• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಹಿರಂಗ!!

ಪ್ರತಿಧ್ವನಿ by ಪ್ರತಿಧ್ವನಿ
July 5, 2024
in Top Story, ಅಭಿಮತ, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಹಿರಂಗ!!
Share on WhatsAppShare on FacebookShare on Telegram

ಮೈಸೂರು: ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಬಯಲಾಗಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ADVERTISEMENT

ಮೈಸೂರಿನಲ್ಲಿ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಯಾಕೆ ಮತ್ತು ಹೇಗೆ? ಇದರ ಹಿಂದೆ ಸಿಎಂ ಕುರ್ಚಿ ಮೇಲೆ ಟವಲ್ ಹಾಕಿರುವವರ ಪಾತ್ರವಿದೆ. ಸೀಡಿ ಫ್ಯಾಕ್ಟರಿ ಬಂದ್ ಆಯಿತು. ಈಗ ಮುಡಾ ಫ್ಯಾಕ್ಟರಿ ಶುರುವಾಗಿದೆ ಎಂದು ಯಾರ ಹೆಸರನ್ನೂ ಹೇಳದೇ ಕೇಂದ್ರ ಸಚಿವರು ಟೀಕಾ ಪ್ರಹಾರ ನಡೆಸಿದರು.

ಬಿಜೆಪಿ ಸ್ನೇಹಿತರು ಈ ಬಗ್ಗೆ ಹೋರಾಟ ಮಾಡುತ್ತಿದ್ದಾರೆ. ಆದರೆ ಹಗರಣ ಆಚೆ ಬರಲು ಕಾಂಗ್ರೆಸ್‌ನವರೇ ಒಳಗೊಳಗೆ ಕುಮ್ಮಕ್ಕು ಕೊಡುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಇದೆ. ಸಿಎಂ ಪತ್ನಿಗೆ ಆ ಜಾಗ ಹೇಗೆ ಬಂತು ಅಂತಲೂ ನನಗೆ ಗೊತ್ತಿದೆ. 62 ಕೋಟಿ ರೂ. ಪರಿಹಾರ ಕೇಳುವ ಸಿಎಂ ಅವರು ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ರೈತರಿಗೂ ಪರಿಹಾರ ಕೊಡಿಸಲಿ ಎಂದು ಕೇಂದ್ರ ಸಚಿವರು ಒತ್ತಾಯ ಮಾಡಿದರು.

62 ಕೋಟಿ ಪರಿಹಾರವನ್ನು ಸರಕಾರ ಕೊಡಬೇಕು ಎನ್ನುತ್ತಿದ್ದಾರೆ ಸಿಎಂ. ಹೀಗೆ ಹೇಳುವ ಸಿದ್ದರಾಮಯ್ಯ ಅವರಿಗೆ ಜನರ ಕಷ್ಟ ಗೊತ್ತಿಲ್ಲವೇ? ರಾಜ್ಯದ ಬಡವರ ನೋವು ಗೊತ್ತಾಗುತ್ತಿಲ್ಲವೇ? ರಾತ್ರೋರಾತ್ರಿ ಭೂಸ್ವಾಧೀನ ಮಾಡಿಕೊಳ್ಳುತ್ತಾರೆ. ಅವರನ್ನು ಬೀದಿಗೆ ನಿಲ್ಲಿಸುತ್ತಾರೆ. ಪರಿಹಾರ ಮಾತ್ರ ಕೊಡುವುದಿಲ್ಲ. ನೀವು ಮಾತ್ರ ದೊಡ್ಡ ಮೊತ್ತದ ಪರಿಹಾರ ಕೇಳುತ್ತಿದ್ದೀರಿ. ಇದು ಯಾವ ನ್ಯಾಯ ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಸರ್ಕಾರದಿಂದ ದ್ವೇಷ ರಾಜಕಾರಣ

ಜನತಾ ದರ್ಶನ ವಿಚಾರದಲ್ಲಿ ರಾಜ್ಯ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ನೇರ ಆರೋಪ ಮಾಡಿದ್ದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ನನ್ನ ಜನತಾ ದರ್ಶನದ ಬಗ್ಗೆಯೇ ಸಚಿವ ಸಂಪುಟದ ಸಭೆ ಕರೆದು ಚರ್ಚೆ ಮಾಡಿದ್ದಾರೆ. ಸರ್ಕಾರ ಅಧಿಕಾರಿಗಳನ್ನು ನನ್ನಿಂದ ದೂರ ಇಡಬಹುದು. ಆದರೆ, ಜನರನ್ನು ನನ್ನಿಂದ ದೂರ ಮಾಡಲು ಸಾಧ್ಯವಿಲ್ಲ. ಈ ಹಿಂದೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರು ಈ ರೀತಿ ಸಭೆ ಮಾಡಿದ್ದಾಗ ಏನು ನಡೆಯಿತು? ಚುನಾವಣೆಗೆ ಇನ್ನೆರಡು ಮೂರು ತಿಂಗಳು ಇದ್ದಾಗ ಜನ ಸ್ಪಂದನ ಅಂತ ನಡೆಯಿತಲ್ಲ, ಆಗ ಅವರ ಹಿಂದೆ ಅಧಿಕಾರಿಗಳು ಇರಲಿಲ್ಲವೇ? ಎಂದು ಸರ್ಕಾರದ ವಿರುದ್ಧ ಕೇಂದ್ರ ಸಚಿವರು ವಾಗ್ದಾಳಿ ನಡೆಸಿದರು.ಈಗ ಜನತಾ ದರ್ಶನ ತಪ್ಪಿಸಲು ಸರ್ಕಾರ ಮುಂದಾಗಿದೆ. ಯಾವುದೇ ಕಾರಣಕ್ಕೂ ಜನತಾ ದರ್ಶನ ನಿಲ್ಲಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Tips to store jaggery in monsoon: ಮಳೆಗಾಲದಲ್ಲಿ ಬೆಲ್ಲವನ್ನ ಶೇಖರಣೆ ಮಾಡಲು ಬೆಸ್ಟ್ ಟಿಪ್ಸ್.!

Next Post

ಬೀದರ್‌ನ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಶಿಲ್ಪಾ ಶರ್ಮಾ

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
Next Post
ಬೀದರ್‌ನ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಶಿಲ್ಪಾ ಶರ್ಮಾ

ಬೀದರ್‌ನ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಶಿಲ್ಪಾ ಶರ್ಮಾ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada