ಸಿಎಂ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ (45) ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಸೋಮವಾರ ಬೆಳಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡುವ ವೇಳೆ ಕುಸಿದುಬಿದ್ದಿದ್ದರು. ಕೂಡಲೇ ಅವರನ್ನು ಬೆಂಗಳೂರಿನ ನಾಗರಭಾವಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾದರೂ ದಾರಿ ಮಧ್ಯದಲ್ಲೇಢ ಸಾವಿಗೀಡಾಗಿದ್ದಾರೆ.

ಗುರುಲಿಂಗ ಸ್ವಾಮಿ ಹೊಳಿಮಠ ಅವರು ರಾಜ್ಯದ ವಿವಿಧ ಪತ್ರಿಕೆ ಹಾಗೂ, ಟಿವಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದರು. ಸಿಎಂ ಬೊಮ್ಮಾಯಿ ಅವರು ಗೃಹ ಸಚಿವರಾಗಿದ್ದಾಗಲೂ ಅವರ ಮಾಧ್ಯಮ ಕಾರ್ಯದರ್ಶಿಯಾಗಿ ಅವರು ಕಾರ್ಯನಿರ್ವಹಿಸಿದ್ದರು.