• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

1924 ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಪೂರ್ವಸಿದ್ಧತೆ ವೀಕ್ಷಿಸಿದ ಸಿಎಂ

ಪ್ರತಿಧ್ವನಿ by ಪ್ರತಿಧ್ವನಿ
December 26, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ವರ್ಷಪೂರ್ತಿ ರಾಜ್ಯದೆಲ್ಲೆಡೆ ಮಹಾತ್ಮಾ ಗಾಂಧಿ ವಿಚಾರಧಾರೆ ಪ್ರಚಾರ ಕಾರ್ಯಕ್ಕೆ ಏರ್ಪಾಡು- ಮುಖ್ಯಮಂತ್ರಿ ಸಿದ್ದರಾಮಯ್ಯ

ADVERTISEMENT

ಬೆಳಗಾವಿ, ಡಿಸೆಂಬರ್ 25: 1924 ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಪೂರ್ವಸಿದ್ಧತೆ ವೀಕ್ಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗಾಂಧೀಜಿಯವರ ವಿಚಾರಧಾರೆಯನ್ನು ಪ್ರಚುರಪಡಿಸಲು ವರ್ಷಪೂರ್ತಿ ರಾಜ್ಯದೆಲ್ಲೆಡೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ ಪೂರೈಸಿದ್ದು, ಆ ಪ್ರಯುಕ್ತ ಶತಮಾನೋತ್ಸವದ ಆಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಡಿಸೆಂಬರ್ 26 ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ, ಸುವರ್ಣ ಸೌಧದ ಪಕ್ಕದಲ್ಲಿ ಗಾಂಧೀಜಿಯವರ ಪ್ರತಿಮೆ ಅನಾವರಣದ ಕಾರ್ಯಕ್ರಮವಿದ್ದು, 27ರಂದು ಸಾರ್ವಜನಿಕ ಸಭೆ ಏರ್ಪಡಿಸಲಾಗಿದೆ ಎಂದರು.

ಬದಲಾವಣೆ ನಿರಂತರವಾದ ಪ್ರಕ್ರಿಯೆ

ಕಾಂಗ್ರೆಸ್ ಅಧಿವೇಶನದಿಂದ ಪಕ್ಷದಲ್ಲಿ ಬದಲಾವಣೆ ಪರ್ವ ಆರಂಭವಾಗುವುದೇ ಎಂಬ ಪರ್ತಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಬದಲಾವಣೆ ನಿರಂತರವಾದ ಪ್ರಕ್ರಿಯೆ. ನೂರು ವರ್ಷಗಳ ಹಿಂದಿದ್ದ ಪರಿಸ್ಥಿತಿ ಈಗಿಲ್ಲ. ರಾಜಕೀಯ ಬದಲಾವಣೆ ಹಾಗೂ ಬೆಳವಣಿಗೆಗಳು ಆಗುತ್ತಿರುತ್ತವೆ ಎಂದರು.

ತನ್ನ ತಪ್ಪು ಮರೆಮಾಚಲು ರಾಜ್ಯಪಾಲರಿಗೆ ದೂರು

ಸರ್ಕಾರದ ವಿರುದ್ದ ರಾಜ್ಯಪಾಲರಿಗೆ ಶಾಸಕ ಸಿ.ಟಿ.ರವಿಯವರು ದೂರು ನೀಡಿರುವ ಬಗ್ಗೆ ಪ್ರತಿಕ್ರಿಯೆ ನಿಡಿ, ಸಿ.ಟಿ.ರವಿಯವರು ತಮ್ಮ ತಪ್ಪನ್ನು ಮರೆಮಾಚಲು ಈ ರೀತಿ ಮಾಡುತ್ತಿದ್ದು, ಅವರ ಪ್ರಕರಣವನ್ನು ಸಿಐಡಿ ತನಿಖೆ ಮಾಡುತ್ತಿದೆ. ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಠಾಣೆಯೊಳಗೆ ಬಿಜೆಪಿ ಸಭೆಗೆ ಅವಕಾಶ ನೀಡಿದ್ದು ತಪ್ಪು

ಸಿ.ಟಿ.ರವಿ ಪ್ರಕರಣ ಸಂಬಂಧ ಒಬ್ಬ ಪೊಲೀಸ್ ಅಧಿಕಾರಿಯನ್ನು ಅಮಾನತ್ತು ಮಾಡಿರುವ ಬಗ್ಗೆ ಪ್ರತಿಕ್ರಯಿಸಿ, ಪೊಲೀಸ್ ಠಾಣೆಯಲ್ಲಿ ಬಿಜೆಪಿ ಪಕ್ಷದ ಸಭೆ ನಡೆಸಲು ಅವಕಾಶ ಕೊಟ್ಟ ಕಾರಣಕ್ಕಾಗಿ ಅಧಿಕಾರಿಯನ್ನು ಅಮಾನತ್ತುಗೊಳಿಸಲಾಗಿದೆ. ಪೊಲೀಸ್ ಠಾಣೆಯೊಂದರಲ್ಲಿ ರಾಜಕೀಯ ಪಕ್ಷದ ಸಭೆ ನಡೆಸಲು ಅವಕಾಶ ನೀಡಿದ್ದು ತಪ್ಪು. ಸಿ.ಟಿ.ರವಿಯವರಿಗೆ ರಕ್ಷಣೆ ನೀಡುವ ಉದ್ದೇಶದಿಂದ ಅವರನ್ನು ಬೇರೆಡೆಗಳಿಗೆ ಕರೊದೊಯ್ಯಲಾಗಿತ್ತು ಎಂದು ಬೆಳಗಾವಿಯ ಪೊಲೀಸ್ ಕಮೀಷನರ್ ರವರು ಸಹ ಸ್ಪಷ್ಟಪಡಿಸಿರುವುದಾಗಿ ತಿಳಿಸಿದರು.

ಪೊಲೀಸ್ ತನಿಖೆ

ಶಾಸಕ ಮುನಿರತ್ನ ರವರಿಗೆ ಮೊಟ್ಟೆ ಎಸೆದ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿ, ಶಾಸಕರಿಗೆ ಮೊಟ್ಟೆ ಎಸದವರು ಯಾರು ಹಾಗೂ ಯಾವ ಪಕ್ಷಕ್ಕೆ ಸೇರಿದವರು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಈ ಬಗ್ಗೆ ಪೊಲೀಸರು ತನಿಖೆ ಮಾಡಲಿದ್ದಾರೆ ಎಂದರು.

Tags: BelagaviBJPCongress PartyCT RaviDr G ParameshwarGovernerMunirathnasiddaramaiahSuvarna Soudaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಇಸ್ರೇಲ್‌ ಧಾಳಿಗೆ ಎಂಟು ಪ್ಯಾಲೆಸ್ತೀನಿಯರು ಬಲಿ

Next Post

ಸಂಸತ್​ ಭವನದ ಬಳಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post

ಸಂಸತ್​ ಭವನದ ಬಳಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada