• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬರ ಪರಿಸ್ಥಿತಿ ನಿರ್ವಹಣೆ, ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ : ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ..

ಜನಪರವಾಗಿ ಕೆಲಸ ಮಾಡದಿದ್ದರೆ, ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುವುದು ನನಗೆ ಅನಿವಾರ್ಯವಾಗುತ್ತದೆ : ಸಿಎಂ ವಾರ್ನಿಂಗ್‌..!

ಪ್ರತಿಧ್ವನಿ by ಪ್ರತಿಧ್ವನಿ
July 7, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
CM DK Shivakumar Warns to Officails

CM DK Shivakumar Warns to Officails

Share on WhatsAppShare on FacebookShare on Telegram

ಕಲಬುರಗಿ : ರಾಜ್ಯವನ್ನು ಕಾಡುತ್ತಿರುವ ಬರಗಾಲ ಪರಿಸ್ಥಿತಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.‌

ADVERTISEMENT
DK Shivakumar :  ಜಿಲ್ಲಾ ಸಚಿವರು ತಪ್ಪಾಗಿದೆ ಅಂತ ಹೇಳಿದ್ದಾರೆ, ಮುಂದೆ ಹೀಗೆ ಮಾಡಲ್ಲ ಅಂದಿದ್ದಾರೆ. #pratidhvani

ಕಲ್ಬುರ್ಗಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿಂದು  ಜನಪರ ಕೆಲಸ ಮಾಡದ ಅಧಿಕಾರಿಗಳನ್ನು ಸಹಿಸಿಕೊಳ್ಳುವುದಿಲ್ಲ. ಸರ್ವರನ್ನೂ ಒಳಗೊಂಡ ಪರಿಶುದ್ಧ ಆಡಳಿತ, ಅಭಿವೃದ್ಧಿ ಮತ್ತು ಕಟ್ಟಕಡೆಯ ವ್ಯಕ್ತಿಗೂ ಅವರ ನಾಗರಿಕ ಹಕ್ಕುಗಳನ್ನು ತಲುಪಿಸುವುದು ನನ್ನ ಸರ್ಕಾರದ ಪ್ರಮುಖ ಗುರಿ. ಈ ಗುರಿ ಸಾಧಿಸಲು ಅಧಿಕಾರಿ ವರ್ಗ ಅತ್ಯಂತ ಕ್ರಿಯಾಶೀಲ, ಜನಪರ ಮತ್ತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಖಡಕ್‌ ಸೂಚನೆ ನೀಡಿದ್ದಾರೆ.

ನಾನು ಬಸವಾದಿ ಶರಣರ ಸಮಾನತೆಯ ತತ್ವವನ್ನು ನಂಬುವವನು. ಆದ್ದರಿಂದಲೇ ನನ್ನ ಮೊದಲ ಉತ್ತರ ಕರ್ನಾಟಕ ಪ್ರವಾಸವನ್ನು ಬಸವಕಲ್ಯಾಣದಿಂದ ಆರಂಭಿಸಿದ್ದೇನೆ. ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಅಭಿವೃದ್ಧಿ ಒಂದೇ ವೇಗದಲ್ಲಿ ಸಾಗಬೇಕು ಎಂದು ಸಾರಿ ಹೇಳಿದ್ದಾರೆ.

ಇದನ್ನೂ ಓದಿ : ಕರಾವಳಿ ಟ್ರೇಲರ್ ಲಾಂಚ್​​ಗೆ ಹೀರೋ ಪ್ರಜ್ವಲ್​​​ಗೆ ಆಹ್ವಾನವಿಲ್ಲ! ಚಿತ್ರತಂಡದ ನಡೆಗೆ ಅಭಿಮಾನಿಗಳ ಆಕ್ರೋಶ

ಜನತೆ ನಮ್ಮ ಮೇಲೆ ಇಟ್ಟಿರುವ ನಂಬಿಕೆಯೇ ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದೆ. ನಮ್ಮನ್ನು ಈ ಸ್ಥಾನದಲ್ಲಿ ಕೂರಿಸಿರುವವ ಜನತೆಯ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವುದು ನಮ್ಮೆಲ್ಲರ ಕರ್ತವ್ಯ. ನಾನು ತಾಲ್ಲೂಕು ಪಂಚಾಯಿತಿ ಅಧ್ಯಕ್ಷನಾಗಿ ಕೆಲಸ ಆರಂಭಿಸಿ ಮುಖ್ಯಮಂತ್ರಿ ಹುದ್ದೆಯವರೆಗೆ ಎಲ್ಲಾ ಹಂತಗಳನ್ನು ದಾಟಿಕೊಂಡು ಬಂದಿದ್ದೇನೆ. ಹೀಗಾಗಿ ಆಡಳಿತದ ಪ್ರತಿಯೊಂದು ಹಂತದಲ್ಲಿ ಏನು ನಡೆಯುತ್ತದೆ ಎಂಬುದು ನನಗೆ ಚೆನ್ನಾಗಿ ಗೊತ್ತಿದೆ. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ನೆಪಗಳನ್ನು ಕೇಳಲು ನಾನು ಸಿದ್ಧನಿಲ್ಲ. ನನಗೆ ಫಲಿತಾಂಶವೇ ಮುಖ್ಯ ಎಂದು ಅಧಿಕಾರಿಗಳಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ.

ನಿಮ್ಮ ಕಾರ್ಯಕ್ಷಮತೆ ಉತ್ತಮವಾಗಿದ್ದರೆ ನಾಡಿನ ಜನತೆಯ ಋಣ ತೀರಿಸಿದಂತಾಗುತ್ತದೆ. ಆದರೆ ಜನಪರವಾಗಿ ಕೆಲಸ ಮಾಡದಿದ್ದರೆ, ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುವುದು ನನಗೆ ಅನಿವಾರ್ಯವಾಗುತ್ತದೆ ಎಂದು ಡಿಕೆ ಶಿವಕುಮಾರ್ ಎಚ್ಚರಿಸಿದ್ದಾರೆ.

ದೇಶಾದ್ಯಂತ ಮಳೆಯ ಅಭಾವದ ಬಗ್ಗೆ ಆತಂಕ ವ್ಯಕ್ತವಾಗುತ್ತಿದೆ. ರಾಜ್ಯದ ಪರಿಸ್ಥಿತಿ ಸಮಾಧಾನಕರವಾಗಿದೆ. ಅಂತರರಾಜ್ಯ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ತೆಲಂಗಾಣ ಮತ್ತು ಆಂಧ್ರ ಪ್ರದೇಶದ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರೊಂದಿಗೆ ಐತಿಹಾಸಿಕ ಮಟ್ಟದ ಚರ್ಚೆ ನಡೆಸಿದ್ದೇವೆ. ಕೃಷ್ಣಾ, ಕಾವೇರಿ ಮತ್ತು ಗೋದಾವರಿ ನದಿಗಳ ಜೋಡಣೆ ಯೋಜನೆಯನ್ನು ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ ಮುಂದುವರಿಸುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರವೂ ಸಕಾರಾತ್ಮಕ ಸ್ಪಂದನೆ ನೀಡಿದೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿ ರಾಜ್ಯದ ಜನರ ಹಿತಾಸಕ್ತಿ ರಕ್ಷಣೆ ಆದ್ಯತೆಯಾಗಿಸಿ ಒಟ್ಟಾಗಿ ಕೆಲಸ ಮಾಡಲು ತೀರ್ಮಾನಿಸಿದ್ದೇವೆ ಎಂದು ಡಿಕೆ ಶಿವಕುಮಾರ್‌ ಒಗ್ಗಟ್ಟಿನ ಮಾತಾಡಿದ್ದಾರೆ.

DkShivakumar : ಅಧಿಕಾರಿಗಳೊಂದಿಗೆ CM DCM ಪ್ರಗತಿ ಪರಿಶೀಲನಾ ಸಭೆ.! #pratidhvani

ಹಿಂದಿನ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಸ್ಪಷ್ಟನೆ ನೀಡಿ, ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿ ಆರಂಭಗೊಂಡಿರುವ ಎಲ್ಲಾ ಅಭಿವೃದ್ಧಿ ಕಾಮಗಾರಿಗಳು ಯಥಾವತ್ತಾಗಿ ಮುಂದುವರಿಯಲಿವೆ. ಅಭಿವೃದ್ಧಿಯ ವೇಗವನ್ನು ಹೆಚ್ಚಿಸುವುದರ ಜೊತೆಗೆ ಆಡಳಿತದಲ್ಲಿ ಇನ್ನಷ್ಟು ಪಾರದರ್ಶಕತೆ, ಕಾರ್ಯಕ್ಷಮತೆ ಮತ್ತು ಜನಕೇಂದ್ರಿತ ದೃಷ್ಟಿಕೋನಕ್ಕೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒತ್ತಿ ಹೇಳಿದ್ದಾರೆ.

ಇಲ್ಲಿ ರಾಜಕಾರಣ ಮುಖ್ಯವಲ್ಲ, ಮತದಾನದ ಹಕ್ಕು ಮುಖ್ಯ..

ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಮಾತನಾಡಿ, ಒಬ್ಬನೇ ಒಬ್ಬ ಅರ್ಹ ಮತದಾರ ತನ್ನ ಮತದಾನದ ಹಕ್ಕು ಕಳೆದುಕೊಳ್ಳಬಾರದು. ಇಲ್ಲಿ ರಾಜಕಾರಣ ಮುಖ್ಯವಲ್ಲ, ಆದರೆ ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕು ರಕ್ಷಿಸುವುದು ಸರ್ಕಾರದ ಜವಾಬ್ದಾರಿ. ಬಿಎಲ್ಒಗಳು ಪ್ರತಿಯೊಂದು ಮನೆಗೆ ಕನಿಷ್ಠ ಮೂರು ಬಾರಿ ಭೇಟಿ ನೀಡಿ ಅರ್ಹ ಮತದಾರರ ಹೆಸರನ್ನು ಉಳಿಸುತ್ತಾರೆಯೇ ಎಂಬುದರ ಮೇಲೆ ನಿಗಾ ವಹಿಸಬೇಕು. ಈ ವಿಚಾರದಲ್ಲಿ ಯಾವುದೇ ರಾಜಿ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

Tags: CM DK Shivakumarcongress karnatakaDrought ProblemsGovenment OfficialsKALABURAGI NewsKalyan Karnataka NewsKarnataka GovernmentKarnataka water ProblemsPratidhvaniPriyank KhargeVoting WRights
Previous Post

Viral Video: ಆರ್.ಅಶೋಕ್ ಕಾಲಿಗೆ ಬಿದ್ದ ಶಾಸಕ: ನೆಟ್ಟಿಗರಿಂದ ಫುಲ್‌ ಟ್ರೋಲ್

Next Post

ದೇವರಾಜ ಅರಸು ನಿಗಮದಲ್ಲಿ ಗೋಲ್‌ಮಾಲ್‌ : ನಿಷ್ಪಕ್ಷಪಾತ ತನಿಖೆಗೆ ವಿಪಕ್ಷ ನಾಯಕ ಅಶೋಕ್‌ ಒತ್ತಾಯ

Related Posts

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?
Top Story

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?

by ಪ್ರತಿಧ್ವನಿ
July 25, 2026
0

ನವದೆಹಲಿ: ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮದ ವಿರುದ್ಧ 35 ದಿನಗಳ ಕಾಲ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಯಶಸ್ವಿಯಾಗಿ ಅಂತ್ಯಗೊಂಡಿದೆ. ಕೇಂದ್ರ ಶಿಕ್ಷಣ ಸಚಿವ...

Read moreDetails
ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

July 25, 2026
ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

July 25, 2026
ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

July 25, 2026
ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

July 25, 2026
Next Post
ದೇವರಾಜ ಅರಸು ನಿಗಮದಲ್ಲಿ ಗೋಲ್‌ಮಾಲ್‌ : ನಿಷ್ಪಕ್ಷಪಾತ ತನಿಖೆಗೆ ವಿಪಕ್ಷ ನಾಯಕ ಅಶೋಕ್‌ ಒತ್ತಾಯ

ದೇವರಾಜ ಅರಸು ನಿಗಮದಲ್ಲಿ ಗೋಲ್‌ಮಾಲ್‌ : ನಿಷ್ಪಕ್ಷಪಾತ ತನಿಖೆಗೆ ವಿಪಕ್ಷ ನಾಯಕ ಅಶೋಕ್‌ ಒತ್ತಾಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada