ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal challengers) ಐಪಿಎಲ್ (ipl) ಟ್ರೋಫಿ ಗೆದ್ದ ಸಂಭ್ರಮ ಆಚರಿಸಲು ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದ ಕಾರಣ ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy stadium) ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (cm siddaramaiah) ವಿರುದ್ಧ ಈಗ ಮತ್ತೆ ರಾಜ್ಯಪಾಲರಿಗೆ ದೂರು ನೀಡಲಾಗಿದೆ.

ಹೌದು ರಾಯಲ್ ಚಾಲೆಂಜರ್ಸ್ ಗೆಲುವಿನ ಖುಷಿಗೆ, ಸಂಭ್ರಮಾಚರಣೆ ಮಾಡಲು ಸ್ವತಃ ಕರ್ನಾಟಕದ ಮುಖ್ಯ ಮಂತ್ರಿ ಸಿಎಂ ಸಿದ್ದರಾಮಯ್ಯ ಸೋಶಿಯಲ್ ಮೀಡಿಯಾ ಮತ್ತು ಮೀಡಿಯಾ ಮೂಲಕ ಆಹ್ವಾನ ನೀಡಿದ್ದಾರೆ ಆಹ್ವಾನಿಸಿದ್ದಾರೆ. ಸರ್ಕಾರದ ವತಿಯಿಂದ ಯಾವುದೇ ಸರಿಯಾದ ವ್ಯವಸ್ಥೆ ಮಾಡದೇ, ನಿರ್ಲಕ್ಷ್ಯ ತೋರಿದ್ದಕ್ಕೆ ಈ ದುರಂತ ಸಂಭವಿಸಿದೆ ಎಂದು ಈ ದುರಂತಕ್ಕೆ ಸಿಎಂ ರನ್ನು ಹೊಣೆಗಾರರನ್ನಾಗಿ ಮಾಡಿ ದೂರು ನೀಡಲಾಗಿದೆ.

ಹೀಗಾಗಿ ಮಾನ್ಯ ಮುಖ್ಯಮಂತ್ರಿಗಳ ಮೇಲೆ ರಾಜ್ಯಪಾಲರು ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಬೆಂಗಳೂರಿನ ಕೊಟ್ಟಿಗೆಪಾಳ್ಯದ ನಿವಾಸಿಯಾಗಿರುವ ಗಿರೀಶ್ ಕುಮಾರ್ ಎಂಬ ವ್ಯಕ್ತಿ ಈ ರೀತಿಯ ಪತ್ರದ ಮೂಲಕ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.