ಕರ್ನಾಟಕದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿರುವ ಕುರಿತು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪ ಮಾಡಿರುವ ಬೆನ್ನಲ್ಲೇ, ಬಿಬಿಎಂಪಿ ಚೀಫ್ ಇಂಜಿನಿಯರ್‌ರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ವರ್ಗಾವಣೆಯ ನಿರ್ಧಾರಗಳು ವಿಧಾನಸೌಧದಲ್ಲಿ ನಡೆಯದೆ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ನಡೆಯುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಇವುಗಳ ಹಿಂದೆ ಸಿಎಂ ಪುತ್ರ ಯತೀಂದ್ರ ಅವರ ಒತ್ತಡ ಕೆಲಸ ಮಾಡಿದೆ ಎಂದೂ ಹೇಳಲಾಗಿತ್ತು.
ಬಿಬಿಎಂಪಿ ಚೀಫ್ ಇಂಜಿನಿಯರ್ ಬಿಎಸ್ ಪ್ರಹ್ಲಾದ್ ಅವರನ್ನು ಬೃಹತ್ ನೀರುಗಾಲುವೆ ಶಾಖೆಯ ಚೀಫ್ ಇಂಜಿನಿಯರ್ ಆಗಿ ಅಧಿಕ ಪ್ರಭಾರ ವಹಿಸಲಾಗಿದೆ.
ಬಕ್ರೀದ್ ಅಂಗವಗಿ ಸರ್ಕಾರಿ ರಜೆ ಇದ್ದರೂ, ಸರ್ಕಾರಿ ಅಧಿಕಾರಿಗಳು ಮಾಹಿತಿ ಕ್ರೋಢೀಕರಿಸಲು ಕೆಲಸಕ್ಕೆ ಹಾಜರಾಗುವಂತೆಯೂ ಸೂಚಿಸಲಾಗಿದೆ. ಇಲ್ಲವಾದರೆ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.