• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿರೋಧ ಪಕ್ಷದವರಿಗೆ ನನ್ನ ಸರ್ಕಾರವನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ- ಸಿಎಂ ಡಿ.ಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
August 21, 2026
in Top Story, ಕರ್ನಾಟಕ, ರಾಜಕೀಯ
0
ವಿರೋಧ ಪಕ್ಷದವರಿಗೆ ನನ್ನ ಸರ್ಕಾರವನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ- ಸಿಎಂ ಡಿ.ಕೆ ಶಿವಕುಮಾರ್
Share on WhatsAppShare on FacebookShare on Telegram

ಬೆಂಗಳೂರು: “ಹಣಕಾಸಿನ ವಿಚಾರದಲ್ಲಿ ಸರ್ಕಾರಕ್ಕೆ ಸಲಹೆ ಹಾಗೂ ಆದಾಯ ಸಂಗ್ರಹ ಹೆಚ್ಚಳಕ್ಕೆ ಮಾರ್ಗದರ್ಶನವಿರಲಿ” ಎಂದು ಸಿಎಂ ಡಿ.ಕೆ ಶಿವಕುಮಾರ್ ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಸಂವಾದ ಸಮ್ಮೇಳನ ಕಾರ್ಯಕ್ರಮದಲ್ಲಿ ಸಿಎಗಳಿಗೆ ಕರೆ ನೀಡಿದರು.

ADVERTISEMENT
Siddaramaiah : ಎಷ್ಟೋ ದಿನದ ನಂತರ ಮತ್ತೆ ರೊಚ್ಚಿಗೆದ್ದ ಸಿದ್ದರಾಮಯ್ಯ #pratidhvani

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಮ್ಮ ಸರ್ಕಾರ ತೆರೆದ ಪುಸ್ತಕ. ಹೊಸ ವಿಚಾರ, ಪರಿಹಾರಕ್ಕೆ ನಾವು ಮುಕ್ತರಾಗಿದ್ದೇವೆ. ನಮ್ಮ ತಪ್ಪುಗಳು, ಸಂಪನ್ಮೂಲ ಸೋರಿಕೆ ತಡೆಗಟ್ಟಲು ನಿಮ್ಮ ಸಲಹೆಗಳನ್ನು ನೀಡಿ. ನಿಂಬೆಗಿಂತ ಶ್ರೇಷ್ಠವಾದ ಹುಳಿ, ದುಂಬಿಗಿಂತ ಶ್ರೇಷ್ಠವಾದ ಕಪ್ಪು, ಶಿವನಿಗಿಂತ ದೊಡ್ಡ ದೇವರು, ನಂಬಿಕೆಗಿಂತ ದೊಡ್ಡ ಗುಣ ಮತ್ತೊಂದಿಲ್ಲ ಎಂದು ಸರ್ವಜ್ಞ ಹೇಳಿದ್ದಾರೆ. ನೀವು ನಂಬಿಕೆಯ ರಕ್ಷಕರು. ನಂಬಿಕೆ ಎಂಬುದು ನಿಮ್ಮ ರಕ್ತದಲ್ಲೇ ಬಂದಿದ್ದು, ನೀವು ಅದನ್ನು ಉಳಿಸಿಕೊಳ್ಳಬೇಕು. ನೀವು ಹೇಳಿದ್ದನ್ನು ನಾವು ನಂಬುತ್ತೇವೆ. ನೀವು ನಮ್ಮ ಬದುಕು, ಆಸ್ತಿ ರಕ್ಷಿಸಿ ಆದಾಯಕ್ಕೆ ಮಾರ್ಗದರ್ಶನ ನೀಡಬೇಕು. ನಮ್ಮ ತಪ್ಪುಗಳನ್ನು ನಿವಾರಣೆ ಮಾಡುವ ಸಾಮಾರ್ಥ್ಯ ನಿಮಗಿದೆ. ನೀವು ದೇಶ ಕಟ್ಟುತ್ತಿದ್ದು, ನಿಮ್ಮ ಬಗ್ಗೆ ದೇಶಕ್ಕೆ ಹೆಮ್ಮೆ ಇದೆ” ಎಂದು ಪ್ರಶಂಸಿಸಿದರು.

  “ಪ್ರಾಮಾಣಿಕ ತೆರಿಗೆ ಪಾವತಿದಾರರಿಗೆ ಅಧಿಕಾರಿಗಳು ಮಾನಸಿಕ ಕಿರುಕುಳ ನೀಡಿ ಕುಗ್ಗಿಸುತ್ತಾರೆ. ಯಾರು ಕಳ್ಳತನ ಮಾಡುತ್ತಾರೆ ಅವರಿಗೆ ಪ್ರಶ್ನೆ ಮಾಡುವುದಿಲ್ಲ. ಈ ದೇಶದಲ್ಲಿ 12 ಲಕ್ಷ ಉದ್ಯಮಿಗಳು ಈ ದೇಶವನ್ನು ತ್ಯಜಿಸಿದ್ದಾರೆ. ಐಟಿ, ಇಡಿ, ಸಿಬಿಐ ಸಹವಾಸ ಸಾಕು ಎಂದು ಹೋಗುತ್ತಿದ್ದಾರೆ. ತೊಂದರೆ ಕೊಡುವುದೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಕೆಲಸ. ಕೆಲವು ವರ್ಷಗಳ ಹಿಂದೆ ಗುಜರಾತ್ ಗೆ ಹೋಗಿದ್ದಾಗ ಅಲ್ಲಿ 70% ನಗದಿನಲ್ಲೇ ನಡೆಯುತ್ತಿದೆ. ಕೇವಲ 30% ಮಾತ್ರ ವೈಟ್ ಅಲ್ಲಿ ನಡೆಯುತ್ತಿದೆ. ನಮ್ಮ ಕರ್ನಾಟಕದಲ್ಲಿ 90% ವೈಟ್ ಮೂಲಕ ವ್ಯವಹಾರಗಳು ನಡೆಯುತ್ತಿವೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಾವು ಶಿಸ್ತುಬದ್ಧರಾಗಿದ್ದೇವೆ” ಎಂದರು.

Assembly session: ನಾಗೇಂದ್ರ ವಜಾಗೆ ಆಗ್ರಹಿಸಿ ಕಲಾಪದಲ್ಲಿ 5ನೇ ದಿನವೂ ವಿಪಕ್ಷ ಪ್ರತಿಭಟನೆ  #pratidhvani

“ಕರ್ನಾಟಕ ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿದ್ದು, ನಿಮ್ಮ ಮಾರ್ಗದರ್ಶನವಿಲ್ಲದೇ ಅವರು ಯಶಸ್ಸು ಸಾಧಿಸಲು ಸಾಧ್ಯವಿಲ್ಲ. ದಕ್ಷಿಣ ಭಾರತ ಇಡಿ ದೇಶದ ಪ್ರಗತಿಯ ಇಂಧನವಾಗಿದೆ. ದಕ್ಷಿಣ ಭಾರತವಿಲ್ಲದೆ ಭಾರತದ ಪ್ರಗತಿ ಸಾಧ್ಯವಿಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಮುಂದೆ ವಾದ ಮಂಡಿಸಿದೆವು. ಇಡೀ ವಿಶ್ವ ಭಾರತವನ್ನು ಬೆಂಗಳೂರು ಮೂಲಕ ನೋಡುತ್ತಿದೆ. ಬೆಂಗಳೂರಿನಲ್ಲಿ 2 ಲಕ್ಷ ವಿದೇಶಿ ಪಾಸ್ ಪೋರ್ಟ್ ದಾರರು ಕಾರ್ಯನಿರ್ವಹಿಸುತ್ತಿದ್ದಾರೆ. ಹೊರ ರಾಜ್ಯಗಳಿಂದ ಬರುವ ಬಂಡವಾಳ ಹೂಡಿಕೆದಾರರಿಗೆ ನೀವು ಉತ್ತಮ ಸಲಹೆ ನೀಡುತ್ತಿದ್ದೀರಿ. ಹೊಸ ಹೂಡಿಕೆ, ಉದ್ಯಮ, ಉದ್ಯೋಗ ಸೃಷ್ಟಿ, ಅನ್ವೇಷಣೆ, ರಫ್ತಿಗೆಗೆ ಕರ್ನಾಟಕ ಅತ್ಯುತ್ತಮ ಕೇಂದ್ರವಾಗಿದೆ” ಎಂದು ಹೇಳಿದರು.

ವಿರೋಧ ಪಕ್ಷದವರಿಗೆ ನನ್ನ ಸರ್ಕಾರವನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ

“ಈ ಕಾರ್ಯಕ್ರಮಕ್ಕೆ ಒಪ್ಪಿಕೊಂಡಾಗ ಅಧಿವೇಶನ ನಡೆಯುತ್ತದೆ ಎಂದು ನನಗೆ ಗೊತ್ತಿರಲಿಲ್ಲ. ಆದರೆ ಈಗ ಅಧಿವೇಶನ ನಡೆಯುತ್ತಿದೆ. ವಿರೋಧ ಪಕ್ಷದ ಬಿಜೆಪಿ ಸ್ನೇಹಿತರಿಗೆ ನನ್ನನ್ನು ಹಾಗೂ ನನ್ನ ಸರ್ಕಾರವನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನನ್ನ ಆಲೋಚನೆಗಳು ಸ್ಪಷ್ಟವಾಗಿದ್ದು, ನಮ್ಮ ಸರ್ಕಾರ ಜನಸಾಮಾನ್ಯರ ವಿಚಾರದಲ್ಲಿ ಕೈಗೊಳ್ಳುತ್ತಿರುವ ನೀತಿಗಳಿಂದಾಗಿ ಅವರಿಗೆ ನನ್ನ ವಿರುದ್ಧ ಹೋರಾಟ ಮಾಡಲು ಯಾವುದೇ ಅವಕಾಶಗಳಿಲ್ಲ. ಅಸೂಯೆಗೆ ಮದ್ದಿಲ್ಲ. ಹೀಗಾಗಿ ಅವರು ನಮಗೆ ಚರ್ಚೆಗೆ ಅವಕಾಶ ನೀಡುತ್ತಿಲ್ಲ” ಎಂದರು.

Eshwara Khandre on Siddaramaiah :ಸಿದ್ದರಾಮಯ್ಯನ ಹಾಡಿ ಹೊಗಳಿದ ಸಚಿವ ಈಶ್ವರ್‌ ಖಂಡ್ರೆ..! #siddaramaiah

ದಕ್ಷಿಣ ಭಾರತದಿಂದ ದೇಶದ ಪ್ರಗತಿ

“ನಿನ್ನೆ ಚೆನ್ನೈನಲ್ಲಿ ನಡೆದ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ ನಮ್ಮ ರಾಜ್ಯದ ಸಮಸ್ಯೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದೇನೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತ ದೇಶದ ಪ್ರಗತಿಗೆ ಸಹಕಾರಿಯಾಗಿದೆ. ನಾವು ಹಚ್ಚುವ ಜ್ಯೋತಿ ಹೇಗೆ ಕೆಳಗಿನಿಂದ ಮೇಲಕ್ಕೆ ಬೆಳಗುತ್ತದೆಯೋ ಅದೇ ರೀತಿ ದೇಶದ ಪ್ರಗತಿ ಕೂಡ ದಕ್ಷಿಣ ಭಾರತದಿಂದ ಬೆಳಗುತ್ತಿದೆ. ದೀಪ ಹಚ್ಚಿದಾಗ ಅದರ ಬೆಳಕು ಎಲ್ಲರಿಗೂ ಕಾಣುತ್ತದೆ. ಆದರೆ ಅದರಲ್ಲಿರುವ ಬತ್ತಿ ಹಾಗೂ ಎಣ್ಣೆ ಯಾರಿಗೂ ಕಾಣುವುದಿಲ್ಲ. ನಮಗೆ ನ್ಯಾಯುತ ಪಾಲು ಬೇಕು. ನಾವು ನೀಡುತ್ತಿರುವ ಕೊಡುಗೆ ಹಾಗೂ ಪಡೆಯುತ್ತಿರುವ ಅನುದಾನದಲ್ಲಿರುವ ವ್ಯತ್ಯಾಸದ ಬಗ್ಗೆ ವಿಚಾರ ಮಂಡಿಸಲಾಗಿದೆ. ನಾವು ಹಚ್ಚು ಜ್ಯೋತಿ ಅಷ್ಟು ಸುಲಭವಾಗಿ ಆರುವುದಿಲ್ಲ. ರಾಜ್ಯದ ಜನರ ಬದುಕಿನಲ್ಲಿ ಬೆಳಕು ತರುತ್ತದೆ” ಎಂದು ತಿಳಿಸಿದರು.

“ಕರ್ನಾಟಕ ದೇಶದಲ್ಲೇ ಎರಡನೇ ಅತಿ ಹೆಚ್ಚು ತೆರಿಗೆ ಪಾವತಿಸುತ್ತಿರುವ ರಾಜ್ಯ. ಭಾರತದ ಸಾಫ್ಟ್‌ವೇರ್ ರಪ್ತಿನಲ್ಲಿ ಕರ್ನಾಟಕದ ಕೊಡುಗೆ ಶೇ.42ರಷ್ಟಿದೆ. ಇಲ್ಲಿರುವ ಪ್ರತಿಭೆಗಳನ್ನು ನೋಡಿ ವಿಶ್ವದ ಪ್ರಮುಖ 500 ಕಂಪನಿಗಳು ನಮ್ಮಲ್ಲಿ ಕಾರ್ಯನಿರ್ವಹಿಸುತ್ತಿವೆ. ಐಟಿ ಬಿಟಿ ಸೇರಿದಂತೆ ತಂತ್ರಜ್ಞಾನ, ಏರೋಸ್ಪೇಸ್ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಕರ್ನಾಟಕ ಮುಂದಾಳತ್ವ ವಹಿಸುತ್ತಿದೆ” ಎಂದರು.

Assembly session: ನಾಗೇಂದ್ರ ವಜಾಗೆ ಆಗ್ರಹಿಸಿ ಕಲಾಪದಲ್ಲಿ 5ನೇ ದಿನವೂ ವಿಪಕ್ಷ ಪ್ರತಿಭಟನೆ  #pratidhvani

“ಈ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸಂತೋಷ ತಂದಿದೆ. ನಿಮ್ಮ ಮಾರ್ಗದರ್ಶನವಿಲ್ಲದೆ ರಾಜ್ಯ ಈ ಪ್ರಗತಿ ಸಾಧಿಸುತ್ತಿರಲಿಲ್ಲ. ದೇಶದ ಆರ್ಥಿಕತೆ ಉತ್ತಮವಾಗಿ ನಡೆಯುತ್ತಿರುವುದರ ಹಿಂದೆ ನಿಮ್ಮ ಮಾರ್ಗದರ್ಶನವಿದೆ. ದುಡ್ಡು, ಬ್ಲಡ್ ಎರಡೂ ಹರಿಯುತ್ತಿರಬೇಕು. ಬ್ಲಡ್ ಒಂದೇ ಕಡೆ ಇದ್ದರೆ ಆರೋಗ್ಯ ಹದಗೆಡುತ್ತದೆ, ಹಣ ಒಂದೇ ಕಡೆ ಸೇರಿಕೊಂಡರೆ ಆದಾಯ ತೆರಿಗೆ, ಜಿಎಸ್ ಟಿ, ಕಳ್ಳರು ಬರುತ್ತಾರೆ ಎಂದು ಸಾಯಿಬಾಬಾ ಅವರು ಒಮ್ಮೆ ಹೇಳಿದ್ದರು” ಎಂದು ಸ್ಮರಿಸಿದರು.

ನಿಮ್ಮ ಜಾಗದ ವಿಚಾರ ಬಗೆಹರಿಸುತ್ತೇನೆ

“ನಿಮ್ಮವರು ಸಂಸ್ಥೆ(ICAI)ಗೆ ಜಾಗದ ಅಗತ್ಯತೆ ಬಗ್ಗೆ ವಿಚಾರ ಪ್ರಸ್ತಾಪ ಮಾಡಿದ್ದೀರಿ. ಅಧಿವೇಶನ ಮುಗಿದ ಬಳಿಕ ಮುಂದಿನವಾರ ಬಂದು ನನ್ನನ್ನು ಭೇಟಿ ಮಾಡಿ. ನಿಮ್ಮ ಬೇಡಿಕೆ ರಾಜ್ಯ ಹಾಗೂ ಹೊಸ ಪೀಳಿಗೆ ಪರವಾಗಿದೆ. ಸಂಪನ್ಮೂಲ ಕ್ರೂಢೀಕರಣದ ಬಗ್ಗೆ ನಮ್ಮ ಸರ್ಕಾರಕ್ಕೂ ನೀವು ಸಲಹೆ ನೀಡಿ. ನಮ್ಮ ಸರ್ಕಾರ 52 ಸಾವಿರ ಕೋಟಿಯನ್ನು ಪ್ರತಿ ವರ್ಷ ಗ್ಯಾರಂಟಿ ಯೋಜನೆಗೆ ವೆಚ್ಚವಾಗುತ್ತಿದೆ. 20 ಸಾವಿರ ಕೋಟಿ ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡುತ್ತಿದ್ದು, ಬೇರೆ ಬೇರೆ ಪಿಂಚಣಿ ನೀಡುತ್ತಿದ್ದೇವೆ. ವ್ಯಾಪಾರ ಉದ್ಯಮಕ್ಕೆ ತೊಂದರೆ ಆಗದಂತೆ ಯಾವ ರೀತಿ ಸರ್ಕಾರದ ಆದಾಯ ಹೆಚ್ಚಳ ಮಾಡಬಹುದು ಎಂದು ತಿಳಿಸಿ. ಸಾಮಾಜಿಕ ಹಾಗೂ ಆರ್ಥಿಕ ಭದ್ರತೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ದಿದ್ದೇವೆ. ನಮ್ಮ ಮಾದರಿಯನ್ನು ಪ್ರಧಾನಮಂತ್ರಿಗಳು ಟೀಕಿಸಿದರೂ ನಂತರ ಬೇರೆ ರಾಜ್ಯಗಳಲ್ಲಿ ಅದನ್ನೇ ಪಾಲಿಸಿದ್ದಾರೆ” ಎಂದರು.

Veena Kashappanavar on BJP : ಈಗ ಹೋರಾಡೋ ಇವ್ರು ಹಿಂದೆ ಜೈಲಿಗೆ ಹೋಗಿದ್ದನ್ನು ನೆನಪಿಸಿಕೊಳ್ಳಲಿ.. #pratidhvani

ಸಿಎಸ್ಆರ್ ನಿಧಿ ಸದ್ಬಳಕೆ ಬಗ್ಗೆ ಉದ್ಯಮಿಗಳಿಗೆ ಮಾರ್ಗದರ್ಶನ ನೀಡಿ

“ನಮ್ಮ ರಾಜ್ಯದಲ್ಲಿ ಸೇವಾ ಕ್ಷೇತ್ರದಲ್ಲಿ ಈಶಾನ್ಯ ರಾಜ್ಯಗಳಿಂದ, ಕಟ್ಟಡ ನಿರ್ಮಾಣ ಕ್ಷೇತ್ರಗಳಲ್ಲಿ ಉತ್ತರ ಭಾರತದ ರಾಜ್ಯಗಳಿಂದ ಕಾರ್ಮಿಕರು ಬರುತ್ತಿದ್ದಾರೆ. ಆಂಧ್ರಪ್ರದೇಶ ವ್ಯಾಪಾರಿಗಳು ಬರುತ್ತಿದ್ದಾರೆ. ನೀವು ಅವರಿಗೆ ಮಾರ್ಗದರ್ಶನ ನೀಡಿ ಹೆಚ್ಚು ಗಳಿಸುವಂತೆ ಮಾಡಿ, ಸರ್ಕಾರಕ್ಕೆ ತೆರಿಗೆ ಪಾವತಿಸುವಂತೆ ಮಾಡಿ. ನೀವೆಲ್ಲರೂ ಸಿಎಸ್ಆರ್ ನಿಧಿ ವಿಚಾರದಲ್ಲಿ ನೀವು ಉದ್ಯಮಗಳಿಗೆ ಮಾರ್ಗದರ್ಶನ ನೀಡಬೇಕು. ನಮ್ಮ ಸರ್ಕಾರ ಸಿಎಸ್ಆರ್ ನಿಧಿಯನ್ನು ಗ್ರಾಮೀಣ ಭಾಗದ ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಇದಕ್ಕಾಗಿ ನಾವು ಶಿಕ್ಷಣ ನೀತಿ ರೂಪಿಸಲಾಗುತ್ತಿದೆ” ಎಂದು ಸಲಹೆ ನೀಡಿದರು.

“ಜನ ಶಿಕ್ಷಣ ಹಾಗೂ ಉದ್ಯೋಗಕ್ಕಾಗಿ ನಗರಕ್ಕೆ ವಲಸೆ ಬರುವುದನ್ನು ತಪ್ಪಿಸಬೇಕು. 25 ವರ್ಷಗಳ ಹಿಂದೆ 70 ಲಕ್ಷ ಇದ್ದ ಬೆಂಗಳೂರು ಜನಸಂಖ್ಯೆ ಇಂದು 1.40 ಕೋಟಿಗೆ ಏರಿಕೆಯಾಗಿದೆ. 1.35 ಕೋಟಿ ವಾಹನಗಳಿವೆ. ಸಂಚಾರ ದಟ್ಟಣೆ ನಿವಾರಣೆಗೆ ನಾನು ಟನಲ್ ರಸ್ತೆ ಮಾಡಲು ಮುಂದಾದರೆ ಬಿಜೆಪಿಯವನು ಅಡ್ಡಪಡಿಸುತ್ತಿದ್ದಾನೆ. ನೀವೆಲ್ಲರೂ ಅವನಿಗೆ ಮತಹಾಕಬೇಕು ಎನ್ನುತ್ತೀರಿ. ಇಲ್ಲಿ ಸಾಮಾನ್ಯ ಪ್ರಜ್ಞೆ ಬೇಕು. ದೇಶದಲ್ಲಿ ವಿದ್ಯಾವಂತರಿಲ್ಲದಿದ್ದರೂ ಪ್ರಜ್ಞಾವಂತರು ಇರಬೇಕು. ಅವರಿಗೆ ಸಾಮಾನ್ಯ ಪ್ರಜ್ಞೆ ಇಲ್ಲ. ರಸ್ತೆ ಅಗಲೀಕರಣ ಮಾಡಲು ಕಟ್ಟಡಗಳನ್ನು ಕೆಡವಲು ಸಾಧ್ಯವಿಲ್ಲ ಎಂದು ಹೇಳುತ್ತಿರುವಾಗ, ನೀವು ಗೆಲ್ಲಿಸಿರುವವನು ವೈಯಕ್ತಿಕ ಹಿತಾಸಕ್ತಿ ಇಟ್ಟುಕೊಂಡು ಟನಲ್ ಬೇಡ ಎನ್ನುತ್ತಿದ್ದಾನೆ. ಅವರ ಕೇಂದ್ರ ನಾಯಕರಿಗೆ ನೀವು ಇಂತಹವರನ್ನು ಆಯ್ಕೆ ಮಾಡುತ್ತೀರಿ ಎಂದು ಹೇಳಿದ್ದೇನೆ” ಎಂದರು.

Poornima Srinivas : Nagendra ರಾಜೀನಾಮೆಯ ಪ್ರಶ್ನೆಯಿಲ್ಲ, BJP ಗೂಬೆ ಕೂರಿಸುವುದನ್ನು ನಿಲ್ಲಿಸಲಿ..#pratidhvani

“PMLA ಕಾಯ್ದೆ, ಬ್ಲಾಕ್ ಮನಿಯಂತಹ ಹೊಸ ಕಾನೂನುಗಳ ಮೂಲಕ ಜನಸಾಮಾನ್ಯರಿಗೆ ಹೇಗೆ ಕಿರುಕುಳ ನೀಡಲಾಗುತ್ತಿದೆ ಎಂದು ತಿಳಿದಿದೆ. ನಿಮ್ಮಲ್ಲಿ ನೈತಿಕ ಮೌಲ್ಯಗಳು ಹೆಚ್ಚಾಗಿವೆ. ಅದಕ್ಕಾಗಿ ನಿಮಗೆ ಅಭಿನಂದಿಸುವೆ. ನಾವು ಇಲ್ಲಿಗೆ ಬಂದಿರುವುದು ನಿಮ್ಮ ಚಪ್ಪಾಳೆ ಹೂವಿನ ಹಾರಕ್ಕಾಗಿ ಅಲ್ಲ. ನಾವು ನಿಮ್ಮ ಜತೆಗಿರುತ್ತೇವೆ, ನೀವು ನಮ್ಮ ಜೊತೆಯಾಗಿರಿ ಎಂದು ಹೇಳಲು ಬಂದಿದ್ದೇನೆ. ನಿಮ್ಮಲ್ಲೂ ಈ ಬದ್ಧತೆ ಇರಲಿ” ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಹೇಳಿದರು.

Previous Post

ಹಿರಿಯ ನಟಿ, ಪದ್ಮಶ್ರೀ ಪುರಸ್ಕೃತೆ ಸಾಹುಕಾರ್ ಜಾನಕಿ ಇನ್ನಿಲ್ಲ

Next Post

ರೇಷನ್ ಕಾರ್ಡ್ ಇ-ಕೆವೈಸಿಗೆ ತಾತ್ಕಾಲಿಕ ಬ್ರೇಕ್: ಮತ್ತೆ ಯಾವಾಗ ಆರಂಭ?

Related Posts

ತಮಿಳುನಾಡು ವಿಧಾನಸಭೆಯಲ್ಲಿ ವಾಕ್ಸಮರ: ಉದಯನಿಧಿಗೆ ‘ಬಾತ್ರೂಮ್ ಲೀಡರ್’ ತಿರುಗೇಟು ಏನು
Top Story

ತಮಿಳುನಾಡು ವಿಧಾನಸಭೆಯಲ್ಲಿ ವಾಕ್ಸಮರ: ಉದಯನಿಧಿಗೆ ‘ಬಾತ್ರೂಮ್ ಲೀಡರ್’ ತಿರುಗೇಟು ಏನು

by ಪ್ರತಿಧ್ವನಿ
August 21, 2026
0

ತಮಿಳುನಾಡು ವಿಧಾನಸಭೆಯ ಕಲಾಪದಲ್ಲಿ ಪ್ರತಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಹಾಗೂ ಟಿವಿಕೆ ನಾಯಕ ಸಿಟಿಆರ್ ನಿರ್ಮಲ್ ಕುಮಾರ್ ನಡುವೆ ತೀವ್ರ ವಾಕ್ಸಮರ ನಡೆಯಿತು. ಉದಯನಿಧಿ ಸ್ಟಾಲಿನ್ ಅವರು...

Read moreDetails
ಸಕ್ಕರೆ ಬೆಲೆ ಏರಿಕೆಗೆ ಕೇಂದ್ರದ ಬ್ರೇಕ್‌: ದಾಸ್ತಾನು ಮಿತಿಗೂ ಕಡಿವಾಣ

ಸಕ್ಕರೆ ಬೆಲೆ ಏರಿಕೆಗೆ ಕೇಂದ್ರದ ಬ್ರೇಕ್‌: ದಾಸ್ತಾನು ಮಿತಿಗೂ ಕಡಿವಾಣ

August 21, 2026
ಸರ್ಕಾರಿ ಶಾಲೆ ಪರಿಶೀಲನೆಗೆ ತೆರಳಿದ್ದ CJP ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ; ಜೈಪುರದಲ್ಲಿ ಉದ್ವಿಗ್ನ ಪರಿಸ್ಥಿತಿ

ಸರ್ಕಾರಿ ಶಾಲೆ ಪರಿಶೀಲನೆಗೆ ತೆರಳಿದ್ದ CJP ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ; ಜೈಪುರದಲ್ಲಿ ಉದ್ವಿಗ್ನ ಪರಿಸ್ಥಿತಿ

August 21, 2026
500 KPS ಶಾಲೆಗಳ ಅಭಿವೃದ್ಧಿಗೆ  1,750 ಕೋಟಿ ರೂ ಎಡಿಬಿ ನೆರವು: ಮಹತ್ವದ ಒಪ್ಪಂದಕ್ಕೆ ಸಹಿ

500 KPS ಶಾಲೆಗಳ ಅಭಿವೃದ್ಧಿಗೆ 1,750 ಕೋಟಿ ರೂ ಎಡಿಬಿ ನೆರವು: ಮಹತ್ವದ ಒಪ್ಪಂದಕ್ಕೆ ಸಹಿ

August 21, 2026
ರೇಷನ್ ಕಾರ್ಡ್ ಇ-ಕೆವೈಸಿಗೆ ತಾತ್ಕಾಲಿಕ ಬ್ರೇಕ್: ಮತ್ತೆ ಯಾವಾಗ ಆರಂಭ?

ರೇಷನ್ ಕಾರ್ಡ್ ಇ-ಕೆವೈಸಿಗೆ ತಾತ್ಕಾಲಿಕ ಬ್ರೇಕ್: ಮತ್ತೆ ಯಾವಾಗ ಆರಂಭ?

August 21, 2026
Next Post
ರೇಷನ್ ಕಾರ್ಡ್ ಇ-ಕೆವೈಸಿಗೆ ತಾತ್ಕಾಲಿಕ ಬ್ರೇಕ್: ಮತ್ತೆ ಯಾವಾಗ ಆರಂಭ?

ರೇಷನ್ ಕಾರ್ಡ್ ಇ-ಕೆವೈಸಿಗೆ ತಾತ್ಕಾಲಿಕ ಬ್ರೇಕ್: ಮತ್ತೆ ಯಾವಾಗ ಆರಂಭ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada