ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy stadium) ಕಾಲ್ತುಳಿತ ಸಂಭವಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಹೈಕಮಾಂಡ್ ಗೆ (Congress highcommand) ಮಾಹಿತಿ ನೀಡಲು ಸಿಎಂ ಸಿದ್ದರಾಮಯ್ಯ (Cm siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್ (Dk Shivakumar) ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.

ಇಂದು ಬೆಳಿಗ್ಗೆ ಬೆಂಗಳೂರಿನ ಕಾವೇರಿ ನಿವಾಸದಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಬೆ.7 ಗಂಟೆಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಯತ್ತ ಹೊರಟಿದ್ದಾರೆ ಎನ್ನಲಾಗಿದೆ.ಬೆ.11 ಗಂಟೆಗೆ ರಾಹುಲ್ ಗಾಂಧಿಯನ್ನು ಭೇಟಿ ಸಿಎಂ & ಡಿಸಿಎಂ ಭೇಟಿಯಾಗಲಿದ್ದಾರೆ.

ಈ ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರದ ಪಾತ್ರವೇನು..ಆ ನಂತರದ ಬೆಳವಣಿಗೆಗಳು, ಲೋಪವಾಗಿದು ಯಾರಿಂದ..? ಜೊತೆಗೆ ತಪ್ಪಿತಸ್ಥ ಅಧಿಕಾರ ವಿರುದ್ಧ ತೆಗೆದುಕೊಂಡ ಕ್ರಮಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಹೈಕಮಾಂಡ್ ಗೆ ಸಂಪೂರ್ಣ ಮಾಹಿತಿ ನೀಡಲಿದ್ದಾರೆ.
ಈ ಘಟನೆ ರಾಷ್ಟ್ರವ್ಯಾಪಿ ಚರ್ಚೆಯಾಗಿದ್ದು, ಅವಘಡದ ಕುರಿತು ಕಾಂಗ್ರೆಸ್ ಹೈಕಮಾಂಡ್ ಗರಂ ಆಗಿದ್ದು, ತಪ್ಪಿತಸ್ಥರಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ ಎನ್ನಲಾಗಿದೆ. ಹೀಗಾಗಿ ಇಂದಿನ ಈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.