ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಥಳೀಯ ಪಕ್ಷವನ್ನು ಸೋಲಿಸಿ ಅಧಿಕಾರಕ್ಕೆ ಏರಿರುವ ಕಾಂಗ್ರೆಸ್ ನಲ್ಲಿ ಈಗ ಸಿಎಂ ಕುರ್ಚಿಗಾಗಿ ದೊಡ್ಡ ಫೈಟ್ ನಡೆದಿದೆ. ಸಧ್ಯ ರೇವಂತ್ ರೆಡ್ಡಿ ತೆಲಂಗಾಣ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿದ್ದು, ಅವರೇ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾಗಿದೆ. ಹೈಕಮಾಂಡ್ ನ ಮೊದಲ ಆಯ್ಕೆ ಕೂಡ ರೇವಂತ್ ರೆಡ್ಡಿ ಎಂಬುದು ತಿಳಿದುಬಂದಿದೆ.
ಕಾಂಗ್ರೆಸ್ ನಲ್ಲಿ ಹಿರಿಯ ನಾಯಕ ಉತ್ತಮ್ ಕುಮಾರ್ ರೆಡ್ಡಿ ಮತ್ತು ಭಟ್ಟಿ ವಿಕ್ರಮಾಕ್ ಕೂಡ ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದಾರೆ ಎನ್ನಲಾಗಿದ್ದು ಆದರೆ ಹೈಕಮಾಂಡ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಅಥವಾ ಉತ್ತಮ ಖಾತೆ ನೀಡುವ ಆಲೋಚಿಸಿದೆ. ಹಾಗಾಗಿ ನಾಳೆ ಅಥವಾ ಗುರುವಾರ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಬಹುದು ಎಂದು ತಿಳಿದು ಬಂದಿದೆ.

ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿದೆ. ಕರ್ನಾಟಕದ ನಂತರ, ತೆಲಂಗಾಣ ದಕ್ಷಿಣದ ಎರಡನೇ ರಾಜ್ಯವಾಗಿದ್ದು, ಅಲ್ಲಿ ಕಾಂಗ್ರೆಸ್ ತನ್ನದೇ ಆದ ಸರ್ಕಾರವನ್ನು ರಚಿಸುತ್ತಿದೆ. ಸಂಪೂರ್ಣ ದಕ್ಷಣ ಭಾರತದಲ್ಲಿ ಬಿಜೆಪಿಗೆ ಜಾಗವಿಲ್ಲದಾಗೆ ನೋಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ.