ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸೋಲು ಅನುಭವಿಸಿರುವ ಹಿನ್ನೆಲೆಯಲ್ಲಿ ಈ ಸೋಲಿನ ನೈತಿಕ ಹೊಣೆ ಹೊತ್ತಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸೋಲಿನ ನೈತಿಕ ಹೊರೆ ಹೊತ್ತು ರಾಜೀನಾಮೆ ಸಲ್ಲಿಸಿದ್ದೇನೆ ಎಂದಿದ್ದಾರೆ.
ರಾಜೀನಾಮೆ ಪತ್ರವನ್ನು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ಡಿ ದೇವೇಗೌಡರಿಗೆ ಸಿಎಂ ಇಬ್ರಾಹಿಂ ರವಾನಿಸಿದ್ದಾರೆ ಎನ್ನಲಾಗಿದೆ. ಆದರೆ ಸಿಎಂ ಇಬ್ರಾಹಿಂ ರಾಜೀನಾಮೆ ಪತ್ರವನ್ನು ಅಂಗೀಕರಿಸದ ದೇವೇಗೌಡ ಸಿಎಂ ಇಬ್ರಾಹಿಂ ಮನವೊಲಿಸುವ ಯತ್ನ ಮಾಡುತ್ತಿದ್ದಾರೆ ಎನ್ನಲಾಗಿದೆ.
ಇನ್ನು ಸಿಎಂ ಇಬ್ರಾಹಿಂ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದು, ಯು.ಟಿ ಖಾದರ್ರನ್ನು ನೀವು ಡಿಸಿಎಂ ಮಾಡಬಹುದಿತ್ತು. ಆದರೆ ಅವರನ್ನು ಸ್ಪೀಕರ್ ಮಾಡಿ ಅವರು ಮಾತನಾಡದಂತೆ ಮಾಡಿದ್ದೀರಿ ಎಂದು ವ್ಯಂಗ್ಯವಾಡಿದ್ದಾರೆ.
