ಕರ್ನಾಟಕ ಸರ್ಕಾರದ ಗ್ಯಾರಂಟಿಗಳ (Guareenty scheme) ಬಗ್ಗೆ ಚುನಾವಣಾ ಪ್ರಚಾರದಲ್ಲಿ ಅಪಪ್ರಚಾರ ಮಾಡಿರುವ ಕಾರಣ ಮಹಾರಾಷ್ಟ್ರ ಸರ್ಕಾರದ (Maharashtra government) ಮೇಲೆ ಕಾನೂನು ಹೋರಾಟ ಮಾಡ್ತೀವಿ ಎಂದು ಸಿಎಂ ಸಿದ್ದರಾಮಯ್ಯ (Cm siddaramaiah) ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಚುನಾವಣಾ ಸಮಾವೇಶಗಳಲ್ಲಿ ಮಾತನಾಡುವ ವೇಳೆ,ಕರ್ನಾಟಕದಲ್ಲಿ ಗ್ಯಾರಂಟಿಗಳನ್ನು ಸರಿಯಾಗಿ ನೀಡುತ್ತಿಲ್ಲ ಎಂದು ಪ್ರಧಾನಿ ಮೋದಿ (Pm Modi) ಪ್ರಚಾರ ಮಾಡಿದ್ದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ಪ್ರಧಾನಿ ಮಹಾರಾಷ್ಟ್ರ ಜನರನ್ನು ದಾರಿ ತಪ್ಪಿಸಲು ಸುಳ್ಳು ಹೇಳುತ್ತಿದ್ದಾರೆ ಎಂದಿದ್ದಾರೆ.
ಕೇವಲ ಭಾಷಣಗಳಿಗೆ ಸೀಮಿತವಾಗದೆ BJP ಸರ್ಕಾರ ಸುಳ್ಳು ಜಾಹೀರಾತು ಕೂಡ ನೀಡಿದೆ. ಹೀಗಾಗಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ನಾವು ಕಾನೂನು ಹೋರಾಟ ಮಾಡಲು ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.