ಇಂದು ಸಿಎಂ ಸಿದ್ದರಾಮಯ್ಯ (Cm Siddaramaiah), ಡಿಸಿಎಂ ಡಿ.ಕೆ ಶಿವಕುಮಾರ್ (Dk Shivukumar) ದೆಹಲಿಗೆ (Delhi) ಪ್ರಯಾಣ ಬೆಳೆಸಲಿದ್ದಾರೆ.ಬೆಳಗ್ಗೆ11.45ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಳಲಿರುವ ಸಿಎಂ, ಡಿಸಿಎಂ ಸಂಜೆ ಐಟಿಸಿ ಮೌರ್ಯ ಹೋಟೆಲ್‌ನಲ್ಲಿ ಮಾಹಿತಿ ಮತ್ತ ತಂತ್ರಜ್ಞಾನ ಇಲಾಖೆ ವತಿಯಿಂದ ಆಯೋಜಿಸಿರುವ ‘ಬ್ರಿಡ್ಜ್ ಟು ಬೆಂಗಳೂರು’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಇದಾದ ನಂತರ ವಿವಿಧ ದೇಶಗಳ ರಾಯಭಾರಿಗಳೊಂದಿಗೆ ನಡೆಯುವ ಸಂವಾದ ಕಾರ್ಯಕ್ರಮದಲ್ಲಿ ಉಭಯ ನಾಯಕರು ಮಾತನಾಡಲಿದ್ದಾರೆ.ಆ ಬಳಿಕ ರಾತ್ರಿ ಕರ್ನಾಟಕ ಭವನದಲ್ಲಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ವಾಸ್ತವ್ಯ ಹೂಡಲಿದ್ದಾರೆ.

ನಾಳೆ ಎಐಸಿಸಿ ಕಾನೂನು, ಮಾಹಿತಿ ಹಕ್ಕು ವಿಭಾಗ ವಿಜ್ಞಾನ ಭವನದಲ್ಲಿ ಆಯೋಜಿಸಿರುವ ‘ಸಾಮಾಜಿಕ ನ್ಯಾಯ, ಡಾ.ಬಿ.ಆರ್. ಅಂಬೇಡ್ಕರ್ ದೃಷ್ಟಿಕೋನ’ ಕುರಿತಾ ವಿಚಾರ ಸಂಕಿರಣ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ಕೂಡ ಸಿಎಂ ದ್ದರಾಮಯ್ಯ,ಡಿ.ಕೆ. ಶಿವಕುಮಾರ್ ಭಾಗಿಯಾಗಲಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯ ಅವರ ಜೊತೆ ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ಭಾಗಿಯಾಗಲಿದ್ದಾರೆ.











