• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಅವರಿಂದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ

ಪ್ರತಿಧ್ವನಿ by ಪ್ರತಿಧ್ವನಿ
September 1, 2025
in Top Story, ಕರ್ನಾಟಕ, ರಾಜಕೀಯ
0
ಸಿಎಂ ಅವರಿಂದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ
Share on WhatsAppShare on FacebookShare on Telegram

ನನ್ನ ಊರಿನ ಋಣ ನನ್ನ ಮೇಲೆ ಸದಾ ಇರುತ್ತದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ADVERTISEMENT

ಮೈಸೂರು, ಸಿದ್ಧರಾಮನಹುಂಡಿ, ಸೆಪ್ಟೆಂಬರ್ 01: ಊರಿನ ಋಣ ಯಾವಾಗಲೂ ನನ್ನ ಮೇಲೆ ಇದ್ದೇ ಇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾಧ್ಯಮದವರ ಜೊತೆ ಮಾತನಾಡಿದರು.‌

ನನ್ನ ಊರಿನ ಶಾಲೆಯಲ್ಲಿ ನಾನು ಐದರಿಂದ ಏಳರವರೆಗೆ ಓದಿದ ಶಾಲೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ದತ್ತು ಪಡೆದಿದೆ. ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನೂತನ ಕಟ್ಟಡವನ್ನು ನಿರ್ಮಿಸ ಲಾಗಿದೆ. ಈ ಕಟ್ಟಡವನ್ನು ಅತ್ಯಂತ ಸಂತೋಷದಿಂದ ಉದ್ಘಾಟಿಸಿದ್ದೇನೆ ಎಂದರು

Zameer Ahmed :  ಮಾಧ್ಯಮದವರಿಗೆ ಹೆದರಿ ಜಮೀರ್‌ ?  #pratidhvani

ಪ್ರಾರ್ಥಮಿಕ, ಪ್ರೌಢಶಾಲೆ, ಪಿಯು ಕಾಲೇಜು ಇಲ್ಲಿ ನಡೆಯುತ್ತಿದೆ. ಪದವಿ ಕಾಲೇಜಿಗೆ ವಿದ್ಯಾರ್ಥಿಗಳು ದೊರೆಯುವುದಿಲ್ಲ ಎಂದು ಪದವಿ ಕೋರ್ಸು ತೆರೆದಿಲ್ಲ ಎಂದರು. ಆದರೆ ಊರಿನಲ್ಲಿ ಇತರೆ ಸೌಲಭ್ಯಗಳಾದ ಬಿಸಿಎಂ ವಿದ್ಯಾರ್ಥಿ ನಿಲಯ, ಪಶು ಚಿಕಿತ್ಸಾ ಕೇಂದ್ರ , ಗ್ರಂಥಾಲಯ, ಸಮುದಾಯ ಆರೋಗ್ಯ ಕೇಂದ್ರಗಳು ಇವೆ ಎಂದರು.

ಸರ್ಕಾರದ ಅಭಿವೃದ್ಧಿಯನ್ನು ಕಾಣದಿರುವ ಬಿಜೆಪಿಯವರಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೇನೂ ಗೊತ್ತಿಲ್ಲ ಎಂದರು.

ಧರ್ಮಸ್ಥಳಕ್ಕೆ ಬಿಜೆಪಿ ಯಾತ್ರೆ: ರಾಜಕೀಯ ಲಾಭ ಸಿಗುವುದಿಲ್ಲ
ಬಿಜೆಪಿಯವರು ಧರ್ಮಸ್ಥಳಕ್ಕೆ ಯಾತ್ರೆ ಕೈಗೊಂಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಬಿಜೆಪಿ ರಾಜಕೀಯವಾಗಿ ಯಾತ್ರೆ ಕೈಗೊಂಡಿದೆ. ಅವರಿಗೆ ರಾಜಕೀಯ ಲಾಭ ಸಿಗುತ್ತದೆ ಎಂದು ಭಾವಿಸಿದ್ದಾರೆ. ಆದರೆ ಅದು ಸಿಗುವುದಿಲ್ಲ. ಏಕೆಂದರೆ ಧರ್ಮಸ್ಥಳದ ಬಗ್ಗೆ ನಮಗೆ ಅಪಾರವಾದ ಗೌರವವಿದೆ. ಎಸ್ಐಟಿ ರಚಿಸಿದಾಗ ವಿರೋಧ ಮಾಡದೆ ಇದ್ದವರು, ನಂತರದಲ್ಲಿ ಏನೂ ಸಿಗುವುದಿಲ್ಲ ಎಂದು ತಿಳಿದು ವಿರೋಧಿಸುತ್ತಿದ್ದಾರೆ. ಇದು ಢೋಂಗಿತನ ಎಂದರು.

ಬಿಜೆಪಿ ದಸರಾ ಹಬ್ಬದಲ್ಲೂ ರಾಜಕಾರಣ ಮಾಡುತ್ತಿದ್ದಾರೆ.
ಮೈಸೂರಿಗೂ ಚಾಮುಂಡಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿರುವ ಬಗ್ಗೆ ಮಾತನಾಡಿ ಬಿಜೆಪಿಯವರು ಹಿಂದುತ್ವ ಗಟ್ಟಿಯಾಗುತ್ತದೆ, ಹಿಂದೂಗಳೆಲ್ಲ ಒಟ್ಟಾಗುತ್ತಾರೆ ಎಂದು ತಿಳಿದಿದ್ದಾರೆ. ನಾನೂ ಕೂಡ ಹಿಂದೂವೇ. ನಮ್ಮೂರಿನಲ್ಲಿ ನಾವು ರಾಮಮಂದಿರ ಕಟ್ಟಿಲ್ಲವೇ? ಎಂದು ಪ್ರಶ್ನಿಸಿದರು. ಹಿಂದುಗಳೆಂದರೆ ರಾಜಕೀಯ, ಅಪಪ್ರಚಾರ ಮಾಡುವುದಲ್ಲ, ಸುಳ್ಳು ಹೇಳುವುದಲ್ಲ. ಯಾರೇ ಆದರೂ ಮನಷ್ಯತ್ವವಿರಬೇಕು ಎಂದರು. ಬಿಜೆಪಿ ದಸರಾ ಹಬ್ಬದಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಸುಳ್ಳು ಹೇಳುವುದು ಬಿಟ್ಟು ಬೇರೇನಾದರೂ ಅವರಿಗೆ ಬರುತ್ತದೆಯೇ ಎಂದರು.

ಬಾನು ಮುಷ್ತಾಕ್ ಅವರಿಗೆ ಉದ್ಘಾಟನೆಗೆ ಆಹ್ವಾನ
ಬಾನು ಮುಷ್ತಾಕ್ ಅವರಿಗೆ ಬುಕರ್ ಪ್ರಶಸ್ತಿ ದೊರಕಿದ್ದು, ಎಷ್ಟು ಜನಕ್ಕೆ ಈ ಪ್ರಶಸ್ತಿ ಲಭಿಸಿದೆ ಎಂದ ಮುಖ್ಯಮಂತ್ರಿಗಳು, ಅವರನ್ನು ಗೌರವಿಸಲು ದಸರಾ ಉದ್ಘಾಟನೆಗೆ ಅವಕಾಶ ನೀಡಲಾಗಿದೆ ಎಂದವರು.

ದಸರಾ ಮೇಲೆ ರಾಜಕಾರಣ ಯಾವುದೇ ಪರಿಣಾಮ ಬೀರುವುದಿಲ್ಲ

ಯಾವುದೇ
ದಸರಾ ಹಬ್ಬದ ಮೇಲೆ ಈ ರಾಜಕಾರಣ ಯಾವುದೇ ಪರಿಣಾಮ ಬೀರುವುದಿಲ್ಲ ಎಂದ ಮುಖ್ಯಮಂತ್ರಿಗಳು, ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯೇ ಇರಬಹುದು. ದಸರಾ ಹಬ್ಬ ನಾಡ ಹಬ್ಬವಲ್ಲವೇ? ನಾಡ ಹಬ್ಬ ಎಂದರೆ ಎಲ್ಲರೂ ಸೇರಿ ಮಾಡುವುದು. ಹಿಂದೂ, ಮುಸಲ್ಮಾನರು, ಕ್ರಿಶ್ಚಿಯನ್ನರು, ಬೌದ್ಧರು ಸೇರಿ ಆಚರಿಸುವ ಹಬ್ಬ ಎಂದರು.

ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ವಿಷಯ ಇರುವುದು ಚಾಮುಂಡಿ ಬೆಟ್ಟದ್ದಲ್ಲ, ದಸರಾ ಹಬ್ಬದ್ದು ಎಂದರು.

ಸಚಿವರಾದ ವೆಂಕಟೇಶ್ ಮತ್ತು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Supa Dam: ಪ್ರವಾಹದ ಅಂತಿಮ ಮುನ್ನೆಚ್ಚರಿಕೆ ನೀಡಿದ ಕೆಪಿಸಿಸಿಎಲ್

Next Post

AIISH ಸಂಸ್ಥೆಗೆ ವರುಣಾ ಕ್ಷೇತ್ರದಲ್ಲಿ 10 ಎಕರೆ ಜಾಗ ಒದಗಿಸಿದ್ದೇವೆ: ಸಿ.ಎಂ ಘೋಷಣೆ..!!

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post

AIISH ಸಂಸ್ಥೆಗೆ ವರುಣಾ ಕ್ಷೇತ್ರದಲ್ಲಿ 10 ಎಕರೆ ಜಾಗ ಒದಗಿಸಿದ್ದೇವೆ: ಸಿ.ಎಂ ಘೋಷಣೆ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada