ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಅಧಿಕಾರ ಹಂಚಿಕೆ ವಿಚಾರ ಇದೀಗ ಕೊನೆಯ ಹಂತಕ್ಕೆ ಬಂದು ತಲುಪಿದ್ದು, ನಾಳೆ ಕಾಂಗ್ರೆಸ್ ಹೈಮಾಂಡ್ ನಾಯಕರ ಜೊತೆ ರಾಜ್ಯ ನಾಯಕರ ಸಭೆ ನಡೆಯಲಿದೆ.

ತಮ್ಮೊಂದಿನ ಸಭೆಗೂ ಮೊದಲು ಆತಂತರಿಕವಾಗಿ ಎದುರಾಗಿರುವ ಬಿಕ್ಕಟ್ಟನ್ನು ಬಗೆಹರಿಸಿಕೊಳ್ಳುವಂತೆ ಹೈಕಮಾಂಡ್ ಸಂದೇಶ ನೀಡಿದ ಬೆನ್ನಲ್ಲೇ ಇದೀಗ ಬೆಳ್ಳಂಬೆಳಗ್ಗೆಯೇ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಆಗಮಿಸಿದ್ದಾರೆ. ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಹೈವೋಲ್ಟೇಜ್ ಬ್ರೇಕ್ಫಾಸ್ಟ್ ಸಭೆ ನಡೆಸುತ್ತಿದ್ದಾರೆ.

ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಇಬ್ಬರೇ ಚರ್ಚೆ ನಡೆಸುತ್ತಿದ್ದು, ಡಿಸಿಎಂ ಶಿವಕುಮಾರ್ ಬಂದು ಹೋಗುವರೆಗೂ ಯಾರನ್ನೂ ಒಳ ಬಿಡದಂತೆ ಸಿಎಂ ಸಿದ್ದರಾಮಯ್ಯ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. ಹೀಗಾಗಿ ಎಲ್ಲರನ್ನೂ ಹೊರಗೆ ಕಳುಹಿಸಿ ಇಬ್ಬರೇ ಮಹತ್ವದ ಚರ್ಚೆ ನಡೆಸುತ್ತಿದ್ದು, ಕುತೂಹಲ ಹೆಚ್ಚಿಸಿದೆ.












