• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಾಜ್ಯ ದಿವಾಳಿಯಾಗುತ್ತಿದೆ ಎಂದ ವಿಪಕ್ಷಗಳಿಗೆ ಸಿಎಂ ಸಿದ್ದು ಸಖತ್ ಟಾಂಗ್ – ಅಂಕಿ ಅಂಶಗಳ ಸಮೇತ ಗುಮ್ಮಿದ ಟಗರು ! 

Chetan by Chetan
February 21, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ರಾಜ್ಯ ದಿವಾಳಿಯಾಗುತ್ತಿದೆ ಎಂದ ವಿಪಕ್ಷಗಳಿಗೆ ಸಿಎಂ ಸಿದ್ದು ಸಖತ್ ಟಾಂಗ್ – ಅಂಕಿ ಅಂಶಗಳ ಸಮೇತ ಗುಮ್ಮಿದ ಟಗರು ! 
Share on WhatsAppShare on FacebookShare on Telegram

ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ. ಗ್ಯಾರೆಂಟಿಗಳನ್ನು ನಿಭಾಯಿಸಲಾಗದೆ ರಾಜ್ಯ ಸರ್ಕಾರ ಇಕ್ಕಟ್ಟಿನಲ್ಲಿ ಸಿಲುಕಿದೆ. ಹೀಗಾಗಿ ಈ ಕೂಡಲೇ ಸರ್ಕಾರದ ಖಜಾನೆಯ ಸ್ಥಿತಿಗತಿಯ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂಬ ವಿರೋಧ ಪಕ್ಷಗಳ ಆರೋಪಗಳಿಗೆ ಸಿಎಂ ಸಿದ್ದರಾಮಯ್ಯ ಸುಧೀರ್ಘವಾದ ಪೋಸ್ಟ್ ಮಾಡುವ ಮೂಲಕ ತಿರುಗೇಟು ಕೊಟ್ಟಿದ್ದಾರೆ. 

ADVERTISEMENT

ಬಿಜೆಪಿಯ ರಾಜ್ಯಾಧ್ಯಕ್ಷರಾದ BYVijayendra, ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ಸಂಸದರಾದ BSBommai ಯವರು ಹಾಗೂ ಇತರೆ ವಿರೋಧ ಪಕ್ಷದ ಮುಖಂಡರುಗಳು ರಾಜ್ಯದ ಆರ್ಥಿಕತೆಯ ಬಗ್ಗೆ ಮಾತನಾಡಿದ್ದಾರೆ. ರಾಜ್ಯದ ಆರ್ಥಿಕತೆ ಕುಸಿಯುತ್ತಿದೆ, ರಾಜ್ಯ ದಿವಾಳಿಯಾಗುತ್ತಿದೆ, ಹಣಕಾಸಿನ ವ್ಯವಸ್ಥೆ ನೆಲ ಕಚ್ಚಿದೆ ಎಂದೆಲ್ಲ ಆರೋಪಿಸಿ ಮಾತನಾಡಿದ್ದಾರೆ. ಆ ಮೂಲಕ ಜನರನ್ನು ಸಶಕ್ತಗೊಳಿಸುತ್ತಿರುವ ನಮ್ಮ ಗ್ಯಾರಂಟಿ ಹಾಗೂ ಇನ್ನಿತರೆ ಯೋಜನೆಗಳನ್ನು ಟೀಕಿಸಿದ್ದಾರೆ.

ವಾಸ್ತವವೇನೆಂದರೆ, ರಾಜ್ಯದಲ್ಲಿ ಬಿಜೆಪಿಯವರು ಆಡಳಿತ ನಡೆಸುತ್ತಿದ್ದಾಗ ನಮ್ಮ ಆರ್ಥಿಕ ವ್ಯವಸ್ಥೆಯನ್ನು ಪಾತಾಳಕ್ಕೆ ಕುಸಿಯುವಂತೆ ಮಾಡಿದ್ದರು. ಆದರೆ ವಿರೋಧ ಪಕ್ಷದಲ್ಲಿ ಕೂತು ದೊಡ್ಡ ಅರ್ಥಶಾಸ್ತ್ರಜ್ಞರಂತೆ ಮಾತನಾಡುತ್ತಿದ್ದಾರೆ. ಬಿಜೆಪಿಯವರ ಅರಾಜಕ ಆರ್ಥಿಕ ನಿರ್ವಹಣೆಗಳಿಂದಾಗಿ ಪಾತಾಳದತ್ತ ಕುಸಿಯುತ್ತಿದ್ದ ರಾಜ್ಯದ ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತರುವ ಪ್ರಯತ್ನವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಇದನ್ನು ಸಹಿಸಿಕೊಳ್ಳಲಾಗದೆ ಅಥವಾ ಅರಿತುಕೊಳ್ಳಲಾರದೆ ಬಿಜೆಪಿಯವರು ಮಾತಾಡುತ್ತಿರುವುದು ದುರಂತ.

ಬಿಜೆಪಿಯವರು ತಾವು ಮಾಡಿದ್ದ ಅವಾಂತರಗಳ ಕೆಲವು ಉದಾಹರಣೆಗಳಿವು;

@BJP4Karnataka ಸರ್ಕಾರವು ಆಡಳಿತ ನಡೆಸುತ್ತಿದ್ದಾಗ ಬಜೆಟ್‌ಗಳಲ್ಲಿ ನಿಗದಿ ಮಾಡಿದ್ದಕ್ಕಿಂತ ಏಳು ಪಟ್ಟು ಹೆಚ್ಚಿನ ಮೊತ್ತದ ಕಾಮಗಾರಿಗಳನ್ನು ತೆಗೆದುಕೊಂಡಿದ್ದರು. 31-3-2023 ಕ್ಕೆ ಬಂಡವಾಳ ವೆಚ್ಚ ಮಾಡುವ ಪ್ರಮುಖ ಇಲಾಖೆಗಳಾದ ಲೋಕೋಪಯೋಗಿ, ಸಣ್ಣ ನೀರಾವರಿ, ಜಲ ಸಂಪನ್ಮೂಲ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ, ವಸತಿ ಇಲಾಖೆಗಳಲ್ಲಿ 2,70,695 ಕೋಟಿ ರೂಪಾಯಿಗಳಷ್ಟು ಬೃಹತ್ ಮೊತ್ತದ ಕಾಮಗಾರಿಗಳನ್ನು ಬೇಕಾಬಿಟ್ಟಿ ತೆಗೆದುಕೊಂಡು ಅನುದಾನ ಒದಗಿಸದೆ ಬಿಟ್ಟು ಹೋಗಿದ್ದಾರೆ. ಮುಖ್ಯಮಂತ್ರಿಗಳ ವಿವೇಚನಾ ಕೋಟಾದ ಕೆಳಗೆ 1,66,426 ಕೋಟಿ ರೂಪಾಯಿಗಳ ಕಾಮಗಾರಿಗಳಿಗೆ ಅನುಮೋದನೆ ನೀಡಿದ್ದಾರೆ. ಬಿಜೆಪಿ ಸರ್ಕಾರದ ಈ ಆರ್ಥಿಕ ದುರಾಡಳಿತ, ಬೇಜವಾಬ್ದಾರಿತನ, ಭ್ರಷ್ಟಾಚಾರಯುತ ಕಾಮಗಾರಿಗಳ ನಿರ್ವಹಣೆಯನ್ನು ಕೇವಲ ಒಂದೆರಡು ವರ್ಷಗಳಲ್ಲಿ ದುರಸ್ತಿ ಮಾಡಲು ಸಾಧ್ಯವೆ?

ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರದ BJP ಸರ್ಕಾರವು ನಮ್ಮ ರಾಜ್ಯದ ಸಂಪನ್ಮೂಲಗಳನ್ನು ಗುಡಿಸಿ ಗುಂಡಾಂತರ ಮಾಡುತ್ತಿದ್ದರೂ ರಾಜ್ಯ ಬಿಜೆಪಿಯವರು ಕೈ ಕಟ್ಟಿ ಬಾಯಿ ಮುಚ್ಚಿ ಕೂತಿದ್ದರು. ಇದು ಜೀವಂತ ಕುರಿಯ ಚರ್ಮ ಸುಲಿಯುತ್ತಿದ್ದರೂ ಕಣ್ಣ ಮುಂದಿನ ಗರಿಕೆ ಹುಲ್ಲಿಗೆ ಬಾಯಿ ಬಿಡುವಂತೆ ಕಾಣುತ್ತಿತ್ತು. ಬಿಜೆಪಿಯವರ ಕಾಲದಲ್ಲಿ ಸಂಗ್ರಹಿಸಿದ ಜಿಎಸ್‌ಟಿ ಸೆಸ್‌ನಲ್ಲಿ ಪರಿಹಾರ ಕೊಡುವುದನ್ನು ನಿಲ್ಲಿಸಿದರು. ಇದರಿಂದ ನಮಗೆ ವರ್ಷಕ್ಕೆ 18-20 ಸಾವಿರ ಕೋಟಿ ರೂಪಾಯಿಗಳಷ್ಟು ಆದಾಯ ಕಡಿಮೆಯಾಯಿತು. ಕೇಂದ್ರದವರು ಜನರಿಂದ ಸೆಸ್ ಸಂಗ್ರಹಿಸುವುದನ್ನು ನಿಲ್ಲಿಸಲಿಲ್ಲ.

@narendramodi ಸರ್ಕಾರ ತೆರಿಗೆ ಪಾಲಿನಲ್ಲೂ ರಾಜ್ಯಕ್ಕೆ ಬಹಳ ದೊಡ್ಡ ಅನ್ಯಾಯ ಮಾಡಿದೆ. 2018-19 ರಲ್ಲಿ ಕೇಂದ್ರದ ಬಜೆಟ್ ಗಾತ್ರ 24.42 ಲಕ್ಷ ಕೋಟಿ ಇತ್ತು. ಆಗ ನಮ್ಮ ರಾಜ್ಯಕ್ಕೆ ತೆರಿಗೆ ಪಾಲು 35,895 ಕೋಟಿ ರೂ. ಸಿಗುತ್ತಿತ್ತು. ಆದರೆ ಈಗ ಬಜೆಟ್ ಗಾತ್ರ 50.65 ಲಕ್ಷ ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಇಷ್ಟು ದೊಡ್ಡ ಮೊತ್ತದ ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಸುಮಾರು 51 ಸಾವಿರ ಕೋಟಿ ರೂ ಮಾತ್ರ ತೆರಿಗೆ ಪಾಲು ಸಿಗಬಹುದು. 2018 ಕ್ಕೆ ಹೋಲಿಸಿದರೂ ಸಹ ನಮಗೆ ಕನಿಷ್ಠ ಅಂದರೂ 73 ಸಾವಿರ ಕೋಟಿ ರೂ.ನಷ್ಟು ಪಾಲು ಸಿಗಬೇಕಿತ್ತು. ಇಷ್ಟಾದರೂ ಇದೊಂದು ಬಾಬತ್ತಿನಲ್ಲೆ ನಮಗೆ ವರ್ಷಕ್ಕೆ 22 ಸಾವಿರ ರೂ.ಗಳಷ್ಟು ನಷ್ಟವಾಗುತ್ತಿದೆ. 

ಕರ್ನಾಟಕದಿಂದ ವರ್ಷಕ್ಕೆ 4.5 ಲಕ್ಷ ಕೋಟಿಗೂ ಹೆಚ್ಚಿನ  ತೆರಿಗೆಯನ್ನು ಕೇಂದ್ರವು ಸಂಗ್ರಹಿಸುತ್ತಿದೆ. ಇದರಲ್ಲಿ ಬಿಡಿಗಾಸನ್ನು ಮಾತ್ರ ರಾಜ್ಯಕ್ಕೆ ಕೊಡುತ್ತಿದೆ. ಈ ಕುರಿತು BJP4Karnataka ನಾಯಕರು ಎಂದಾದರೂ ಬಾಯಿ ಬಿಟ್ಟಿದ್ದಾರಾ?

2017 ರಿಂದ ಈ ವರೆಗೆ ಜಿಎಸ್‌ಟಿಯ ಅಸಮರ್ಪಕ ಅನುಷ್ಠಾನದಿಂದ, 15 ನೇ ಹಣಕಾಸು ಆಯೋಗದ ವರದಿಯಿಂದ, ಸೆಸ್ ಮತ್ತು ಸರ್ಚಾರ್ಜ್‌ಗಳಲ್ಲಿ ಪಾಲು ಕೊಡದ ಕಾರಣ, 15ನೇ ಹಣಕಾಸು ಆಯೋಗ ಹೇಳಿದರೂ ಕೇಂದ್ರವು ಕೊಡದೆ ಉಳಿಸಿಕೊಂಡ 11,495 ಕೋಟಿರೂಗಳಿಂದ, ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಘೋಷಿಸಿ ಕೊಡದ ಕಾರಣದಿಂದ, ಒಟ್ಟಾರೆ ಕೇಂದ್ರದ ನೀತಿಗಳಿಂದ 2.1 ಲಕ್ಷ ಕೋಟಿ.ರೂಗಳಿಗೂ ಹೆಚ್ಚಿನ ಮೊತ್ತ ರಾಜ್ಯಕ್ಕೆ ನಷ್ಟವಾಗಿದೆ. ಈ ಕುರಿತು ಬಿಜೆಪಿಯವರು ಒಂದು ದಿನವೂ ಮಾತಾಡಲಿಲ್ಲ.ಇಷ್ಟರ ನಡುವೆಯೂ ರಾಜ್ಯದ ಆರ್ಥಿಕತೆ ಸಧೃಡವಾಗಿದೆ.

ನಮ್ಮ ಎರಡು ವರ್ಷಗಳ ಬಜೆಟ್ ಗಾತ್ರದ ಸರಾಸರಿ ಬೆಳವಣಿಗೆ ಶೇ.18.3 ರಷ್ಟಿದೆ. ಬಿಜೆಪಿಯ 4 ವರ್ಷಗಳ ಅಧಿಕಾರಾವಧಿಯಲ್ಲಿ ಕೇವಲ ಶೇ.5 ರಷ್ಟಿತ್ತು. 

ರಾಜ್ಯದ ಸ್ವಂತ ತೆರಿಗೆಯ ಬೆಳವಣಿಗೆ ಶೇ. 15 ರಷ್ಟಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ. 11 ರಷ್ಟು ಮಾತ್ರ ಇತ್ತು.

ನಾವು ಗ್ಯಾರಂಟಿ ಯೋಜನೆಗಳು ಸೇರಿದಂತೆ ವರ್ಷಕ್ಕೆ 90 ಸಾವಿರ ಕೋಟಿಗೂ ಹೆಚ್ಚಿನ ಮೊತ್ತವನ್ನು ಜನರಿಗೆ ನೇರವಾಗಿ ಡಿಬಿಟಿ ಮೂಲಕ ಹಾಗೂ ಸಬ್ಸಿಡಿ ಪ್ರೋತ್ಸಾಹಧನದ ಮೂಲಕ ನೀಡುತ್ತಿದ್ದೇವೆ. ನಮ್ಮ ಸರ್ಕಾರ ವೃದ್ಧರಿಗೆ, ಅಶಕ್ತರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ವರ್ಷಕ್ಕೆ 10,400 ಕೋಟಿಗೂ ಹೆಚ್ಚಿನ ಹಣವನ್ನು ಕೊಡುತ್ತಿದೆ. ಇದರಲ್ಲಿ ಕೇಂದ್ರ ಸರ್ಕಾರ ಕೇವಲ 450 ಕೋಟಿ ರೂ.ಗಳನ್ನು ಮಾತ್ರ ನೀಡುತ್ತಿದೆ. ಮನಮೋಹನ್ ಸಿಂಗ್ ರವರ ಕಾಲದಲ್ಲಿ ಈ ವೇತನಗಳೆಷ್ಟಿದ್ದವೊ ಈಗಲೂ ಅಷ್ಟೇ ಇವೆ. 

BSBommai ಯವರು ಕೇಂದ್ರದಲ್ಲಿದ್ದಾರೆ. ರಾಜ್ಯಕ್ಕೆ ಇವರೆಲ್ಲರಿಂದ ಯಾವ ಅನುಕೂಲವಾಗಿದೆ? ಎಂದು ಸ್ಪಷ್ಟಪಡಿಸಲಿ.

ರಾಜ್ಯದ ವಿತ್ತೀಯ ಶಿಸ್ತು ನಿಯಮಗಳಿಗೆ ಅನುಗುಣವಾಗಿಯೇ ಇದೆ. ವಿತ್ತೀಯ ಕೊರತೆ ಶೇ.3 ರ ಒಳಗೆ ಇದೆ ಮತ್ತು ನಮ್ಮ ಒಟ್ಟು ಹೊಣೆಗಾರಿಕೆ ಜಿಎಸ್‌ಡಿಪಿಯ ಶೇ.25 ರ ಒಳಗೆ ಇದೆ. BJP ಸರ್ಕಾರದ ಅವಧಿಯಲ್ಲಿ ಇವುಗಳೂ ತಾರಾಮಾರಾ ಆಗಿದ್ದವು. 

ನಮ್ಮ ಬಂಡವಾಳ ವೆಚ್ಚವೂ ಸಹ ನಮ್ಮ ಅಕ್ಕಪಕ್ಕದಲ್ಲಿರುವ ಪ್ರಗತಿಪರವೆನ್ನಿಸಿಕೊಂಡ ರಾಜ್ಯಗಳಿಗಿಂತ ಉತ್ತಮವಾಗಿದೆ. ಕರ್ನಾಟಕವು ಈ ವರ್ಷದ ಬಜೆಟ್ ಗಾತ್ರಕ್ಕೆ ಎದುರಾಗಿ ಶೇ.15.01 ರಷ್ಟು ಬಂಡವಾಳ ವೆಚ್ಚ ಮಾಡುತ್ತಿದೆ. 2024-25 ರ ಮೂಲ ಆಯವ್ಯಯದ ಅಂದಾಜಿನ ಪ್ರಕಾರ ಮಹಾರಾಷ್ಟ್ರ-12.74 , ತಮಿಳುನಾಡು- 10.58, ತೆಲಂಗಾಣ-11.58  ರಷ್ಟು ಬಂಡವಾಳ ವೆಚ್ಚವಿದೆ.

ಬಿಜೆಪಿಯವರು ಎಷ್ಟೇ ಪಿತೂರಿ ಮಾಡಿ ಕರ್ನಾಟಕಕ್ಕೆ ನಿರಂತರವಾಗಿ ದ್ರೋಹ ಮಾಡುತ್ತಿದ್ದರೂ ಸಹ ಕರ್ನಾಟಕವು ತಲೆ ಎತ್ತಿ ನಿಲ್ಲುತ್ತಿದೆ. ದೆಹಲಿಯಲ್ಲಿರುವ ಕೇಂದ್ರ BJP ಸರ್ಕಾರದ ದ್ರೋಹಗಳನ್ನು ರಾಜ್ಯದ ಜನರು ಕ್ಷಮಿಸುವುದಿಲ್ಲ. ನಮ್ಮ ಆರ್ಥಿಕತೆಯನ್ನು ಉಳಿಸಿ ಬೆಳೆಸುವುದು ಹೇಗೆ ಎಂದು ನಮಗೆ ಗೊತ್ತಿದೆ. ಆದ್ದರಿಂದಲೆ ನಾವು ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿಗೂ ಹೆಚ್ಚಿನ ಹಣ ನೀಡುತ್ತಿದ್ದೇವೆ. ಕೊಬ್ಬರಿ, ತೊಗರಿ ಬೆಳೆಯುವ ರೈತರು ಸಂಕಷ್ಟಕ್ಕೆ ಸಿಲುಕಿದರೆ ಅವರ ನೆರವಿಗೆ ಧಾವಿಸಿದ್ದೇವೆ. ಕಲ್ಯಾಣ ಕರ್ನಾಟಕಕ್ಕೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದೇವೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಭಾಗಗಳಿಗೆ ಅನುದಾನಗಳನ್ನು ನೀಡುತ್ತಿದ್ದೇವೆ. 

BSBommai ಯವರು ಜಲ ಸಂಪನ್ಮೂಲ ಸಚಿವರಾಗಿದ್ದರೂ ಸಹ ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೊಡಬೇಕಾದ ಅನುದಾನಗಳನ್ನು ಕೊಡಲಿಲ್ಲ. ಆದರೆ ನಮ್ಮ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಮಾಡಿ ಮುಗಿಸಲು ತೀರ್ಮಾನಿಸಿದೆ. 

ನಮ್ಮ ಆರ್ಥಿಕತೆ ಚೆನ್ನಾಗಿದೆ, ನಮ್ಮ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂಬ ಕಾರಣಕ್ಕೆ ಇತ್ತೀಚೆಗೆ ನಡೆದ ಇನ್‌ವೆಸ್ಟ್ ಕರ್ನಾಟಕ ಕಾರ್ಯಕ್ರಮದಲ್ಲಿ 10.27 ಲಕ್ಷ ಕೋಟಿಗಳಿಗೂ ಹೆಚ್ಚಿನ ಮೊತ್ತದ ಬಂಡವಾಳ ಹೂಡಿಕೆಗಳಿಗೆ ಒಪ್ಪಂದಗಳಾಗಿವೆ. ಇದನ್ನೆಲ್ಲ ಗಮನಿಸಿಯೆ ರಾಜಕೀಯ ಕಾರಣಗಳಿಂದ ಬಿಜೆಪಿಯವರು ರಾಜ್ಯದ ಆರ್ಥಿಕ ಸ್ಥಿತಿಗತಿಗಳ ಕುರಿತು ಟೀಕೆಗಳನ್ನು ಮಾಡುತ್ತಿದ್ದಾರೆ.

ರಾಜ್ಯದ ಆರ್ಥಿಕತೆಯ ಬಗ್ಗೆ ಮಾತನಾಡುವ @BSBommai ಮತ್ತು ಬಿಜೆಪಿಯವರು ಕೇಂದ್ರದ ಬಜೆಟನ್ನು ಸರಿಯಾಗಿ ಓದಿದ್ದಾರೆಯೆ? 

2024-25 ರ ಮೂಲ ಬಜೆಟ್ಟಿನ ಅಂದಾಜು 48.21 ಲಕ್ಷ ಕೋಟಿಗಳಷ್ಟಿತ್ತು. ಆದರೆ ಅದನ್ನು ಪರಿಷ್ಕರಿಸಿ 47.16 ಲಕ್ಷ ಕೋಟಿ ರೂ.ಗಳಿಗೆ ಇಳಿಸಿದ್ದು ಯಾಕೆ? ಆಯವ್ಯಯದ ಅಂದಾಜಿಗೂ ಪರಿಷ್ಕೃತ ಅಂದಾಜಿಗೂ 1,04,025 ಕೋಟಿಗಳಷ್ಟು ಕಡಿಮೆಯಾಗಲು ಕಾರಣವೇನು? ಬಂಡವಾಳ ವೆಚ್ಚವನ್ನು 92,682 ಕೋಟಿ ಕಡಿಮೆ ಮಾಡಲಾಗಿದೆ. ಅದೂ ಹೋಗಲಿ 2024-25 ರ ಮೂಲ ಅಂದಾಜಿಗೆ ಹೋಲಿಸಿದರೆ 2025-26 ರ ಬಜೆಟ್ಟಿನ ಗಾತ್ರದಲ್ಲಿ ಶೇ. 5.07 ರಷ್ಟು ಮಾತ್ರ ಹೆಚ್ಚಳವಾಗಿದೆ. ಪರಿಷ್ಕೃತ ಆಯವ್ಯಯಕ್ಕೆ ಹೋಲಿಸಿದರೂ ಶೇ.7.4 ರಷ್ಟು ಮಾತ್ರ ಬೆಳವಣಿಗೆ ಇದೆ. ಹಣದುಬ್ಬರವನ್ನು ಕಳೆದು ಲೆಕ್ಕ ಹಾಕಿದರೆ ಈ ವರ್ಷದ ಬಜೆಟ್ ನಕಾರಾತ್ಮಕ ಬೆಳವಣಿಗೆಯನ್ನು ತೋರಿಸುತ್ತಿದೆ ಯಾಕೆ? ದೊಡ್ಡ ಆರ್ಥಿಕ ತಜ್ಞರುಗಳಂತೆ ಮಾತನಾಡುವ ಬಿಜೆಪಿಯವರು ಈ ಸತ್ಯವನ್ನು ಯಾಕೆ ಮುಚ್ಚಿಡುತ್ತಿದ್ದಾರೆ? 5/6

– ಮುಖ್ಯಮಂತ್ರಿ @siddaramaiah

ಸಾಲದ ಬಗ್ಗೆ ಮಾತನಾಡುವ @BYVijayendra ಅವರು ನರೇಂದ್ರ ಮೋದಿಯವರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೇಂದ್ರದ ಸಾಲ ಎಷ್ಟಾಗಿದೆ? ರಾಜ್ಯಗಳ ಸಾಲ ಎಷ್ಟಾಗಿದೆ ಎಂಬುದನ್ನು ತಿಳಿದುಕೊಂಡರೆ ಒಳ್ಳೆಯದು. 

2013-14 ರಲ್ಲಿ 53.11 ಲಕ್ಷ ಕೋಟಿ ರೂಗಳಷ್ಟಿದ್ದ ಕೇಂದ್ರದ ಸಾಲ @nsitharaman ಅವರೇ ಈ ಬಜೆಟ್ ನಲ್ಲಿ ಘೋಷಿಸಿರುವಂತೆ 2026 ರ ಮಾರ್ಚ್ ವೇಳೆಗೆ 200.16 ಲಕ್ಷ ಕೋಟಿಗಳಷ್ಟಾಗುತ್ತಿದೆ. ಅದನ್ನೂ ಮೀರಬಹುದು. 11 ವರ್ಷಗಳಲ್ಲಿ 147 ಲಕ್ಷ ಕೋಟಿಗಳಿಗೂ ಹೆಚ್ಚಿನ ಸಾಲವನ್ನು ಮೋದಿ ಸರ್ಕಾರ ಮಾಡಿದೆ. ಇಷ್ಟು ಬೃಹತ್ ಮೊತ್ತದ ಸಾಲ ಯಾಕಾಯಿತು? 

@narendramodi ಯವರ ಆರ್ಥಿಕ ನೀತಿಗಳಿಂದ ರಾಜ್ಯಗಳ ಆರ್ಥಿಕ ಸ್ಥಿತಿಯೂ ಅಯೋಮಯವಾಗಿದೆ. 2014 ರ ಮಾರ್ಚ್ ಅಂತ್ಯಕ್ಕೆ ದೇಶದ ಎಲ್ಲ ರಾಜ್ಯಗಳ ಸಾಲ 25 ಲಕ್ಷ ಕೋಟಿ ರೂ. ಇದ್ದದ್ದು ಈಗ 95 ಲಕ್ಷ ಕೋಟಿ ರೂ.ಗಳಿಗೂ ಮೀರಿದೆ. ಕಳೆದ 10 ವರ್ಷಗಳಲ್ಲಿ ರಾಜ್ಯಗಳ ಸಾಲ 70 ಲಕ್ಷ ಕೋಟಿಗಳಷ್ಟು ಹೆಚ್ಚಾಗಿದೆ. ಮೋದಿ ಸರ್ಕಾರದ ಆರ್ಥಿಕ ನೀತಿಗಳಿಂದ ರಾಜ್ಯಗಳೂ ತ್ರಾಸ ಪಡುತ್ತಿವೆ. ಕೇಂದ್ರದ ಆರ್ಥಿಕತೆಯೂ ದುರ್ಬಲವಾಗುತ್ತಿದೆ.

ಮತ್ತೊಮ್ಮೆ ತಿಳಿಸಬಯಸುವುದೇನೆಂದರೆ ನಮ್ಮ ರಾಜ್ಯದ ಆರ್ಥಿಕತೆ ಬಿಜೆಪಿಯ ದ್ರೋಹವನ್ನು ಮೆಟ್ಟಿ ನಿಲ್ಲುವಷ್ಟು ಸದೃಢವಾಗಿದೆ. ನಾವು ದೆಹಲಿಯ ಮೋದಿಯವರ ನೇತೃತ್ವದ @BJP4India ಸರ್ಕಾರವು ಮಾಡುತ್ತಿರುವ ದ್ರೋಹದ ವಿರುದ್ಧ ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತೇವೆ. ಇಷ್ಟರ ನಡುವೆಯೂ ನಾವು ನುಡಿದಂತೆ ನಡೆಯುತ್ತೇವೆ, ನಮ್ಮ ಜನರ ಜೊತೆ ನಿಲ್ಲುತ್ತೇವೆ. 

ರಾಜ್ಯದ ವಿರೋಧ ಪಕ್ಷದವರು ಸುಳ್ಳು ಹೇಳುವುದನ್ನು ನಿಲ್ಲಿಸಿ ಕರ್ನಾಟಕದ ಜನರ ಕಲ್ಯಾಣಕ್ಕಾಗಿ ಸರ್ಕಾರವು ನಡೆಸುತ್ತಿರುವ ಹೋರಾಟದಲ್ಲಿ ಜೊತೆಯಾಗಬೇಕೆಂದು ಮನವಿ ಮಾಡುತ್ತೇನೆ ಎಂದು ವಿಪಕ್ಷಗಳ ಆರೋಪಗಳಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.

Tags: ಗ್ಯಾರೆಂಟಿ ಯೋಜನೆಬಿವೈ ವಿಜಯೇಂದ್ರರಾಜ್ಯ ದಿವಾಳಿರಾಜ್ಯದ ಆರ್ಥಿಕತೆಸಿಎಂ ಸಿದ್ದರಾಮಯ್ಯ
Previous Post

ಗರ್ಭವಸ್ಥೆಯಲ್ಲಿ ಅತಿಯಾಗಿ ಕಾರವಿರುವಂತಹ/ ಮಸಾಲೆಯುಕ್ತ ಪದಾರ್ಥಗಳನ್ನು ಸೇವಿಸುವುದರಿಂದ ಆಗುವ ಅಡ್ಡಪರಿಣಾಮಗಳೇನು?

Next Post

ಮುಖಕ್ಕೆ ಬಾಡಿ ಲೋಷನ್ ಬಳಸುವುದರಿಂದ ಹಲವಾರು ಸಮಸ್ಯೆಗಳು ಎದುರಾಗುತ್ತದೆ.!

Related Posts

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
0

ಅಂದು ಮೈಸೂರಿನ ಮೂಡಾ ( MUDA ) ಭೂ ಹಗರಣಕ್ಕೆ ಸಿದ್ದರಾಮಯ್ಯ ಗೆ ಸಂಕಷ್ಟ ತಂದಿದ್ದ ಸ್ನೇಹಮಹಿ ಕೃಷ್ಣ ಇದೀಗ ಧರ್ಮಸ್ಥಳ ಗ್ರಾಮದ ಪ್ರಕರಣಕ್ಕೆ ಮತ್ತೆ ಎಂಟ್ರಿ...

Read moreDetails

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

August 21, 2025
Next Post
ಮುಖಕ್ಕೆ ಬಾಡಿ ಲೋಷನ್ ಬಳಸುವುದರಿಂದ ಹಲವಾರು ಸಮಸ್ಯೆಗಳು ಎದುರಾಗುತ್ತದೆ.!

ಮುಖಕ್ಕೆ ಬಾಡಿ ಲೋಷನ್ ಬಳಸುವುದರಿಂದ ಹಲವಾರು ಸಮಸ್ಯೆಗಳು ಎದುರಾಗುತ್ತದೆ.!

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada