• Home
  • About Us
  • ಕರ್ನಾಟಕ
Wednesday, December 17, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಮೀಕ್ಷೆ ಕುರಿತು ಸಿಎಂ ಸ್ಪಷ್ಟ ವಿವರಣೆ !

ಪ್ರತಿಧ್ವನಿ by ಪ್ರತಿಧ್ವನಿ
September 30, 2025
in ಕರ್ನಾಟಕ, ರಾಜಕೀಯ
0
ಗ್ರೇಟರ್‌ ಬೆಂಗಳೂರಿನಲ್ಲಿ ಸುಮಾರು ದಿನಗಳಿಂದ ನೀರು ಮತ್ತು ಬೆಳಕು ಇಲ್ಲದ  ಕಟ್ಟಡಗಳಿಗೆ ಪೂರೈಕೆಗೆ ಸಿಎಂ ಸಭೆ !
Share on WhatsAppShare on FacebookShare on Telegram

ನಮ್ಮ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸುತ್ತಿದ್ದಂತೆಯೇ ‘’ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಎಂದು ಕೂಗು ಹಾಕುತ್ತಿರುವವರ ಆಂತರ್ಯದಲ್ಲಿರುವ ನಿಜ ಬಣ್ಣ ಬಯಲಾಗುತ್ತಿದೆ. ರಾಜ್ಯ ಬಿಜೆಪಿಯ ನಾಯಕರು ಒಬ್ಬೊಬ್ಬರಾಗಿ ಹೊರಗೆ ಬಂದು ನಮ್ಮ ಸಮೀಕ್ಷೆಯನ್ನು ಬಹಿಷ್ಕರಿಸುವಂತೆ ಕರೆನೀಡುವ ಮೂಲಕ ಸಾರ್ವಜನಿಕರ ಎದುರು ಬೆತ್ತಲಾಗುತ್ತಿದ್ದಾರೆ.

ADVERTISEMENT

ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಮೀಕ್ಷೆ ಯಾವುದೇ ಒಂದು ಜಾತಿಗೆ-ಧರ್ಮಕ್ಕೆ ಸೀಮಿತವಾದುದಲ್ಲ. ಇದು ರಾಜ್ಯದ ಏಳು ಕೋಟಿ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಾಗಿದೆ. ಇದು ಯಾರ ವಿರುದ್ದವೂ ಅಲ್ಲ, ಇದು ಎಲ್ಲರ ಪರವಾಗಿರುವ ಸಮೀಕ್ಷೆ ಎಂದು ಸಿಎಂ ಸ್ಪಷ್ಟನೆ ನೀಡಿದರು.

ಸಮೀಕ್ಷೆಯ ಮುಖ್ಯ ಉದ್ದೇಶ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮಾನತೆಯನ್ನು ಸಾಧಿಸುವ ಸಲುವಾಗಿ ಈ ಮುಖಾಂತರ ಸರ್ವರಿಗೂ ಸಮಪಾಲು, ಸಮಬಾಳು ನೀಡುವುದಾಗಿದೆ.

ಸಂಪತ್ತು, ಅವಕಾಶ ಮತ್ತು ಪ್ರಾತಿನಿಧ್ಯ ಎಲ್ಲವೂ ಯಥಾಸ್ಥಿತಿಯಲ್ಲಿಯೇ ಇರಬೇಕು. ಬಡವರು ಬಡವರಾಗಿಯೇ ಉಳಿಯಬೇಕು, ಹಿಂದುಳಿದವರು ಹಿಂದೆಯೇ ಉಳಿಯಬೇಕು. ಮಹಿಳೆಯರು ಅವಕಾಶ ವಂಚಿತರಾಗಿಯೇ ಇರಬೇಕು. ವರ್ಣ ಮತ್ತು ವರ್ಗಗಳ ನಡುವಿನ ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ. ಬಿಜೆಪಿಯ ನಾಯಕರ ಅಂತರಂಗದಲ್ಲಿರುವುದು ಇದೇ ಮನುವಾದಿ ಮನಸ್ಥಿತಿ. ಇದರ ವಿರುದ್ಧವಾಗಿಯೇ ಕಾಂಗ್ರೆಸ್‌ ಸರ್ಕಾರ ಈ ಸಮೀಕ್ಷೆಯನ್ನು ಕೈಗೊಂಡಿದೆ.

ನಮ್ಮ ಸರ್ಕಾರ ನಡೆಸುವ ಸಮೀಕ್ಷೆಯಿಂದ ಕೇವಲ ದಲಿತ, ಹಿಂದುಳಿದ ಜಾತಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಸ್ಥಿತಿ-ಗತಿ ಮಾತ್ರವಲ್ಲ, ಮುಂದುವರಿದ ಜಾತಿಗಳೊಳಗಿನ ಬಡವರು ಮತ್ತು ಅವಕಾಶ ವಂಚಿತರ ಸ್ಥಿತಿಗತಿಯನ್ನು ತಿಳಿಯಲು ಸಾಧುವಾಗುತ್ತದೆ.

ಜಾತಿ ವ್ಯವಸ್ಥೆಯಲ್ಲಿನ ಅಸಮಾನತೆಯ ವಾಸ್ತವಸ್ಥಿತಿ ತಿಳಿದುಕೊಳ್ಳಲು ಬಿಜೆಪಿಯವರಿಗೆ ಬೇಡವಾಗಿದೆ. ಸಂಪತ್ತು, ಅವಕಾಶ ಮತ್ತು ಪ್ರಾತಿನಿಧ್ಯ  ಪ್ರತಿಯೊಂದು ಜಾತಿ ಮತ್ತು ಧರ್ಮದೊಳಗಿನ ಉಳ್ಳವರ ಕೈಯಲ್ಲಿಯೇ ಇರಬೇಕು ಎನ್ನುವುದು ಅವರ ನಡೆಯಾಗಿದ್ದು, ಆದುದರಿಂದಲೇ  ಸಮೀಕ್ಷೆಯ ವಿರೋದಧ ಹಿಂದಿನ ದುರುದ್ದೇಶ ಬಹಿರಂಗಗೊಂಡಿದೆ.

ಬಿಹಾರದಲ್ಲಿ ಇವರದ್ದೇ ಮೈತ್ರಿ ಸರ್ಕಾರ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿದೆ. ಇದೇ ರೀತಿ ತೆಲಂಗಾಣದಲ್ಲಿಯೂ ನಡೆದಿದೆ. ಅಲ್ಲಿಯೂ ಬಿಜೆಪಿ ನಾಯಕರು ಬಾಯಿ ಮುಚ್ಚಿಕೊಂಡಿದ್ದಾರೆ. ಇವೆಲ್ಲಕ್ಕಿಂತಲೂ ಮಿಗಿಲಾಗಿ ಈಗ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವೇ ಜಾತಿ ಗಣತಿ ಮಾಡಲು ಹೊರಟಿದೆ.

ಕರ್ನಾಟಕದಲ್ಲಿ ಜಾತಿಗಳನ್ನು ಪರಿಗಣಿಸಿ ನಡೆಸುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸುತ್ತಿರುವ ಬಿಜೆಪಿ ನಾಯಕರೇ, ನೀವು ಕೇಂದ್ರ ಸರ್ಕಾರದ ಜಾತಿ ಗಣತಿಯನ್ನೂ ವಿರೋಧಿಸುತ್ತೀರಾ? ಹಾಗೆ ವಿರೋಧಿಸುವುದಾದರೆ ಅದನ್ನು ಗಟ್ಟಿ ದನಿಯಲ್ಲಿ ಈಗಲೇ ಹೇಳಿಬಿಡಿ. ಪ್ರಧಾನಿಯ ಎದುರು ತಲೆ ಎತ್ತಿ ಮಾತನಾಡುವ ದಮ್ಮು-ತಾಕತ್ತು ಇಲ್ಲದ ನಿಮಗೆ ಇದನ್ನು ವಿರೋಧಿಸುವ ಧೈರ್ಯ ಇದೆಯೇ?  ಯಾಕೆ ತಮ್ಮ ಮೂರ್ಖತನದ ಹೇಳಿಕೆಗಳ ಮೂಲಕ ರಾಜ್ಯದ ಪ್ರಜ್ಞಾವಂತ ಜನರ ಎದುರು ನಗೆಪಾಟಲಿಗೆ ಗೀಡಾಗುತ್ತಿದ್ದೀರಿ ಎಂದು ಸಿಎಂ ಸಮೀಕ್ಷೆಯ ಕುರಿತು ಸಂಫೂರ್ಣ ವಿಚಾರವನ್ನು ತಿಳಿಸಿದರು.

ಬಿಜೆಪಿ ನಾಯಕರ ಈ ಆತ್ಮವಂಚಕ ನಡವಳಿಕೆಯನ್ನು ರಾಜ್ಯದ ಜನತೆ ಅರ್ಥಮಾಡಿಕೊಳ್ಳಬೇಕು. ಅವರ ರಾಜಕೀಯ ಪ್ರೇರಿತ ಕುಟಿಲತನದ ಹೇಳಿಕೆಗಳನ್ನು ಮನೆಯ ಕಸದ ಬುಟ್ಟಿಗೆ ಎಸೆದು ಎಲ್ಲರೂ ಈಗ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಂಡು ಸಂಪೂರ್ಣ ಸಹಕಾರ ನೀಡಬೇಕು. ಈ ಮೂಲಕ ನಾವೆಲ್ಲರೂ ಸೇರಿ ಸಮ ಸಮಾಜವನ್ನು ನಿರ್ಮಾಣ ಮಾಡುವ ಮೂಲಕ ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವನ್ನು ಮಾಡೋಣ ಎಂದು ವಿನಯಪೂರ್ವಕವಾಗಿ ಅರಿಕೆ ಮಾಡಿಕೊಳ‍್ಳುತ್ತಿದ್ದೇನೆ ಎನ್ನುವ ಮೂಲಕ ಸಮೀಕ್ಷೆಯಲ್ಲಿ ಸಾರ್ವಜನಿಕರು ಭಾಗಯಾಗಿಬೇಕೆಂದು ಕೇಳಿಕೊಳ್ಳುತ್ತೇನೆಂದು ಹೇಳುವ ಮೂಲಕ ರಾಜ್ಯದ ಜನತೆಯಲ್ಲಿ ಮನವಿ ಮಾಡಿಕೊಂಡರು.

Tags: #chiefministersiddaramaiahBJPCongress Partysurvey
Previous Post

ಗ್ರೇಟರ್‌ ಬೆಂಗಳೂರಿನಲ್ಲಿ ಸುಮಾರು ದಿನಗಳಿಂದ ನೀರು ಮತ್ತು ಬೆಳಕು ಇಲ್ಲದ  ಕಟ್ಟಡಗಳಿಗೆ ಪೂರೈಕೆಗೆ ಸಿಎಂ ಸಭೆ !

Next Post

ಮೈಸೂರಿನಲ್ಲಿ ಅರಣ್ಯ ಸಚಿವರ ಸುದ್ದಿಗೋಷ್ಠಿ!

Related Posts

Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 16, 2025
0

ಸರ್ಕಾರ ಭ್ರೂಣ ಹತ್ಯೆ ತಡೆಗೆ ಎಷ್ಟೇ ಬಿಗಿಯಾದ ಕಾನೂನು ಕ್ರಮ ಕೈಗೊಂಡರೂ ಅಲ್ಲಲ್ಲಿ ಪ್ರಕರಣ ನಡೆಯುತ್ತಿದೆ. ಆದರೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇದು ಕೇವಲ ಕಾನೂನು...

Read moreDetails

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಘಟನೆ ಸ್ಥಳಗಳ ಪರಿಶೀಲಿಸಿದ SPP

ರೇಣುಕಾಸ್ವಾಮಿ ಹತ್ಯೆ ಕೇಸ್: ಘಟನೆ ಸ್ಥಳಗಳ ಪರಿಶೀಲಿಸಿದ SPP

December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

December 16, 2025
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

December 16, 2025
Next Post
ಮೈಸೂರಿನಲ್ಲಿ ಅರಣ್ಯ ಸಚಿವರ ಸುದ್ದಿಗೋಷ್ಠಿ!

ಮೈಸೂರಿನಲ್ಲಿ ಅರಣ್ಯ ಸಚಿವರ ಸುದ್ದಿಗೋಷ್ಠಿ!

Recent News

Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 16, 2025
Top Story

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

by ಪ್ರತಿಧ್ವನಿ
December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ
Top Story

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

by ಪ್ರತಿಧ್ವನಿ
December 16, 2025
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌
Top Story

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 16, 2025
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ. .

by ಪ್ರತಿಧ್ವನಿ
December 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

December 16, 2025

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!