• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, July 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Bidadi Township: ‘ಬಲವಂತ ಇಲ್ಲ’..ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಸಿಎಂ ಮಹತ್ವದ ನಿರ್ಧಾರ

ಪ್ರತಿಧ್ವನಿ by ಪ್ರತಿಧ್ವನಿ
July 15, 2026
in Top Story, ಕರ್ನಾಟಕ, ರಾಜಕೀಯ
0
ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿಗೆ ಸಿಎಂ ಡಿ.ಕೆ ಶಿವಕುಮಾರ್ ಪತ್ರ
Share on WhatsAppShare on FacebookShare on Telegram

ಬೆಂಗಳೂರು: ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ, ರೈತ ತಾಯಂದಿರ ಜಮೀನನ್ನೂ ಪಡೆದುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟವಾಗಿ ತಿಳಿಸಿದ್ದಾರೆ.

ADVERTISEMENT
HD Kumaraswamy ವಿರುದ್ಧ DKS ಸ್ಫೋಟಕ ಆರೋಪ..! #pratidhvani

 

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಮೀನು ಕೊಡಲು ಇಷ್ಟವಿಲ್ಲದವರು ಕೃಷಿ ಮುಂದುವರೆಸಬಹುದು. ಇಷ್ಟವಿದ್ದವರು ಸರ್ಕಾರಕ್ಕೆ ಜಮೀನು ಕೊಡಬಹುದು. ಆದರೆ, ಬಲವಂತವಾಗಿ ಒಂದು ಗುಂಟೆ ಜಮೀನನ್ನೂ ಪಡೆದುಕೊಳ್ಳುವುದಿಲ್ಲ ಎಂದರು.

ನಿನ್ನೆ ಬಿಡದಿಯಲ್ಲಿ ನಡೆದ ಘಟನೆ ಮನಸ್ಸಿಗೆ ನೋವಾಗಿದೆ. ರಾಜಕೀಯ ಪ್ರೇರಿತ ಕುಮ್ಮಕ್ಕಿನಿಂದ ಅಧಿಕಾರಿಗಳಿಗೆ ತೊಂದರೆ ನೀಡಿದ್ದಾರೆ. ರೈತರನ್ನು ತಪ್ಪು ದಾರಿಗೆ ಎಳೆಯುವ ಸಂಚು ನಡೆಯುತ್ತಿದೆ. ಎಲ್ಲರ ಮನಸ್ಸಿಗೆ ನೋವುಂಟು ಮಾಡುವುದು ನನಗೆ ಇಷ್ಟವಿಲ್ಲ. ಈ ಯೋಜನೆ ನನ್ನ ಕನಸಿನ ಪ್ರಾಜೆಕ್ಟ್ ಅಲ್ಲ. ಇದು ನನ್ನ ಕನಸಿನ ಯೋಜನೆ ಎಂದು ಯಾವತ್ತೂ ಹೇಳಿಲ್ಲ. ನಾನು ಅದಕ್ಕೆ ಶಂಕುಸ್ಥಾಪನೆ ಸಹ ನೆರವೇರಿಸಿಲ್ಲ. ಈ ಯೋಜನೆಯ ಪಿತಾಮಹ ಆಗಲು ಸಹ ನನಗೆ ಇಷ್ಟವಿಲ್ಲ. ಹಿರಿಯರು ನೀಡಿದ ಮಾರ್ಗದರ್ಶನದ ಪ್ರಕಾರ ಮುನ್ನಡೆಯುವ ಕೆಲಸ ಮಾತ್ರ ಮಾಡುತ್ತಿದ್ದೇನೆ. ಹಿಂದಿನ ಯೋಜನೆಯನ್ನು ಮುಂದುವರೆಸಿಕೊಂಡು ಹೋಗಿ ಎಂದು ಹೇಳಿದ್ದೇನೆ. ನಾನು ಹುಟ್ಟಾ ರೈತನ ಮಗ. ರೈತನ ಶ್ರಮದ ಬಗ್ಗೆ ನನಗೆ ವೈಯಕ್ತಿಕ ಅನುಭವಿದೆ ಎಂದರು.

Farmers Protest : ಎಷ್ಟೇ ಹಣ ಕೊಟ್ರೂ ನಾನು ಜಮೀನು ಕೊಡಲ್ಲ #pratidhvani

ನಾನು ಸಿಎಂ ಅಗಿರುವುದು ಕೆಲವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ಅವರಿಗೆ ನಿದ್ರೆ ಬರುತ್ತಿಲ್ಲ. ನನ್ನನ್ನು ಜೈಲಿಗೆ ಕಳುಹಿಸಲು ಎಷ್ಟು ವರ್ಷದಿಂದ ಸಂಚು ಮಾಡುತ್ತಿದ್ದಾರೆ ಎಂದು ಎಲ್ಲರಿಗೂ ತಿಳಿದಿದೆ.ಡಿಕೆಶಿ ಜೈಲಿಗೆ ಹೋಗುವ ದಿನ ಬಂದೇ ಬರುತ್ತದೆ ಎಂದು ಕುಮಾರಣ್ಣ ಅವರು ಇಂದೂ ಹೇಳಿದ್ದಾರೆ. ಅವರಿಗೆ ಒಳ್ಳೆಯದಾಗಲಿ. ನನಗೆ ಜೈಲು ಹೊಸದೇನಲ್ಲ ಎಂದು ಡಿಕೆ ಶಿವಕುಮಾರ್‌ ಹೇಳಿದರು.

ಬೆಂಗಳೂರಿನ ಸುತ್ತಮುತ್ತಲು ಹಲವಾರು ಸಾವಿರ ಎಕ್ರೆ ಜಮೀನು ಹಲವು ಯೋಜನೆಗಳಿಗೆ ಸ್ವಾಧೀನ ಆಗಿದೆ. ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಸಾವಿರಾರು ಎಕ್ರೆ ಸ್ವಾಧೀನ ಮಾಡಲಾಗಿದೆ. ಇಂದು ಸುತ್ತಮುತ್ತಲಿನ ಜಮೀನಿನ ಬೆಲೆ ಏನೆಂದು ಎಲ್ಲರಿಗೂ ಗೊತ್ತು. 23-09-2006 ರಂದು ಮುಖ್ಯಮಂತ್ರಿ ಆಗಿದ್ದ ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಐದು ಉಪನಗರಗಳ ಸಮಗ್ರ ಅಭಿವೃದ್ಧಿಗೆ ಯೋಜನೆಗೆ ತೀರ್ಮಾನಿಸಿದ್ದರು. ಅಲ್ಲಿಂದ ಇದು ಆರಂಭವಾಗಿದೆ. ಇದನ್ನು ಬಳಿಕ ಬಿಎಂಆರ್ಡಿ ಯಿಂದ ಪಿಪಿಪಿ ಮಾದರಿಯಲ್ಲಿ ಸಮಗ್ರ ಉಪ ನಗರ ಅಭಿವೃದ್ಧಿ ಪಡಿಸಲು ಅಧಿಕೃತ ಪಾಲುದಾರರನ್ನು ಗುರುತಿಸಲು ಜಾಗತಿಕ ಟೆಂಡರ್ ಕರೆಯಲು ತೀರ್ಮಾನ ಕೈಗೊಂಡಿದ್ದರು.

Farmers Protest : ಹಿಟ್ಲರ್ ಆಡಳಿತ ತೋರಿಸುತ್ತಾ ಇದೆ ಈ ಸರ್ಕಾರ #pratidhvani

ಅಶೋಕ್ ಅವರು ಸಹ ಅಂದು ಸಚಿವ ಸಂಪುಟದಲ್ಲಿದ್ದರು. 2007ರಲ್ಲಿ ಮತ್ತೆ ಹೆಚ್ಚುವರಿಯಾಗಿ ಮಾರಂಡಹಳ್ಳಿ, ಒಡೆಯರಳ್ಳಿ ಸೇರಿದಂತೆ ಹೊಸದಾಗಿ ಗ್ರಾಮಗಳನ್ನು ಟೌನ್ಶಿಪ್ ನಲ್ಲಿ ಸೇರಿಸಲು ನಿರ್ಧರಿಸಿದ್ದರು. ದಿನಾಂಕ 20-11-2006 ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಈ ಎಲ್ಲಾ ಖಾಸಗಿ ಜಮೀನಿನಲ್ಲಿ , ಯಾವುದೇ ಪ್ರಾಧಿಕಾರವಾಗಲಿ, ವ್ಯಕ್ತಿಯಾಗಲಿ, ಬಿಡಿಎ ವತಿಯಿಂದ ಪೂರ್ವಾನುಮತಿ ಪಡೆಯದೆ ಅಭಿವೃದ್ಧಿಗೆ ಅನುಮತಿ ನೀಡತಕ್ಕದಲ್ಲ ಎಂದು ಗೆಜೆಟ್ ನೋಟಿಫಿಕೇಶನ್ ಹೊರಡಿಸಿ ರೆಡ್ ಝೋನ್ ಎಂದು ಗುರುತಿಸಿದ್ದರು ಎಂದು ದಾಖಲೆಗಳನ್ನು ತೋರಿಸಿದರು.

Farmers Protest : ಕರೆಂಟ್  ಕಟ್ ಮಾಡಿ ಬರಡು ಭೂಮಿ ಮಾಡ್ತಿದ್ದಾರೆ.! #pratidhvani

ಇಷ್ಟು ಮಾತ್ರವಲ್ಲದೇ ಗ್ರಾಮಠಾಣಾದಲ್ಲಿರುವ ಆಸ್ತಿ, ಮನೆಗಳು ಸೇರಿದಂತೆ ಒಕ್ಕಲೆಬ್ಬಿಸಲು, ಪರಿಹಾರ ಮೊತ್ತ ಘೋಷಿಸಿ ಆದೇಶ ಹೊರಡಿಸಿದ್ದರು. ಖಾಸಗಿ ಡೆವಲಪರ್ ಡಿಎಲ್ಎಫ್ ಗೆ ಪತ್ರ ಬರೆದು ರೂ. 400 ಕೋಟಿ ಸೆಕ್ಯುರಿಟಿ ಡೆಪಾಸಿಟಿ ದುಡ್ಡು ಕಟ್ಟಿಸಿಕೊಂಡು ರಿಯಲ್ ಎಸ್ಟೇಟ್ಗೆ ಅವಕಾಶ ಕೊಟ್ಟಿದ್ದರು. ಈಗ ಹೇಳಿ ಕುಮಾರಣ್ಣಾ, ರಿಯಲ್ ಎಸ್ಟೇಟ್ ದಂಧೆ ಯಾರು ಮಾಡಿದ್ದು, ನಾನು ಮಾಡಿದ್ದಾ? ಎಂದು ಸಿಎಂ ಪ್ರಶ್ನಿಸಿದರು.

Farmers Protest : ರೈತರನ್ನು ಭಯೋತ್ಪಾದಕರಂತೆ ನೋಡ್ತಿದ್ದಾರೆ.! #pratidhvani

2010 ರಲ್ಲಿ ಯಡಿಯೂರಪ್ಪ ಅವರು ಸಮಗ್ರವಾದ ಉಪನಗರ ಯೋಜನೆ ಮುಂದುವರೆಸಲು ಎರಡನೇ ಬಾರಿ ಜಾಗತಿಕ ಟೆಂಡರ್ ಕರೆದು ಪಿಪಿಪಿ ಮಾದರಿಯಲ್ಲಿ ಅನುಷ್ಠಾನಕ್ಕೆ ಮುಂದಾದರು. ಆಗ ಸಹ ಅಶೋಕ್ ಅವರು ಸಚಿವರಾಗಿದ್ದರು. ರೈತರ ಆಸ್ತಿಯನ್ನು ಕಬಳಿಸಲು ನೀವು ನಡೆಸಿರುವ ಸಂಚನ್ನು ಎಷ್ಟು ದಿನ ಮುಚ್ಚಿಕೊಳ್ಳಲು ನಿಮಗೆ ಸಾಧ್ಯವಿದೆ? ರೈತ ಮಹಿಳೆಯರ ಬದುಕನ್ನು ಕಸಿದುಕೊಳ್ಳುವ ಕಾರ್ಯವನ್ನು ನಮ್ಮ ಸರ್ಕಾರ ಮಾಡಿಲ್ಲ. ಬಲವಂತವಾಗಿ ನಿಮ್ಮ ಜಮೀನು ತೆಗೆದುಕೊಳ್ಳುವ ಅವಶ್ಯಕತೆ ನಮ್ಮ ಸರ್ಕಾರಕ್ಕಿಲ್ಲ. ಇದರಲ್ಲಿ ಯಾರಿಗೂ ಬಲವಂತವಿಲ್ಲ. ಇಷ್ಟವಿದ್ದರೆ ರೈತರು ಪರಿಹಾರ ಪಡೆದು ತಮ್ಮ ಜಮೀನು ನೀಡಬಹುದಾಗಿದೆ.

HD Kumaraswamy: ಚಿತಾವಣೆ ನನ್ನದೂ ಇದೆ ಅಂದ್ರೆ ನನ್ನ ಮೇಲೂ ಕೇಸ್‌ ಹಾಕಿ ರೆಡಿ ಎಂದ ಕುಮಾರಸ್ವಾಮಿ  #pratidhvani

ಕುಮಾರಸ್ವಾಮಿ, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪ್ರಾರಂಭಿಸಿದ್ದ ಯೋಜನೆಯನ್ನು ಮುಂದುವರೆಸಿಕೊಂಡು ಹೋಗುತ್ತಿದ್ದೇವೆ ಅಷ್ಟೆ. ಬಿಡದಿ ಟೌನ್ ಶಿಪ್‌ ಅನುಷ್ಠಾನ ಬಗ್ಗೆ ಪರಿಶೀಲಿಸಲು ಒಂದು ಸಮಿತಿಯನ್ನು ರಚಿಸುವ ಬಗ್ಗೆ ಮುಂದಿನ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಈ ಸಮಿತಿಯ ವರದಿಯ ಆಧಾರದಲ್ಲಿ ಯೋಜನೆಯ ಬಗ್ಗೆ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು.

Tags: BidadiBidadi TownshipCM DK ShivakumarKarnatakaKarnataka Politics
Previous Post

Bengaluru: ಬಿಎಂಟಿಸಿ ಬಸ್‌ನಲ್ಲಿ ಕಂಡಕ್ಟರ್‌ ಬ್ಯಾಗ್‌ ಕದ್ದ ಕಿಲಾಡಿ ಲೇಡಿ..!

Next Post

Bidadi Township: ವಿರೋಧದ ಮಧ್ಯೆ ಟೌನ್​ಶಿಪ್ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಬಿಡುಗಡೆ

Related Posts

ಮತದಾರರಿಗೆ ಮತ್ತೊಂದು ಅವಕಾಶ: ವಿಶೇಷ ಪರಿಷ್ಕರಣೆ ದಿನಾಂಕ ವಿಸ್ತರಿಸಿದ ಚುನಾವಣಾ ಆಯೋಗ
Top Story

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ: ಬ್ಯಾಂಕ್ ಆಫ್ ಬರೋಡಾದಲ್ಲಿ ಹಿರಿಯ ಹುದ್ದೆಗಳಿಗೆ ನೇಮಕಾತಿ

by ಪ್ರತಿಧ್ವನಿ
July 15, 2026
0

ನವದೆಹಲಿ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹಿರಿಯ ಹುದ್ದೆಯಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಬ್ಯಾಂಕ್ ಆಫ್ ಬರೋಡಾ (Bank of Baroda) ಉತ್ತಮ ಅವಕಾಶ ನೀಡಿದೆ. ಬ್ಯಾಂಕ್ ತನ್ನ...

Read moreDetails
‘ನಾನು ಹೆಮ್ಮೆಯ ಹಿಂದೂ’; ಕೇಸರಿ ವಿವಾದಕ್ಕೆ ಕಾಂಗ್ರೆಸ್ ನಾಯಕಿ ನಯನ ಮೊಟಮ್ಮ ಸ್ಪಷ್ಟನೆ

‘ನಾನು ಹೆಮ್ಮೆಯ ಹಿಂದೂ’; ಕೇಸರಿ ವಿವಾದಕ್ಕೆ ಕಾಂಗ್ರೆಸ್ ನಾಯಕಿ ನಯನ ಮೊಟಮ್ಮ ಸ್ಪಷ್ಟನೆ

July 15, 2026
ಮತದಾರರಿಗೆ ಮತ್ತೊಂದು ಅವಕಾಶ: ವಿಶೇಷ ಪರಿಷ್ಕರಣೆ ದಿನಾಂಕ ವಿಸ್ತರಿಸಿದ ಚುನಾವಣಾ ಆಯೋಗ

ಮತದಾರರಿಗೆ ಮತ್ತೊಂದು ಅವಕಾಶ: ವಿಶೇಷ ಪರಿಷ್ಕರಣೆ ದಿನಾಂಕ ವಿಸ್ತರಿಸಿದ ಚುನಾವಣಾ ಆಯೋಗ

July 15, 2026
ಕಾವೇರಿ ವಿವಾದ: ತಮಿಳುನಾಡಿಗೆ ನೀರು ಬಿಡುಗಡೆ ಕುರಿತು CWRC ಮೌನ

ಕಾವೇರಿ ವಿವಾದ: ತಮಿಳುನಾಡಿಗೆ ನೀರು ಬಿಡುಗಡೆ ಕುರಿತು CWRC ಮೌನ

July 15, 2026
ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿಗೆ ಸಿಎಂ ಡಿ.ಕೆ ಶಿವಕುಮಾರ್ ಪತ್ರ

ಅಪಾರ್ಟ್ಮೆಂಟ್‌ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಡಿ.ಕೆ ಶಿವಕುಮಾರ್

July 15, 2026
Next Post
Bidadi Township: ವಿರೋಧದ ಮಧ್ಯೆ ಟೌನ್​ಶಿಪ್ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಬಿಡುಗಡೆ

Bidadi Township: ವಿರೋಧದ ಮಧ್ಯೆ ಟೌನ್​ಶಿಪ್ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಬಿಡುಗಡೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada