ರಾಜ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ರಾಜಿನಾಮೆಯು ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ನಡುವಿನ ಟ್ವೀಟ್-ವಾರ್‌ಗೆ ಕಾರಣವಾಗಿದೆ. ಈ ಕುರಿತಂತೆ ಉಭಯ ಪಕ್ಷಗಳು ಸರಣಿ ಟ್ವೀಟ್ ಮಾಡಿದ್ದು, ಪರಸ್ಪರರ ಮೇಲೆ ಟೀಕಾ-ಪ್ರಹಾರ ನಡೆಸಿದೆ.

ರಾಜ್ಯದ ಮುಖ್ಯಮಂತ್ರಿ ಕಣ್ಣೀರು ಹಾಕಿದಾಗ ಕೇಳುವ ಹಕ್ಕು ಪ್ರತಿ ಪ್ರಜೆಗೂ ಇದೆ ಹೇಳಿರುವ ಕಾಂಗ್ರೆಸ್, ತಾಕತ್ತಿದ್ದರೆ ಕರ್ನಾಟಕ ಬಿಜೆಪಿ ಸಿಎಂ ರಾಜಿನಾಮೆ ಹಿಂದಿರುವ ಸ್ಪಷ್ಟ ಕಾರಣ ತಿಳಿಸಲಿ. ಹಾಗೂ ತಮ್ಮದೇ ಪಕ್ಷದ ಹಿರಿಯ ನಾಯಕನಿಗೆ ಕಣ್ಣೀರು ಹಾಕಿಸಿ, ಹೀನಾಯವಾಗಿ ನಡೆಸಿಕೊಂಡಿದ್ದಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಕಾಂಗ್ರೆಸ್ ನಾಯಕರ ಬಗ್ಗೆ ನಾಲಿಗೆ ಹರಿಬಿಡುವುದನ್ನು ನಿಲ್ಲಿಸಲಿ ಎಂದು ಸವಾಲು ಹಾಕಿದೆ.
ಬಿಎಸ್‌ವೈ ವಿದಾಯದ ಕುರಿತು ಟ್ವೀಟ್ ಮಾಡಿದ್ದ ಬಿಜೆಪಿ, ಬಿ. ಎಸ್. ಯಡಿಯೂರಪ್ಪ ಅವರು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ಸಿದ್ಧಾಂತ, ಆಂತರಿಕ ಶಿಸ್ತಿಗೆ ಒಳಪಟ್ಟು ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ. ಈ ವಿಚಾರದಲ್ಲಿ ಗಾಂಧಿ ಕುಟುಂಬದ ಗುಲಾಮರಿಂದ ಕಿವಿ ಮಾತು ಹೇಳಿಸಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿ ಪಕ್ಷಕ್ಕಿಲ್ಲ ಎಂಬುದನ್ನು ಕಾಂಗ್ರೆಸ್ ಮನಗಾಣಬೇಕು ಎಂದು ಹೇಳಿತ್ತು.
ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಧಿಕೃತ ಜಾಲತಾಣ ಖಾತೆಯಿಂದ ಮಾಡಿರುವ ಕೆಲವು ಟ್ವೀಟ್:


