
ಇಂದು ಸಿಎಂ ಸಿದ್ದರಾಮಯ್ಯ (Cm Siddaramaiah ) 77 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರ ಜನ್ಮ ದಿನದ (77th Birthday) ಪ್ರಯುಕ್ತ ಹಲವಾರು ನಾಯಕರು ಸಿದ್ದರಾಮಯ್ಯನವರಿಗೆ ಜನ್ಮದಿಂದ ಶುಭಾಶಯಗಳನ್ನು ಕೋರಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ (Dk Shivakumar), ಪ್ರಿಯಾಂಕ್ ಖರ್ಗೆ ಸೇರಿದಂತೆ ಅನೇಕ ನಾಯಕರು ಟ್ವೀಟ್ ಮಾಡುವ ಮೂಲಕ ಶುಭ ಹಾರೈಸಿದ್ದಾರೆ.

ಈ ಬಗ್ಗೆ ಪೋಸ್ಟ್ ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಗೆ ಜನ್ಮದಿನದ ಶುಭಾಶಯಗಳು. ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಿಂದುಳಿದ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸುವ ಮೂಲಕ ಉತ್ತಮ ಆಡಳಿತಕ್ಕೆ ಹೆಸರುವಾಸಿಯಾಗಿದ್ದೀರಿ. ಕನ್ನಡಿಗರ ಹಿತವನ್ನು ಕಾಪಾಡಲು, ಕರ್ನಾಟಕದ ಕಲ್ಯಾಣಕ್ಕಾಗಿ ನಮ್ಮ ‘ಕೈ’ ಹೀಗೆ ಜೊತೆಯಾಗಿರಲಿದೆ.ದೇವರು ತಮಗೆ ಉತ್ತಮ ಆಯುರಾರೋಗ್ಯ ನೀಡಿ ಕಾಪಾಡಲಿ ಎಂದು ಶುಭ ಹಾರೈಸುತ್ತೇನೆ ಎಂದಿದ್ದಾರೆ.
ಇನ್ನು ಸಚಿವ ಪ್ರಿಯಾಂಕ್ ಖರ್ಗೆ ಕೂಡ ಟ್ವೀಟ್ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಶುಭ ಹಾರೈಸಿದ್ದಾರೆ.ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀಸಿದ್ದರಾಮಯ್ಯ ಅವರಿಗೆ ಜನ್ಮ ದಿನದ ಹಾರ್ದಿಕ ಶುಭಾಶಯಗಳು.ಮುಖ್ಯಮಂತ್ರಿಗಳಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಟ್ಟಿಗೊಳಿಸುತ್ತಾ, ಜನಪರ ಕಾರ್ಯಗಳನ್ನ ಜಾರಿಗೊಳಿಸಿ ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಸಿದ್ದರಾಮಯ್ಯನವರಿಗೆ ನನ್ನ ಹೃದಯಪೂರ್ವಕ ಶುಭಾಶಯಗಳು.
ನಿಮ್ಮ ಸುದೀರ್ಘ ರಾಜಕೀಯದ ಬದುಕಿನ ಅನುಭವ ಹಾಗೂ ಆಡಳಿತದಲ್ಲಿನ ಕ್ಷಮತೆ ಸಾವಿರಾರು ಜನರಿಗೆ ಪ್ರೇರಣೆಯಾಗಿದೆ. ನಿಮ್ಮ ತಿಳಿವಳಿಕೆ, ನ್ಯಾಯಯುತ ಹಾದಿಯಲ್ಲಿ ಸಾಗುವ ಬದ್ಧತೆ ನಾಡಿನ ಜನರ ಜನರ ಅಭ್ಯುದಯಕ್ಕೆ ಇನ್ನಷ್ಟು ಕೊಡುಗೆಗಳನ್ನು ನೀಡಲಿ ಎಂದು ಆಶಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.













