• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಹುಲ್‌ ಅಂಗಳಕ್ಕೆ ಪಟ್ಟದ ಫೈಟ್‌ : ಸಿಎಂ ಭೇಟಿಯಲ್ಲಿ ಖರ್ಗೆ ಏನಂದ್ರು..?ಕುತೂಹಲ ಮೂಡಿಸಿದ ಡಿಕೆಶಿ ನಡೆ..!

ಪ್ರತಿಧ್ವನಿ by ಪ್ರತಿಧ್ವನಿ
November 23, 2025
in Top Story, ಕರ್ನಾಟಕ, ರಾಜಕೀಯ
0
ರಾಹುಲ್‌ ಅಂಗಳಕ್ಕೆ ಪಟ್ಟದ ಫೈಟ್‌ : ಸಿಎಂ ಭೇಟಿಯಲ್ಲಿ ಖರ್ಗೆ ಏನಂದ್ರು..?ಕುತೂಹಲ ಮೂಡಿಸಿದ ಡಿಕೆಶಿ ನಡೆ..!
Share on WhatsAppShare on FacebookShare on Telegram
ADVERTISEMENT

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ನವೆಂಬರ್‌ 20ರ ಬಳಿಕ ಒಂದಾದ ಮೇಲೆ ಒಂದರಂತೆ ಸಂಚಲನಕಾರಿ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಆಗಿರುವ ಡಿಕೆ ಶಿವಕುಮಾರ್‌ ಅವರಿಗೆ ತಮ್ಮ ಕುರ್ಚಿ ಬಿಟ್ಟುಕೊಡಬೇಕು. ಪಕ್ಷ ಅಧಿಕಾರಕ್ಕೆ ಬರುವಲ್ಲಿ ಡಿಕೆಶಿ ಶ್ರಮವೂ ಇದೆ ಎಂದು ಡಿಕೆ ಬಣ ಹೇಳುತ್ತಿದೆ.

Satish Jarkiholi: ನಾನೇ 5 ವರ್ಷ ಸಿಎಂ ಎಂದ ಸಿದ್ದು.. ಸಾಹುಕಾರ್ ಖಡಕ್ ರಿಯಾಕ್ಷನ್  #pratidhvani

ಇತ್ತ ನಾವು ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರನ್ನು ಬಿಟ್ಟು ಕೊಡುವುದಿಲ್ಲ. ಅವರ ನಾಯಕತ್ವಕ್ಕೆ ಧಕ್ಕೆಯಾದರೆ ನಾವು ಸುಮ್ಮನಿರೋದಿಲ್ಲ ಎನ್ನುವುದು ಸಿದ್ದು ಟೀಂನ ಖಡಕ್‌ ಮಾತುಗಳಾಗಿವೆ. ಈ ನಡುವೆಯೇ ಡಿಕೆಶಿ ಪರ ಈಗಾಗಲೇ ಒಂದು ರೌಂಡ್‌ ದೆಹಲಿ ಯಾತ್ರೆ ಮಾಡಿಬಂದಿರುವ ಹಲವು ಶಾಸಕರು, ಸಚಿವರು ಸಿದ್ದು ನಾಯಕತ್ವದ ಬಗ್ಗೆ ಅಪಸ್ವರ ಎತ್ತಿದ್ದಾರೆನ್ನಲಾಗಿದೆ.

ನಿನ್ನೆಯಷ್ಟೇ ಈ ಎಲ್ಲ ವಿಚಾರಗಳ ಬಗ್ಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಸುದೀರ್ಘ ಚರ್ಚೆಯಲ್ಲಿ ರಾಜ್ಯದಲ್ಲಿನ ಕೈ ನಾಯಕರ ಹೇಳಿಕೆಗಳು ಹಾಗೂ ಚಟುವಟಿಕೆಗಳ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಅಲ್ಲದೆ ಸಿಎಂ ಭೇಟಿಯ ಬಳಿಕ ರವಿವಾರ ಡಿಕೆ ಶಿವಕುಮಾರ್‌ ಕೂಡ ಖರ್ಗೆ ಮನೆ ಕದತಟ್ಟುವ ಸಾಧ್ಯತೆಗಳಿವೆ.

ಪ್ರಸ್ತುತ ನಡೆಯುತ್ತಿರುವ ರಾಜಕೀಯದ ಬಗ್ಗೆ ಅದರಲ್ಲೂ ನಾಯಕತ್ವದ ಕುರಿತು ಗಟ್ಟಿಯಾದ ನಿಲುವನ್ನು ಹೈಕಮಾಂಡ್‌ ತಿಳಿಸಲಿ. ಹೀಗೆಯೇ ಪರಿಸ್ಥಿತಿ ಮುಂದುವರೆದರೆ ರಾಜ್ಯದ ಆಡಳಿತದ ಮೇಲೆ ನೇರ ಪರಿಣಾಮ ಬೀರುತ್ತದೆ. ಆಡಳಿತ ಯಂತ್ರವೂ ಹಳ್ಳಿ ತಪ್ಪುವ ಸಾಧ್ಯತೆಗಳಿವೆ, ಇದರಿಂದ ಅಧಿಕಾರಿಗಳಲ್ಲೂ ಗೊಂದಲ ಉಂಟಾಗಿ ಅವರೂ ಸಹ ನಿರಾಸಕ್ತರಾಗುವ ಲಕ್ಷಣಗಳು ಕಂಡು ಬರುತ್ತಿವೆ. ಈ ಎಲ್ಲ ವಿಚಾರಗಳ ಬಗ್ಗೆ ಗಂಭೀರವಾಗಿ ಯೋಚಿಸಿ ನಿರ್ಧರಿಸಿ ಎಂದು ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷರ ಬಳಿ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

HD Devegowda : ಮೋದಿ ಅವರ ನೇತೃತ್ವದಲ್ಲಿ ವಿಶ್ವಾಸ ಇಟ್ಟಿದ್ದೇವೆ #pratidhvani

ಸಚಿವ ಸಂಪುಟ ವಿಸ್ತರಣೆ, ಸ್ಥಳೀಯ ಸಂಸ್ಥೆಗಳಾದ ಜಿಲ್ಲಾ ಹಾಗೂ ತಾಲೂಕಾ ಪಂಚಾಯತಿ ಚುನಾವಣೆಗಳಲ್ಲಿ ಪಕ್ಷದ ಭಾಗಿದಾರಿಕೆಯ ವಿಚಾರದಲ್ಲಿ ಉಭಯ ನಾಯಕರು ಚರ್ಚಿಸಿದ್ದಾರೆ. ಪ್ರಮುಖವಾಗಿ ಗ್ರೇಟರ್‌ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಬಗ್ಗೆ ಇಬ್ಬರು ಸಮಾಲೋಚಿಸಿದ್ದಾರೆ. ಅದರಲ್ಲೂ ಮುಖ್ಯವಾಗಿ ಕಾಂಗ್ರೆಸ್‌ ಪಕ್ಷದಲ್ಲಿನ ಈ ಗೊಂದಲವನ್ನು ಆದಷ್ಟು ಬೇಗನೇ ಸರಿಪಡಿಸಿ, ಇಲ್ಲವಾದರೆ ಮುಂಬರುವ ಚುನಾವಣೆಗಳಲ್ಲಿ ಇನ್ನಷ್ಟು ಅನಾರೋಗ್ಯಕರ ವಾತಾವರಣ ಸೃಷ್ಟಿಯಾಗಬಹುದು ಎಂದು ಸಿಎಂ ಹೇಳಿದ್ದಾರೆನ್ನಲಾಗಿದೆ.

ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ವಿದೇಶ ಪ್ರವಾಸದಲ್ಲಿದ್ದಾರೆ. ಅವರು ಭಾರತಕ್ಕೆ ಬಂದ ಬಳಿಕ ಇನ್ನೊಮ್ಮೆ ಈ ಎಲ್ಲ ಸಂಗತಿಗಳ ಬಗ್ಗೆ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಮಾಡೋಣ ಎಂದು ಖರ್ಗೆ ಅಭಯ ನೀಡಿದ್ದಾರೆ ಎನ್ನಲಾಗಿದೆ. ಆದರೆ ಸಿದ್ದರಾಮಯ್ಯ ಅವರು ಖರ್ಗೆ ಅವರೊಂದಿಗಿನ ರಹಸ್ಯ ಸಭೆಯ ಬಗ್ಗೆ ಮಾಧ್ಯಮಗಳಿಗೆ ಗುಟ್ಟು ಬಿಟ್ಟುಕೊಟ್ಟಿಲ್ಲ. ಆದರೆ ಈ ಎಲ್ಲ ವಿಚಾರಗಳ ಬಗ್ಗೆ ಮಾತುಕತೆಯಾಗಿದೆ ಎಂಬ ಮಾಹಿತಿಯೂ ಹೊರಬಿದ್ದಿದೆ. ಈ ಎಲ್ಲ ರಾಜಕೀಯ ಬೆಳವಣಿಗೆಗೆ ಬ್ರೇಕ್‌ ಹಾಕಲು ಹಾಗೂ ಸಚಿವ ಸಂಪುಟ ವಿಸ್ತರಣೆಯ ವಿಚಾರ ರಾಹುಲ್‌ ಗಾಂಧಿ ಹೆಗಲಿಗೇರಿದಂತಾಗಿದೆ.

HD Kumaraswamy: ಹೋರಟ, ಧರಣಿ, ಉಪವಾಸ.. ಎಲ್ಲ ಘಟನೆಗಳನ್ನೂ ಎಳೆಎಳೆಯಾಗಿ ಬಿಚ್ಚಿಟ್ಟ HDK  #pratidhvani
Tags: CM SiddaramaiahcongressDCM DK ShivakumarKarnataka PoliticsPoliticsRahul Gandi
Previous Post

ಅಪರಾಧ ಚಟುವಟಿಕೆಯಲ್ಲಿ ಪೊಲೀಸರು: ಗೃಹ ಸಚಿವರ ಬಿಗ್ ವಾರ್ನ್

Next Post

ʼನಾಯಿ ಇದೆ ಎಚ್ಚರಿಕೆʼ..ಏನಿದು ಕನ್ನಡ ಚಿತ್ರರಂಗದಲ್ಲಿ ಹೊಸ ಪ್ರಯೋಗ..!

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
Next Post
ʼನಾಯಿ ಇದೆ ಎಚ್ಚರಿಕೆʼ..ಏನಿದು ಕನ್ನಡ ಚಿತ್ರರಂಗದಲ್ಲಿ ಹೊಸ ಪ್ರಯೋಗ..!

ʼನಾಯಿ ಇದೆ ಎಚ್ಚರಿಕೆʼ..ಏನಿದು ಕನ್ನಡ ಚಿತ್ರರಂಗದಲ್ಲಿ ಹೊಸ ಪ್ರಯೋಗ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada