
ದೆಹಲಿಯಲ್ಲಿ (Delhi) ತಂಗಿರುವ ಸಿಎಂ ಸಿದ್ದರಾಮಯ್ಯ (Cm siddaramaiah) ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ (Dk Shivakumar) ಹೈಕಮಾಂಡ್ ಇಂದು ಕಾಂಗ್ರೆಸ್ ಹೈಕಮ್ಯಾಂಡ್ (Congress highcommand) ನಾಯಕರ ಜೊತೆ ಮಹತ್ವದ ಸಮಾಲೋಚನೆ ನಡೆಸಲಿದ್ದಾರೆ. ಈ ವೇಳೆ ಪ್ರತ್ಯೇಕವಾಗಿ ರಾಹುಲ್‌ಗಾಂಧಿಯನ್ನ (Rahul gandhi) ಭೇಟಿಯಾಗಿ ತಮ್ಮ ಅಭಿಪ್ರಾಯ ತಿಳಿಸಲಿದ್ದಾರೆ.

ರಾಜ್ಯ ಕಾಂಗ್ರೆಸ್‌ನಲ್ಲಿ ಇತ್ತೀಚೆಗೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚಿಸಲಿದ್ದಾರೆ. ಇದೆಲ್ಲದಕ್ಕಿಂತಲೂ ಮುಖ್ಯವಾಗಿ ನಾಯಕತ್ವದ ಬಗ್ಗೆ ಪ್ರಮುಖವಾಗಿ ರಾಹುಲ್‌ಗಾಂಧಿಯೊಂದಿಗೆ ಸಿಎಂ ಮತ್ತು ಡಿಸಿಎಂ ಚರ್ಚಿಸಲಿದ್ದಾರೆ ಎನ್ನಲಾಗಿದೆ.

ಇತ್ತ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್ ದೀಪ್ ಸಿಂಗ್ ಸುರ್ಜೇವಾಲಾ ಶಾಸಕರ ಜೊತೆ ಒನ್ ಟು ಒನ್ ಮೀಟಿಂಗ್ ಹಿಂದೆ ಸಾಕಷ್ಟು ಚರ್ಚೆ ಶುರುವಾಗಿದೆ. ನಾಯಕತ್ವ ಬದಲಾವಣೆಯ ಚರ್ಚೆ ಬೆನ್ನಲ್ಲೇ ಶಾಸಕರ ಜೊತೆ ಒನ್ ಟು ಒನ್ ಸಭೆ ನಡೆಸಿರುವ ಬಗ್ಗೆ ತೀವ್ರ ಕುತೂಹಲ ಮೂಡಿಸಿದೆ.

ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಖುದ್ದು ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಿದ್ದು, ಇಂದು ಶಾಸಕರ ಅಭಿಪ್ರಾಯದ ವರದಿಯನ್ನ ಸುರ್ಜೇವಾಲಾ ಕಾಂಗ್ರೆಸ್ ವರಿಷ್ಠರ ಮುಂದಿಡಲಿದ್ದಾರೆ.