿಮೆಯನ್ನ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರ ಪೀಠದ ನಂಜಾವಧೂತ ಸ್ವಾಮೀಜಿಯ ಕೋರಿಕೆಗೆ ಮುಖ್ಯಮಂತ್ರಿ ಬೊಮ್ಮಾಯಿ ಸಕರಾತ್ಮಕವಾಗಿ ಪ್ರತಿಕ್ರಯಿಸಿದ್ದಾರೆ.
ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾಣ ನಿಲ್ಧಾಣದಲ್ಲಿ ನಿರ್ಮಾಣವಾಗುತ್ತಿರುವ 108 ಅಡಿ ಪ್ರತಿಮೆ ಸ್ಥಾಪನೆ ಕಾಮಗಾರಿ ಅಂತಿಮ ಹಂತದಲ್ಲಿದ್ದು ಪ್ರಧಾನಿ ಮೋದಿಯವರಿಂದ ಉದ್ಘಾಟಿಸುವ ಬಗ್ಗೆ ಚರ್ಚಿಸಲಾಗುತ್ತಿದೆ ಎಂದಿದ್ದಾರೆ.






