
ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಮಂಡಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದಿನ ಎಲ್ಲಾ ಕಾರ್ಯಕ್ರಮ ರದ್ದು ಮಾಡಿದ್ದಾರೆ.
ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದರು. ತಪಾಸಣೆ ನಡೆಸಿದ ವೈದ್ಯರು ಎರಡು ದಿನಗಳ ಕಾಲ ವಿಶ್ರಾಂತಿಗೆ ಸೂಚೊಸಿದ್ದಾರೆ.

ಈ ಹಿಂದೆ ಮಂಡಿ ಲೆಗಮೆಂಟ್ ಶಸ್ತ್ರ ಚಿಕಿತ್ಸೆ ಮಾಡಿಸಲಾಗಿತ್ತು. ಇದೀಗ ಮತ್ತೆ ಆಪರೇಷನ್ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ ಎಂದು ಮಣಿಪಾಲ್ ವೈದ್ಯರು ಮಾಹಿತಿ ನೀಡಿದ್ದಾರೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಎರಡು ದಿನಗಳ ಕಾಲ ಎಲ್ಲಿಯೂ ಪ್ರಯಾಣ ಮಾಡದೆ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.







