
ಮೈಸೂರು: ಮುಡಾ ಸೈಟ್ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ. ಮುಡಾ ಹಗರಣ ವಿಚಾರದಲ್ಲಿ ತನಿಖೆ ಮಾಡಿ ವರದಿ ಕೊಡುವಂತೆ ಕೋರ್ಟ್ ಆದೇಶ ಮಾಡಿತ್ತು. ಆದರಂತೆ ಮೈಸೂರಿನ ಲೋಕಾಯುಕ್ತ ಎಸ್ಪಿ ಉದೇಶ್ ತನಿಖೆ ಮಾಡಿ9ದ್ದರು. ಇದೀಗ ಕೋರ್ಟ್ಗೆ ಬಿ ರಿಪೋರ್ಟ್ ಸಲ್ಲಿಕೆ ಮಾಡುವ ಬಗ್ಗೆ ದೂರುದಾರರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಮುಡಾ ಹಗರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಸ್ನೇಹಮಯಿ ಕೃಷ್ಣಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದು, ನೀವು ನೀಡಿದ ದೂರು ಸಂಬಂಧ A1 ಆರೋಪಿ ಸಿದ್ದರಾಮಯ್ಯ, A2 ಬಿ.ಎಂ ಪಾರ್ವತಿ ಸೇರಿದಂತೆ A3 ಮಲ್ಲಿಕಾರ್ಜುನ ಸ್ವಾಮಿ, A4 ಭೂ ಮಾಲೀಕ ದೇವರಾಜ್ ವಿರುದ್ಧ ಯಾವುದೇ ಸಾಕ್ಷ್ಯಾಧಾರ ಇಲ್ಲ ಎಂದು ನೋಟಿಸ್ನಲ್ಲಿ ತಿಳಿಸಿದ್ದಾರೆ.

ಇದು ಸಿವಿಲ್ ಸ್ವರೂಪದ ಪ್ರಕರಣ, ತನಿಖೆ ನಡೆಸಲು ತಕ್ಕದಾದ ವಿಚಾವಲ್ಲ, ಕಾನೂನಿನ ತಪ್ಪು ತಿಳುವಳಿಕೆಯೆಂದು ಅಲ್ಲದೆ ದೂರಿನಲ್ಲಿ ವಜಾ ಮಾಡಿದ ಪ್ರಕರಣಗಳು ಸಹ ಇದೆ. ಅಲ್ಲದೆ ಸಾಕಷ್ಟು ಸಾಕ್ಷ್ಯಾಧಾರಗಳ ಕೊರೆತೆ ಎಂದು ಲೋಕಾಯುಕ್ತ ಪೊಲೀಸರು ನೋಟಿಸ್ನಲ್ಲಿ ತಿಳಿಸಿದ್ದಾರೆ. ಎಲ್ಲಾ ಆರೋಪಿಗಳ ವಿರುದ್ಧದ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಸಾಬೀತಾಗಿಲ್ಲ ಎಂದಿದ್ದಾರೆ.

ಅಂತಿಮ ವರದಿ ನ್ಯಾಯಾಲಕ್ಕೆ ಸಲ್ಲಿಕೆ ಆಗುತ್ತಿದೆ. ನೋಟಿಸ್ ತಲುಪಿದ ಒಂದು ವಾರದೊಳಗೆ ವಿರೋಧವಿದ್ದರೆ ನ್ಯಾಯಾಧೀಶರಿಗೆ ತಿಳಿಸಿ ಎಂದು ನೋಟಿಸ್ನಲ್ಲಿ ತಿಳಿಸಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರ ಆರೋಪಿಗಳ ತಪ್ಪು ಮಾಡಿಲ್ಲ ಎಂದು ಸ್ನೇಹಮಯಿ ಕೃಷ್ಣಗೆ ಲೋಕಾಯುಕ್ತರು ನೋಟಿಸ್ ನೀಡಿದ್ದಾರೆ.
