• Home
  • About Us
  • ಕರ್ನಾಟಕ
Tuesday, July 8, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

CM Siddaramaiah: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರನ್ನು ಭೇಟಿ ಮಾಡಿದ ಸಿ.ಎಂ. ಸಿದ್ದರಾಮಯ್ಯ..

ಪ್ರತಿಧ್ವನಿ by ಪ್ರತಿಧ್ವನಿ
June 24, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ರವರು ಇಂದು ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ರಾಜ್ಯಗಳ ನಡುವೆ ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಬೆಳವಣಿಗೆಗೆ ಪೂರಕವಾಗಿರುವ ವಿಧಾನವನ್ನು ಅನುಸರಿಸಲು 16 ನೇ ಹಣಕಾಸು ಆಯೋಗಕಕ್ಕೆ ಪ್ರತಿಪಾದಿಸುವಂತೆ ಕೇಂದ್ರ ಸರ್ಕಾರವನ್ನು ವಿನಂತಿಸಿದರು.

ADVERTISEMENT

15 ನೇ ಹಣಕಾಸು ಆಯೋಗವು ತನ್ನ ಶಿಫಾರಸ್ಸಿನಲ್ಲಿ ಕರ್ನಾಟಕದ ತೆರಿಗೆ ಪಾಲನ್ನು ಶೇ.4.713 ರಿಂದ ಶೇ.3.647 ಕ್ಕೆ ಇಳಿಕೆ ಮಾಡಿದ್ದರಿಂದ ರಾಜ್ಯದ ತೆರಿಗೆ ಪಾಲು 14ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಶೇ.23ರಷ್ಟು ಕಡಿಮೆಯಾಗಿರುವುದರ ಕುರಿತು ಮಾನ್ಯ ಮುಖ್ಯಮಂತ್ರಿಗಳು ಕೇಂದ್ರ ಹಣಕಾಸು ಸಚಿವರಿಗೆ ವಿವರಿಸಿದರು. ಇದಲ್ಲದೆ, 15 ನೇ ಹಣಕಾಸು ಆಯೋಗವು ರಾಜ್ಯಕ್ಕೆ ಶಿಫಾರಸ್ಸು ಮಾಡಿದ್ದ ರೂ.11,495 ಕೋಟಿಗಳ ವಿಶೇಷ ಅನುದಾನವು ಸಿಗದ ಕಾರಣ, ಒಟ್ಟಾರೆಯಾಗಿ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಒಟ್ಟು ರೂ.80,000 ಕೋಟಿಗಳು ರಾಜ್ಯಕ್ಕೆ ನಷ್ಟವಾಗಿರುವುದನ್ನು ಮುಖ್ಯಮಂತ್ರಿಗಳು ತಿಳಿಸಿರುತ್ತಾರೆ.

15ನೇ ಹಣಕಾಸು ಆಯೋಗವು ರಾಜ್ಯಗಳ ನಡುವೆ ತೆರಿಗೆ ಹಂಚಿಕೆಯ ಸುತ್ರವನ್ನು ಲೆಕ್ಕಮಾಡಲು ಆದಾಯ-ದೂರ (income-distance) ಮಾನದಂಡದ ಮೇಲೆ ಅತಿಯಾಗಿ ಅವಲಂಬಿಸಿದ ಕಾರಣ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಹೆಚ್ಚಿನ ನಷ್ಟವಾಯಿತು. 15 ನೇ ಹಣಕಾಸು ಆಯೋಗವು ಆದಾಯ-ದೂರ ಮಾನದಂಡಕ್ಕೆ ಶೇ.45 ರಷ್ಟು ಅಂಕವನ್ನು ನೀಡಿತ್ತು. ರಾಜ್ಯಕ್ಕೆ ಇದರಿಂದ ಉಂಟಾದ ನಷ್ಟವನ್ನು ತಪ್ಪಿಸುವ ಸಲುವಾಗಿ ಆದಾಯ-ದೂರ ಮಾನದಂಡದ ಅಂಕವನ್ನು ಶೇ.20 ರಷ್ಟು ಕಡಿಮೆ ಮಾಡಿ, ದೇಶದ ಆರ್ಥಿಕ ಪ್ರಗತಿಗೆ (GDP) ರಾಜ್ಯಗಳು ನೀಡುವ ಕೊಡುಗೆಯನ್ನು ಪರಿಗಣಿಸಬೇಕು ಹಾಗೂ ಇದಕ್ಕೆ ಶೇ.20 ರಷ್ಟು ಅಂಕವನ್ನು ನೀಡಬೇಕೆಂದು ಮನವಿ ಮಾಡಿದರು.

ಹಣಕಾಸು ಆಯೋಗವು ಶಿಫಾರಸ್ಸು ಮಾಡುವ ರಾಜಸ್ವ ಕೊರತೆ ಅನುದಾನಗಳನ್ನು ನಿಲ್ಲಿಸಲು ನಾವು ವಿನಂತಿಸಿದ್ದೇವೆ, ಏಕೆಂದರೆ ಅವು ವಿತ್ತೀಯ ಹೊಣೆಗಾರಿಕೆ ಅಧಿನಿಯಮದ (FRBM) ಚೌಕಟ್ಟಿನಲ್ಲಿ ಪ್ರಸ್ತಾಪಿಸಲಾದ ಆರ್ಥಿಕ ಶಿಸ್ತಿನ ತತ್ವಗಳಿಗೆ ವಿರುದ್ಧವಾಗಿವೆ. 15ನೇ ಹಣಕಾಸು ಆಯೋಗವು, ಒಟ್ಟು ಕೇಂದ್ರ ಸ್ವೀಕೃತಿಗಳ ಶೇ.1.92 ರಷ್ಟನ್ನು ರಾಜಸ್ವ ಕೊರತೆ ಅನುದಾನಗಳೆಂದು ಶಿಫಾರಸ್ಸು ಮಾಡಿತ್ತು. ಆದ್ದರಿಂದ ಕೇಂದ್ರ ಸರ್ಕಾರದ ಒಟ್ಟು ಸ್ವೀಕೃತಿಗಳ ಶೇ.1.92 ರಷ್ಟು ಮೊತ್ತವನ್ನು ತೆರಿಗೆ ಹಂಚಿಕೆಯ ಸೂತ್ರದ ಆಧಾರದ ಮೇಲೆ ಎಲ್ಲಾ ರಾಜ್ಯಗಳಿಗೂ ಹಂಚಿಕೆ ಮಾಡಬೇಕೆಂದು ನಾವು ಪ್ರಸ್ತಾಪಿಸಿದ್ದೇವೆ.

ಮುಖ್ಯಮಂತ್ರಿಯವರು ಬೆಂಗಳೂರು, ಕಲ್ಯಾಣ ಕರ್ನಾಟಕ ಮತ್ತು ಮಲೆನಾಡು ಪ್ರದೇಶದ ಅಭಿವೃದ್ಧಿ ಸವಾಲುಗಳನ್ನು ಸಹ ಹಣಕಾಸು ಸಚಿವರ ಮುಂದೆ ಪ್ರಸ್ತಾಪಿಸಿದರು. ರಾಜ್ಯಗಳ ಬೆಳವಣಿಗೆಯನ್ನು ಉತ್ತೇಜಿಸಲು ನ್ಯಾಯಯುತ ಮತ್ತು ಬೆಳವಣಿಗೆಗೆ ಪೂರಕವಾಗುವ ತೆರಿಗೆ ಹಂಚಿಕೆಯ ಅವಶ್ಯಕತೆಯನ್ನು ಮನವರಿಕೆ ಮಾಡಿದರು.

ಕರ್ನಾಟಕದ ಪ್ರಸ್ತಾವನೆಗಳು ವಿಶೇಷ ಪ್ರಕರಣವೆಂದು ಪರಿಗಣಿಸದೆ, ಇದು ಒಟ್ಟಾರೆ ರಾಷ್ಟ್ರೀಯ ಸಂಪನ್ಮೂಲ ಕ್ರೋಢೀಕರಣಕ್ಕಾಗಿ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಪ್ರಸ್ತಾವನೆಗಳಾಗಿವೆ ಎಂದು ಮುಖ್ಯಮಂತ್ರಿಯವರು ಹೇಳಿದರು.

16ನೇ ಹಣಕಾಸು ಆಯೋಗಕ್ಕೆ ಕೇಂದ್ರ ಸರ್ಕಾರ ಸಲ್ಲಿಸುವ ಜ್ಞಾಪಕ ಪತ್ರದಲ್ಲಿ ರಾಜ್ಯ ಸರ್ಕಾರದ ಈ ಪ್ರಸ್ತಾವನೆಗಳನ್ನು ಸೇರಿಸುವಂತೆ ಹಣಕಾಸು ಸಚಿವರಿಗೆ ಮನವಿ ಮಾಡುವ ಮೂಲಕ, ಎಲ್ಲಾ ರಾಜ್ಯಗಳು ದೇಶದ ಅಭಿವೃದ್ಧಿಗೆ ಹೆಚ್ಚು ಪರಿಣಾಮಕಾರಿಯಾಗಿ ಕೊಡುಗೆ ನೀಡಲು ಬೆಳವಣಿಗೆ ಆಧಾರಿತ ತೆರಿಗೆ ಹಂಚಿಕೆ ಅವಶ್ಯಕ ಎಂದು ಒತ್ತಿ ಹೇಳುವುದರೊಂದಿಗೆ ಸಭೆ ಮುಕ್ತಾಯವಾಯಿತು.

Tags: BJPCentral MinisterCM SiddaramaiahcongressCongress PartyINCMinisternirmala seetharamansiddaramaiahಬಿಜೆಪಿ
Previous Post

HD Kumarswamy: ಮಾವು ಬೆಳೆಗಾರರ ನೆರವಿಗೆ ಬರುವಂತೆ ಮನವಿ ಪತ್ರ ಬರೆದ ಹೆಚ್.ಡಿ ಕುಮಾರಸ್ವಾಮಿ.

Next Post

Music Director Hamsalekha: ಹಂಸಲೇಖ ನಿರ್ದೇಶನದ ‘ಓಕೆ’ ಸಿನಿಮಾಗೆ ಹಾರೈಸಿದ ರವಿಚಂದ್ರನ್..

Related Posts

ತುರ್ತುಪರಿಸ್ಥಿತಿ- ಆಳ್ವಿಕೆಯ ಮಾದರಿ ಕಲ್ಪಿಸಿದ ವಿದ್ಯಮಾನ
ದೇಶ

ತುರ್ತುಪರಿಸ್ಥಿತಿ- ಆಳ್ವಿಕೆಯ ಮಾದರಿ ಕಲ್ಪಿಸಿದ ವಿದ್ಯಮಾನ

by ನಾ ದಿವಾಕರ
July 8, 2025
0

----ನಾ ದಿವಾಕರ---- ಪ್ರಜಾತಂತ್ರದ ಚೌಕಟ್ಟಿನ ಒಳಗೇ ಆಳ್ವಿಕೆಯನ್ನು ಬಿಗಿಗೊಳಿಸುವ ಒಂದು ಆಡಳಿತದ Template (ತುರ್ತುಪರಿಸ್ಥಿತಿ – ಕಲಿತಿರುವುದೇನು ಕಲಿಯಬೇಕಾದ್ದು ಏನು ? ಮಂದುವರೆದ ಭಾಗ) ವಿಶ್ವದ ಯಾವುದೇ...

Read moreDetails

Priyanka Kharge: ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಎಚ್ಚರಿಕೆ ವಹಿಸಿ: ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

July 7, 2025

Dinesh Gundu Rao: ಹೃದಾಯಾಘಾತಗಳಿಗೆ ಕೋವಿಡ್ ಲಸಿಕೆ ನೇರ ಕಾರಣವಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

July 7, 2025
ಪೇಮೆಂಟ್ ಪಡೆದು ಪ್ರೊಟೆಸ್ಟ್ ಮಾಡುವ ಕಾಂಗ್ರೆಸ್ಸಿಗರೇ..! – ಮೇಕೆದಾಟುಗೆ DMK ತಕರಾರಿಗೆ ನಿಮ್ಮ ಬದ್ಧತೆ ಏನು ..?! : ಜೆಡಿಎಸ್ ಪ್ರಶ್ನೆ 

ಪೇಮೆಂಟ್ ಪಡೆದು ಪ್ರೊಟೆಸ್ಟ್ ಮಾಡುವ ಕಾಂಗ್ರೆಸ್ಸಿಗರೇ..! – ಮೇಕೆದಾಟುಗೆ DMK ತಕರಾರಿಗೆ ನಿಮ್ಮ ಬದ್ಧತೆ ಏನು ..?! : ಜೆಡಿಎಸ್ ಪ್ರಶ್ನೆ 

July 7, 2025
ಈಗ ದೇಶದಲ್ಲಿ ಗಂಟಾದ ತ್ರಿಭಾಷೆ-V/S ದ್ವಿಭಾಷಾ ಸೂತ್ರ

ಈಗ ದೇಶದಲ್ಲಿ ಗಂಟಾದ ತ್ರಿಭಾಷೆ-V/S ದ್ವಿಭಾಷಾ ಸೂತ್ರ

July 7, 2025
Next Post

Music Director Hamsalekha: ಹಂಸಲೇಖ ನಿರ್ದೇಶನದ ‘ಓಕೆ’ ಸಿನಿಮಾಗೆ ಹಾರೈಸಿದ ರವಿಚಂದ್ರನ್..

Recent News

Top Story

Priyanka Kharge: ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಎಚ್ಚರಿಕೆ ವಹಿಸಿ: ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

by ಪ್ರತಿಧ್ವನಿ
July 7, 2025
Top Story

Dinesh Gundu Rao: ಹೃದಾಯಾಘಾತಗಳಿಗೆ ಕೋವಿಡ್ ಲಸಿಕೆ ನೇರ ಕಾರಣವಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

by ಪ್ರತಿಧ್ವನಿ
July 7, 2025
ಪೇಮೆಂಟ್ ಪಡೆದು ಪ್ರೊಟೆಸ್ಟ್ ಮಾಡುವ ಕಾಂಗ್ರೆಸ್ಸಿಗರೇ..! – ಮೇಕೆದಾಟುಗೆ DMK ತಕರಾರಿಗೆ ನಿಮ್ಮ ಬದ್ಧತೆ ಏನು ..?! : ಜೆಡಿಎಸ್ ಪ್ರಶ್ನೆ 
Top Story

ಪೇಮೆಂಟ್ ಪಡೆದು ಪ್ರೊಟೆಸ್ಟ್ ಮಾಡುವ ಕಾಂಗ್ರೆಸ್ಸಿಗರೇ..! – ಮೇಕೆದಾಟುಗೆ DMK ತಕರಾರಿಗೆ ನಿಮ್ಮ ಬದ್ಧತೆ ಏನು ..?! : ಜೆಡಿಎಸ್ ಪ್ರಶ್ನೆ 

by Chetan
July 7, 2025
ಈಗ ದೇಶದಲ್ಲಿ ಗಂಟಾದ ತ್ರಿಭಾಷೆ-V/S ದ್ವಿಭಾಷಾ ಸೂತ್ರ
Top Story

ಈಗ ದೇಶದಲ್ಲಿ ಗಂಟಾದ ತ್ರಿಭಾಷೆ-V/S ದ್ವಿಭಾಷಾ ಸೂತ್ರ

by ಪ್ರತಿಧ್ವನಿ
July 7, 2025
Priyanka Kharge: ಪ್ರತಾಪ್ ಸಿಂಹ ಔಟ್ ಡೇಟೆಡ್ ರಾಜಕಾರಣಿ – ನನ್ನ ಬಗ್ಗೆ ಮಾತಾಡಿದ್ರೆ ಮಾರ್ಕೆಟ್ ಕುದುರಲ್ಲ ..! : ಸಿಂಹಗೆ ಖರ್ಗೆ ಕ್ಲಾಸ್
Top Story

Priyanka Kharge: ಪ್ರತಾಪ್ ಸಿಂಹ ಔಟ್ ಡೇಟೆಡ್ ರಾಜಕಾರಣಿ – ನನ್ನ ಬಗ್ಗೆ ಮಾತಾಡಿದ್ರೆ ಮಾರ್ಕೆಟ್ ಕುದುರಲ್ಲ ..! : ಸಿಂಹಗೆ ಖರ್ಗೆ ಕ್ಲಾಸ್

by Chetan
July 7, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತುರ್ತುಪರಿಸ್ಥಿತಿ- ಆಳ್ವಿಕೆಯ ಮಾದರಿ ಕಲ್ಪಿಸಿದ ವಿದ್ಯಮಾನ

ತುರ್ತುಪರಿಸ್ಥಿತಿ- ಆಳ್ವಿಕೆಯ ಮಾದರಿ ಕಲ್ಪಿಸಿದ ವಿದ್ಯಮಾನ

July 8, 2025

Priyanka Kharge: ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಎಚ್ಚರಿಕೆ ವಹಿಸಿ: ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

July 7, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!