• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಯಾವುದೇ ತಪ್ಪು ಮಾಡಿಲ್ಲ , ಯಾವುದೇ ತನಿಖೆ ನಡೆದರೂ ದೋಷಮುಕ್ತರಾಗುತ್ತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
September 24, 2024
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

“ನಮ್ಮ ಮುಖ್ಯಮಂತ್ರಿಗಳು ಯಾವುದೇ ತಪ್ಪು ಮಾಡಿಲ್ಲ, ಅವರು ಯಾವುದೇ ಹಗರಣದಲ್ಲೂ ಭಾಗಿಯಾಗಿಲ್ಲ. ಅವರ ವಿರುದ್ಧ ಬಿಜೆಪಿ ಷಡ್ಯಂತ್ರ ರೂಪಿಸುತ್ತಿದೆ. ಯಾವುದೇ ತನಿಖೆ ನಡೆದರೂ ಅವರು ದೋಷಮುಕ್ತರಾಗುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ADVERTISEMENT

ತಾಜ್ ವೆಸ್ಟೆಂಡ್ ಹೋಟೆಲ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಡಿಸಿಎಂ ಅವರು ಪ್ರತಿಕ್ರಿಯೆ ನೀಡಿದರು.

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಬಗ್ಗೆ ಮಾಧ್ಯಮಗಳು ಗಮನ ಸೆಳೆದಾಗ, “ಬಿಜೆಪಿಯವರು ನನ್ನ ಮೇಲೆ ಹೇಗೆ ಷಡ್ಯಂತ್ರ ರೂಪಿಸಿ ಕೇಸ್ ದಾಖಲಿಸಿ, ಜೈಲಿಗೆ ಹಾಕಿದರೋ ಅದೇ ರೀತಿ ನಮ್ಮ ಮುಖ್ಯಮಂತ್ರಿಗಳ ವಿರುದ್ಧವೂ ಷಡ್ಯಂತ್ರ ರೂಪಿಸುತ್ತಿದ್ದಾರೆ. ಭಗವಂತನ ಕೃಪೆಯಿಂದ ನಾನು ಜೈಲಿಗೆ ಹೋದ ಪ್ರಕರಣ ಕೂಡ ವಜಾಗೊಂಡಿದೆ” ಎಂದು ತಿಳಿಸಿದರು.

“ ಮುಖ್ಯಮಂತ್ರಿಗಳು ಯಾವುದೇ ತಪ್ಪು ಮಾಡಿಲ್ಲ. ನಾವೆಲ್ಲರೂ ಮುಖ್ಯಮಂತ್ರಿಗಳ ಜತೆಗೆ ನಿಲ್ಲುತ್ತೇವೆ. ಹೋರಾಟ ಮುಂದುವರಿಸುತ್ತೇವೆ. ಅವರು ಮಾಡಿರುವ ಕೆಲಸ, ರಾಜ್ಯದ ಜನರಿಗೆ ನೀಡಿರುವ ಯೋಜನೆಯನ್ನು ಬಿಜೆಪಿಯವರಿಂದ ಸಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರ ವಿರುದ್ಧ ಷಡ್ಯಂತ್ರ ರೂಪಿಸುತ್ತಿದ್ದಾರೆ. ನಮಗೆ ಈ ನೆಲದ ಕಾನೂನಿನ ಮೇಲೆ ಗೌರವವಿದೆ. ನ್ಯಾಯ ಸಿಗುತ್ತದೆ ಎಂಬ ನಂಬಿಕೆಯಿದೆ” ಎಂದು ತಿಳಿಸಿದರು.

ತೀರ್ಪಿನ ಸಂಪೂರ್ಣ ಮಾಹಿತಿ ಪಡೆದು ಪ್ರತಿಕ್ರಿಯಿಸುತ್ತೇನೆ

ಸಿಎಂ ಹಾಗೂ ಸರ್ಕಾರಕ್ಕೆ ಇದು ಹಿನ್ನಡೆಯೇ ಎಂದು ಕೇಳಿದಾಗ, “ಇಲ್ಲಿ ಹಿನ್ನಡೆಯಾಗುವ ವಿಚಾರ ಏನಿದೆ? ತನಿಖೆ ನಡೆಯಬೇಕು ಎಂದು ಕೋರ್ಟ್ ಆದೇಶ ನೀಡಿರುವುದಾಗಿ ಮಾಧ್ಯಮಗಳು ಹೇಳುತ್ತಿವೆ. ಈ ತೀರ್ಪಿನ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ನಂತರ ಮಾತನಾಡುತ್ತೇನೆ. ನ್ಯಾಯಲಯದ ತೀರ್ಪು ಏನಿದೆ ಎಂದು ನಾನು ನೋಡಿಲ್ಲ. ಮಾಧ್ಯಮಗಳಿಂದ ವಿಚಾರ ತಿಳಿಯುತ್ತಿದೆ. ಸಂಪೂರ್ಣ ಮಾಹಿತಿ ಪಡೆದ ನಂತರ ಪ್ರತಿಕ್ರಿಯೆ ನೀಡುತ್ತೇನೆ.” ಎಂದು ತಿಳಿಸಿದರು.

Tags: BJPCongress PartyCourtDK ShivakumarDKShivakumarOrderಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಜಮ್ಮು ಕಾಶ್ಮೀರದಲ್ಲಿ ರಾಜ್ಯ ಸ್ಥಾನಮಾನ ಮರುಸ್ಥಾಪನೆ ;ರಾಹುಲ್‌ ಗಾಂಧಿ

Next Post

ಬಿಜೆಪಿ: ಜೆಡಿಎಸ್‌ನ ಒಳಸಂಚು, ರಾಜ್ಯಪಾಲರ ದುರ್ಬಳಕೆಗೆ ನಾನು ಹೆದರುವವನಲ್ಲ:ಸಿಎಂ ಪತ್ರಿಕಾಗೋಷ್ಠಿ

Related Posts

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?
Top Story

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

by ಪ್ರತಿಧ್ವನಿ
April 13, 2026
0

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಉಪಚುನಾವಣೆಯ ಬಳಿಕ ಇದೀಗ ಮತ್ತೆ ಸಂಪುಟ ವಿಸ್ತರಣೆಯ ಕೂಗು ಜೋರಾಗಿದೆ. ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ರಂಗ ಪ್ರವೇಶ ಮಾಡಿದ...

Read moreDetails
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

April 13, 2026
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
Next Post

ಬಿಜೆಪಿ: ಜೆಡಿಎಸ್‌ನ ಒಳಸಂಚು, ರಾಜ್ಯಪಾಲರ ದುರ್ಬಳಕೆಗೆ ನಾನು ಹೆದರುವವನಲ್ಲ:ಸಿಎಂ ಪತ್ರಿಕಾಗೋಷ್ಠಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada