• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೈತರಿಗೆ ಸಿಹಿ ಸುದ್ದಿ: ಸಬ್ಸಿಡಿಗಾಗಿ ₹1033.60 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಿದ ಸಿಎಂ

ಪ್ರತಿಧ್ವನಿ by ಪ್ರತಿಧ್ವನಿ
November 27, 2025
in Top Story, ಕರ್ನಾಟಕ, ರಾಜಕೀಯ
0
ರೈತರಿಗೆ ಸಿಹಿ ಸುದ್ದಿ: ಸಬ್ಸಿಡಿಗಾಗಿ ₹1033.60 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಿದ ಸಿಎಂ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ ರೂ.1033.60 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಾಗಿದ್ದು, ಇಂದು ಚಾಲನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

MLA BR Patil  : ಬಿಹಾರ ಮಾದರಿ ಮದ್ಯ ನಿಷೇಧಕ್ಕೆ ಒತ್ತಾಯಿಸಿ ಗಮನ ಸೆಳೆದ ಶಾಸಕ ಬಿ.ಆರ್.ಪಾಟೀಲ್ #pratidhvani

ಬೆಳೆ ಹಾನಿ ಸಂಭವಿಸಿದ 14.24 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ. 1033.60 ಕೋಟಿ ಹೆಚ್ಚುವರಿ ಪರಿಹಾರ ನೀಡುವ ಕಾರ್ಯಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರ ಪರವಾಗಿದ್ದು, ಬೆಳೆ ಹಾನಿಗೊಳಗಾದ ರೈತರಿಗೆ ಹೆಚ್ಚಿನ ನೆರವು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಇನ್ಪುಟ್ ಸಬ್ಸಿಡಿಗಳ ದರಗಳನ್ನು ಹೆಚ್ಚಿಸಿದೆ.

ಗರಿಷ್ಟ 2 ಹೆಕ್ಟೇರ್‌ಗೆ ಸೀಮಿತವಾಗಿ, ಮಳೆಯಾಶ್ರಿತ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ. 8500 ರಿಂದ ರೂ. 17 ಸಾವಿರ, ನೀರಾವರಿ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ.17ಸಾವಿರದಿಂದ ರೂ.25,500 ಹಾಗೂ ಬಹು ವಾರ್ಷಿಕ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ.22,500ರಿಂದ ರೂ. 31 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದು ವಿವರಿಸಿದರು.

ಎಸ್‌ಡಿಆರ್‌ಎಫ್‌ ಮಾನದಂಡಗಳ ಪ್ರಕಾರ 14.24 ಲಕ್ಷ ರೈತರಿಗೆ ಇನ್ಪುಟ್ ಸಬ್ಸಿಡಿಯಾಗಿ ಈಗಾಗಲೇ ರೂ. 1218.03 ಕೋಟಿ ವಿತರಿಸಲಾಗಿದೆ. ಇದರ ಜೊತೆಗೆ ರಾಜ್ಯ ನಿಧಿಯಿಂದ ರೂ. 1033.60 ಕೋಟಿಯನ್ನು ಟಾಪ್ ಅಪ್ ರೂಪದಲ್ಲಿ ಹೆಚ್ಚುವರಿಯಾಗಿ ನೀಡಲಾಗುತ್ತಿದೆ. ಒಟ್ಟಾರೆಯಾಗಿ ಪರಿಹಾರ ಪಾವತಿ ಪ್ರಕ್ರಿಯೆಯಲ್ಲಿರುವ ಪಾವತಿಗಳನ್ನು ಒಳಗೊಂಡಂತೆ ರೂ.2251.63 ಕೋಟಿ ಯನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಆಗಲಿದೆ ಎಂದರು.

ಮುಂಗಾರು ಅವಧಿಯಲ್ಲಿ ದಾಖಲೆಯ 82.56 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಆದರೆ ಜೂನ್ನಿಂದ ಸೆಪ್ಟಂಬರ್ ಅವಧಿಯಲ್ಲಿ ಉಂಟಾದ ಅತಿವೃಷ್ಟಿಯಿಂದಾಗಿ 14.58 ಲಕ್ಷ ಹೆಕ್ಟೇರ್ಗಿಂತ ಹೆಚ್ಚಿನ ಪ್ರದೇಶದ ಬೆಳೆ ಹಾನಿ ಉಂಟಾಗಿದ್ದು, ಇದರಿಂದ ಅಂದಾಜು ರೂ.10,748 ಕೋಟಿ ಬೆಳೆ ಹಾನಿ ಅಂದಾಜಿಸಲಾಗಿದೆ. ಮುಖ್ಯವಾಗಿ ತೊಗರಿ ಬೇಳೆ 5.36 ಲಕ್ಷ ಹೆಕ್ಟೇರ್, ಹೆಸರು ಕಾಳು 2.63 ಲಕ್ಷ ಹೆಕ್ಟೇರ್, ಹತ್ತಿ 2.68 ಲಕ್ಷ ಹೆಕ್ಟೇರ್ ಮತ್ತು ಮೆಕ್ಕೆಜೋಳ 1.21 ಲಕ್ಷ ಹೆಕ್ಟೇರ್ ಹಾನಿ ಉಂಟಾಗಿದೆ.

Pratap Simha on Siddarmaiah: ಸಿದ್ದು-ಡಿಕೆ ಕುರ್ಚಿ ಕಾಳಗದಲ್ಲಿ ಗೆಲ್ಲೋರು ಯಾರು- ಪ್ರತಾಪ್ ಸಿಂಹ ಮಾತು ಕೇಳಿ

ಒಂಭತ್ತು ಜಿಲ್ಲೆಗಳಲ್ಲಿ ಹೆಚ್ಚಿನ ಬೆಳೆ ಹಾನಿ ಉಂಟಾಗಿದೆ. ಮುಖ್ಯವಾಗಿ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಬೆಳೆಗಳು ಕೊಯ್ಲಿನ ಹಂತಕ್ಕೆ ಬಂದ ಸಂದರ್ಭದಲ್ಲಿ ಭಾರೀ ಮಳೆಯಿಂದ ಹೆಚ್ಚಿನ ಹಾನಿ ಸಂಭವಿಸಿದೆ. ಕೃಷ್ಣಾ ಮತ್ತು ಭೀಮಾ ಜಲಾನಯನ ಪ್ರದೇಶಗಳಲ್ಲಿ ನಿರಂತರ ಒಳ ಹರಿವು ಹೆಚ್ಚಳದಿಂದ ಕಲಬುರಗಿ, ಯಾದಗಿರಿ ಮತ್ತು ಬೀದರ ಜಿಲ್ಲೆಗಳಲ್ಲಿ ತೊಗರಿ ಮತ್ತು ಹತ್ತಿ ಬೆಳೆಗಳಿಗೆ ವ್ಯಾಪಕ ಹಾನಿ ಉಂಟಾಗಿದೆ. ಬೆಳೆ ಹಾನಿಯನ್ನು ನಿಖರವಾಗಿ ಖಚಿತಪಡಿಸಲು ಜಂಟಿ ಸಮೀಕ್ಷೆ ನಡೆಸಿ ಹಾನಿಯನ್ನು ಅಂದಾಜಿಸಲಾಗಿದೆ. ಎಲ್ಲಾ ದತ್ತಾಂಶಗಳನ್ನು ಪರಿಹಾರ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಭೂಮಿ ಮತ್ತು ಫ್ರೂಟ್ಸ್ ತಂತ್ರಾಂಶದಲ್ಲಿ ಸಂಯೋಜಿಸಲಾಗಿದೆ.

 

ಬೆಳೆ ನಷ್ಟದ ಗ್ರಾಮವಾರು ಪಟ್ಟಿಯನ್ನು ಗ್ರಾಮ ಚಾವಡಿಗಳಲ್ಲಿ ಹಾಗೂ ಆನ್ಲೈನ್ನಲ್ಲಿ ಪ್ರಕಟಿಸಿ, ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿ, ಬಳಿಕ ನಷ್ಟ ಅನುಭವಿಸಿದ ರೈತರ ಪಟ್ಟಿಯನ್ನು ಅಂತಿಮಗೊಳಿಸಿದ ಬಳಿಕ ಇನ್ಪುಟ್ ಸಬ್ಸಿಡಿಯನ್ನು ನೇರವಾಗಿ ರೈತರಿಗೆ ವರ್ಗಾಯಿಸುವ ಪ್ರಕ್ರಿಯೆ ಆರಂಭಿಸಲಾಗಿದೆ. ಪ್ರಧಾನಮಂತ್ರಿಯವರನ್ನು ನವೆಂಬರ್ 17ರಂದು ಭೇಟಿ ಮಾಡಿ, ಬೆಳೆ ಹಾನಿ ಇನ್ಪುಟ್ ಸಬ್ಸಿಡಿಗೆ ಪ್ರತಿಕ್ರಿಯೆ ಹಾಗೂ ಪರಿಹಾರ ಅಡಿಯಲ್ಲಿ ರೂ. 614.90 ಕೋಟಿ ಹಾಗೂ ಹಾನಿಗೊಳಗಾದ ಮೂಲಸೌಕರ್ಯಗಳನ್ನು ಸರಿಪಡಿಸಲು PDNA (Recovery & Reconstruction) ಅಡಿಯಲ್ಲಿ ರೂ. 1,521.67 ಕೋಟಿ ಪರಿಹಾರ ಒದಗಿಸಲು ಮನವಿ ಸಲ್ಲಿಸಲಾಗಿದೆ. ಬೆಳೆ ಹಾನಿ ಪರಿಶೀಲಿಸಲು ಕೇಂದ್ರ ಸರ್ಕಾರ ಅಂತರ ಸಚಿವಾಲಯದ ಕೇಂದ್ರ ತಂಡವನ್ನು ರಚಿಸಿದ್ದು, ಈ ತಂಡ ಶೀಘ್ರದಲ್ಲೇ ಕರ್ನಾಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.

CM Siddaramaiah : ಸೌದಿ ಅರೇಬಿಯಾ ಗೆ  ನಂದಿನಿ ತುಪ್ಪ   ಕಳಸ್ತಿವಿ #pratidhvani #siddaramaiah #congress
Tags: CM SiddaramaiahFarmersKannadaKarnatakaKarnataka FarmersPolitics
Previous Post

ಸಿಎಂ ಬದಲಾವಣೆ ಚರ್ಚೆ ಬಗ್ಗೆ ಯತೀಂದ್ರ ಹೇಳಿದ್ದೇನು..?

Next Post

ಬೈಕ್‌ ಸವಾರನ ಬೇಜವಾಬ್ದಾರಿಗೆ ದಕ್ಷ, ಪ್ರಾಮಾಣಿಕ ಅಧಿಕಾರಿಯ ಜೀವ ಬಲಿಯಾಯ್ತಾ..?

Related Posts

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?
Top Story

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

by ಪ್ರತಿಧ್ವನಿ
August 29, 2026
0

ಬೆಂಗಳೂರು, ಆ. 28: ಪಕ್ಷಕ್ಕೆ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಜತೆ ಚರ್ಚಿಸಿ...

Read moreDetails
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

August 29, 2026
ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

August 29, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
Next Post
ಬೈಕ್‌ ಸವಾರನ ಬೇಜವಾಬ್ದಾರಿಗೆ ದಕ್ಷ, ಪ್ರಾಮಾಣಿಕ ಅಧಿಕಾರಿಯ ಜೀವ ಬಲಿಯಾಯ್ತಾ..?

ಬೈಕ್‌ ಸವಾರನ ಬೇಜವಾಬ್ದಾರಿಗೆ ದಕ್ಷ, ಪ್ರಾಮಾಣಿಕ ಅಧಿಕಾರಿಯ ಜೀವ ಬಲಿಯಾಯ್ತಾ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada