ತುಮಕೂರು : ಸಿಎಂ ಸಿದ್ದರಾಮಯ್ಯ (Siddaramiah) ಅವರು ಕರ್ನಾಟಕ ರತ್ನ ಶತಾಯುಷಿ ಪರಮಪೂಜ್ಯ ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ (shivakumara swamiji) ಸ್ಮರಣಾರ್ಥ ನಿರ್ಮಿಸಿರುವ “ಸ್ಮೃತಿ ವನ” ವನ್ನು ಉದ್ಘಾಟಿಸಿ, ಶ್ರೀಗಳ 5 ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
![](https://pratidhvani.com/wp-content/uploads/2024/01/IMG-20240121-WA0071-1024x683.webp)
ಪರಮಪೂಜ್ಯ ಸಿದ್ಧಲಿಂಗ ಮಹಾಸ್ವಸಮೀಜಿ, ತೋಂಟದಾರ್ಯ ಸಂಸ್ಥಾನ ಮಠದ ಡಾ.ಶ್ರೀ ತೋಂಟದ ಸಿದ್ಧರಾಮ ಮಹಾಸ್ವಾಮೀಜಿ, ಸಿದ್ಧಗಂಗಾ ಮಠದ ಉತ್ತರಾಧಿಕಾಧಿಕಾರಿಗಳಾದ ಶಿವ ಸಿದ್ಧೇಶ್ವರ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮಗಳು ನಡೆದವು.
![](https://pratidhvani.com/wp-content/uploads/2024/01/IMG-20240121-WA0076-1024x683.webp)
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವರಾದ ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ರಾಜಣ್ಣ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕರುಗಳಾದ ಜ್ಯೋತಿಗಣೇಶ್, ಸುರೇಶ್ ಗೌಡ, ಶ್ರೀನಿವಾಸ್ ಹಾಗೂ KRIDL ನ ಮಾಜಿ ಅಧ್ಯಕ್ಷ ಎಂ. ರುದ್ರೇಶ್ ಸೇರಿ ಹಲವು ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.