• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

ಬೆಂಗಳೂರಲ್ಲಿ ದಕ್ಷಿಣ ಭಾರತದಲ್ಲೇ ಪ್ರಪ್ರಥಮ ಹವಾನಿಯಂತ್ರಿತ ಪಾಲಿಕೆ ಬಜಾರ್ ಉದ್ಘಾಟಿಸಿದ ಸಿಎಂ

ಪ್ರತಿಧ್ವನಿ by ಪ್ರತಿಧ್ವನಿ
August 26, 2024
in ಅಂಕಣ, ಇತರೆ / Others, ಕರ್ನಾಟಕ
0
ಬೆಂಗಳೂರಲ್ಲಿ ದಕ್ಷಿಣ ಭಾರತದಲ್ಲೇ ಪ್ರಪ್ರಥಮ ಹವಾನಿಯಂತ್ರಿತ ಪಾಲಿಕೆ ಬಜಾರ್ ಉದ್ಘಾಟಿಸಿದ ಸಿಎಂ
Share on WhatsAppShare on FacebookShare on Telegram

ಬೆಂಗಳೂರು: ದಕ್ಷಿಣ ಭಾರತದಲ್ಲಿಯೇ ಪ್ರಪ್ರಥಮ ಹವಾನಿಯಂತ್ರಿತ ʼಶ್ರೀ ಕೃಷ್ಣದೇವರಾಯ ಪಾಲಿಕೆ ಬಜಾರ್ʼ (Krishnadevaraya Palika Bazaar) ಅನ್ನು ಬೆಂಗಳೂರಿನ ವಿಜಯನಗರ ಕ್ಷೇತ್ರ ವ್ಯಾಪ್ತಿಯ ಮೆಟ್ರೊ ನಿಲ್ದಾಣದ ಬಳಿ ಸಿಎಂ ಸಿದ್ದರಾಮಯ್ಯ ಅವರು ಭಾನುವಾರ ಉದ್ಘಾಟಿಸಿದರು.

ADVERTISEMENT

ಬೀದಿ ವ್ಯಾಪಾರಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಹವಾನಿಯಂತ್ರಿತ ಪಾಲಿಕೆ ಬಜಾರ್ ನಿರ್ಮಿಸಲಾಗಿದ್ದು, ಇಲ್ಲಿ 79 ಮಳಿಗೆಗಳಿವೆ. ದಕ್ಷಿಣ ಭಾರತದಲ್ಲಿಯೇ ಇಂತಹ ಹವಾನಿಯಂತ್ರಿತ ಪಾಲಿಕೆ ಬಜಾರ್ ನಿರ್ಮಿತವಾಗಿರುವುದು ಇದೇ ಮೊದಲು.

ಪಾಲಿಕೆ ಬಜಾರ್ ಲೋಕಾರ್ಪಣೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಬೀದಿ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಹವಾನಿಯಂತ್ರಿತ ಪಾಲಿಕೆ ಬಜಾರ್ ನಿರ್ಮಿಸುವಂತೆ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಿಗೆ ಸೂಚನೆ ನೀಡಿದರು.

ಪಾಲಿಕೆ ಬಜಾರ್ ಸರ್ಕಾರದ ಜನಪರ ಚಿಂತನೆಯ ಯೋಜನೆ.

ಪಾಲಿಕೆ ಬಜಾರ್‌ಗೆ ಕೃಷ್ಣದೇವರಾಯ ಪಾಲಿಕೆ ಬಜಾರ್ ಎಂದು ನಾಮಕರಣ ಮಾಡಿರುವುದು ಶ್ಲಾಘನೀಯ. ಪಾಲಿಕೆ ಬಜಾರ್ ಸರ್ಕಾರದ ಜನಪರ ಚಿಂತನೆಯ ಯೋಜನೆ. ಇಂದು ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ 13 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇಂತಹ ಬಜಾರ್‌ಗಳು ಬೆಂಗಳೂರಿನ ಅನೇಕ ಸ್ಥಳಗಳಲ್ಲಿ ವಿಶೇಷವಾಗಿ ಗಾಂಧಿಬಜಾರ್‌ನಂತಹ ಜನನಿಬಿಡ ಪ್ರದೇಶಗಳಲ್ಲಿ ನಿರ್ಮಿಸುವ ಅಗತ್ಯವಿದೆ ಎಂದರು.

ವಿಜಯನಗರ ನನಗೆ ಚಿರಪರಿಚಿತ ತಾನು ಈ ಹಿಂದೆಯೂ ವಿಜಯನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ನೆನಪನ್ನು ಮೆಲಕು ಹಾಕಿದ ಮುಖ್ಯಮಂತ್ರಿಗಳು , ಈ ಪ್ರದೇಶ ನನಗೆ ಬಹಳ ಚಿರಪರಿಚಿತವಾಗಿದೆ ಎಂದರು. ವ್ಯಾಪಾರಿಗಳ ಪರಿಸ್ಥಿತಿಯನ್ನು ಆಗನಿಂದಲೇ ಗಮನಿಸಿದ್ದ ನನಗೆ, ಶಾಸಕ ಕೃಷ್ಣಪ್ಪನವರ ಬೇಡಿಕೆ ಸಮಂಜಸವಾಗಿದೆ ಎನ್ನಿಸಿತ್ತು ಎಂದು ತಿಳಿಸಿದರು.

ಎಂ.ಕೃಷ್ಣಪ್ಪ ಅವರ ಕನಸಿನ ಯೋಜನೆ.ವಿಜಯನಗರ ವಿಧಾನಸಭಾಕ್ಷೇತ್ರದಲ್ಲಿ ಕೃಷ್ಣದೇವರಾಯ ಪಾಲಿಕೆ ಬಜಾರ್ ಯೋಜನೆ ಇಲ್ಲಿನ ಶಾಸಕರಾದ ಎಂ.ಕೃಷ್ಣಪ್ಪ ಅವರ ಕನಸು. ಇಲ್ಲಿನ ಬೀದಿವ್ಯಾಪಾರಿಗಳು ಬಿಸಿಲು ಗಾಳಿ ಮಳೆಯಲ್ಲಿ ವ್ಯಾಪಾರ ಮಾಡಬೇಕಾಗಿದ್ದು, ಅವರಿಗೆ ವ್ಯಾಪಾರ ಮಾಡಲು ಸ್ಥಳಾವಕಾಶ ಮಾಡಿಕೊಡಲು ಬೇಡಿಕೆಯಿರಿಸಿದ್ದರು. ನಾನು 2017 ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ , ಪಾಲಿಕೆ ಬಜಾರ್‌ಗಳ ನಿರ್ಮಾಣಕ್ಕೆ 5 ಕೋಟಿ ರೂ.ಗಳ ಅನುದಾನಕ್ಕೆ ಅನುಮೋದನೆ ನೀಡಿದ್ದು, ಇಂದು ನಾನೇ ಈ ಬಜಾರ್ ನ್ನು ಉದ್ಘಾಟಿಸುತ್ತಿರುವುದು ಸಂತೋಷ ತಂದಿದೆ ಎಂದರು.

ಬೆಂಗಳೂರು ನಗರ ಬಹಳ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಬಸ್ ನಿಲ್ದಾಣ ಹಾಗೂ ಮೆಟ್ರೋ ರೈಲು ನಿಲ್ದಾಣವಿರುವ ಸೂಕ್ತ ಸ್ಥಳದಲ್ಲಿ ಪಾಲಿಕೆ ಬಜಾರ್ ನಿರ್ಮಾಣವಾಗಿದೆ. ಇದರಿಂದ ಬಹಳ ಜನರಿಗೆ ಅನುಕೂಲವಾಗಲಿದೆ. ಒಂದೇ ಕಡೆ ಎಲ್ಲಾ ವ್ಯಾಪಾರ ಮಾಡುವವರಿಗೆ ವ್ಯವಸ್ಥೆ ಕಲ್ಪಿಸಿದ್ದು, ನಾಗರಿಕರಿಗೆ ಅನುಕೂಲವಾಗಲಿದೆ ಎಂದರು.

ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ.

ನಮ್ಮ ಸರ್ಕಾರ ಜನರಿಗೆ ಮಾತು ನೀಡಿದ್ದಂತೆ ಎಲ್ಲಾ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಅಧಿಕಾರಕ್ಕೆ ಬಂದು ಒಂದು ವರ್ಷ ಮೂರು ತಿಂಗಳಲ್ಲಿ ನಮ್ಮ ಐದು ಕಾರ್ಯಕ್ರಮಗಳನ್ನು ಜಾರಿ ಮಾಡಲಾಗಿದೆ. ಎಲ್ಲಾ ಧರ್ಮ, ಜಾತಿಯ ಬಡವರಿಗೆ ಈ ಕಾರ್ಯಕ್ರಮಗಳನ್ನು ತಲುಪಿಸುವ ಪ್ರಯತ್ನ ಮಾಡುತ್ತಿದ್ದೇವೆ. ವಿರೋಧ ಪಕ್ಷದವರು ಈ ಕಾರ್ಯಕ್ರಮಗಳ ಜಾರಿಗೆ ಮುನ್ನ ಹಾಗೂ ನಂತರದಲ್ಲಿ ಬಹಳ ಟೀಕೆ ಮಾಡುತ್ತಿದ್ದರು. ಲೋಕಸಭಾ ಚುನಾವಣೆ ನಂತರ ಯೋಜನೆಗಳನ್ನು ನಿಲ್ಲಿಸುವುದಾಗಿಯೂ ಹೇಳಿದ್ದರು.

ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವ ಪ್ರಯತ್ನ.

ಅಭಿವೃದ್ಧಿ ಯೋಜನೆಗಳಿಗೆ 1 ಲಕ್ಷದ 60 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗುತ್ತಿದೆ. ಬೆಂಗಳೂರಿನ ಅಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಮಂಜೂರು ಮಾಡಿದ್ದೇವೆ. ಬೆಂಗಳೂರು ನಗರವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲು ಹಾಗೂ ಬ್ರಾಂಡ್ ಬೆಂಗಳೂರು ಮಾಡುವುದು ನಮ್ಮ ಉದ್ದೇಶ. ಆ ದಿಕ್ಕಿನಲ್ಲಿ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು ಎಂದರು.

Tags: CM Siddaramaiah‌Congress PartyKrishnadevaraya Palika Bazaar
Previous Post

ಮಂಡ್ಯ :ಸಿ.ಎಂ.ಸಿದ್ರಾಮಯ್ಯ ಪರ ಬಿಜೆಪಿ ನಾಯಕ ಎಲ್‌.ಆರ್‌.ಎಸ್ ಬ್ಯಾಟಿಂಗ್

Next Post

ಸದ್ದು ಮಾಡುತ್ತಿದೆ “UI” ಚಿತ್ರದ “ಸೌಂಡ್ ಆಫ್ ಯುಐ”

Related Posts

ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..
Top Story

ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

by ಪ್ರತಿಧ್ವನಿ
April 13, 2026
0

ಬೆಂಗಳೂರು : ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು 18430.44 ಕೋಟಿ ರೂ. ಮೊತ್ತದ ಬಂಡವಾಳ...

Read moreDetails
ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬಳಕೆದಾರರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಗುಡ್‌ನ್ಯೂಸ್‌ ಏನದು?

ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬಳಕೆದಾರರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಗುಡ್‌ನ್ಯೂಸ್‌ ಏನದು?

April 13, 2026
“ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆ ದೇವರಾಗಿದೆ”

“ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆ ದೇವರಾಗಿದೆ”

April 13, 2026
ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

April 13, 2026
ಒಳದನಿಗೆ ಜೀವತುಂಬಿದ ʼ ಪ್ರತಿಧ್ವನಿ ʼ ಯೊಡನೆ- ನಾ ದಿವಾಕರ  ಲೇಖನ

ಒಳದನಿಗೆ ಜೀವತುಂಬಿದ ʼ ಪ್ರತಿಧ್ವನಿ ʼ ಯೊಡನೆ- ನಾ ದಿವಾಕರ  ಲೇಖನ

April 13, 2026
Next Post

ಸದ್ದು ಮಾಡುತ್ತಿದೆ "UI" ಚಿತ್ರದ "ಸೌಂಡ್ ಆಫ್ ಯುಐ"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada