ಹಾವೇರಿ: ಪ್ರಧಾನಿ ನರೇಂದ್ರ ಮೋದಿ ಮಾತಿಗೆ ಸಿಎಂ ಸಿದ್ದರಾಮಯ್ಯ ಸಿಡಿದು ಕೆಂಡವಾಗಿದ್ದಾರೆ. ಅಬಕಾರಿ ಭ್ರಷ್ಟಾಚಾರದ ಬಗ್ಗೆ ಆರೋಪ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ತಮ್ಮ ಆರೋಪ ಸಾಬೀತು ಮಾಡಿದ್ರೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡ್ತೇನೆ. ಇಲ್ಲದಿದ್ದರೆ ನೀವು ರಾಜೀನಾಮೆ ಕೊಡಲು ಸಿದ್ದರಿದ್ದೀರಾ..? ಎಂದು ಪ್ರಧಾನಿಯನ್ನು ಪ್ರಶ್ನಿಸಿದ್ದಾರೆ.
ಅಬಕಾರಿ ಇಲಾಖೆಯಲ್ಲಿ 700 ಕೋಟಿ ಸಂಗ್ರಹಿಸಿ ಮಹಾರಾಷ್ಟ್ರಕ್ಕೆ ಕಳುಹಿಸಿದ್ದಾರೆ ಎನ್ನುವ ಆರೋಪ ಸಾಬೀತು ಮಾಡಿ, ನಾನು ರಾಜಕೀಯ ನಿವೃತ್ತಿ ತಗೋತೀನಿ ಎಂದು ಗುಡುಗಿದ್ದಾರೆ. ಅಬಕಾರಿ ಇಲಾಖೆಯಲ್ಲಿ 700 ಕೋಟಿ ಸಂಗ್ರಹವಾಗಿದೆ, ಅದನ್ನು ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಗೆ ಬಳಸ್ತಿದಾರೆ ಅಂತ ಆರೋಪಿಸ್ತಾರೆ. ಇದನ್ನು ಸಾಬಿತು ಮಾಡಿದ್ರೆ ನಾನು ರಾಜಕೀಯ ನಿವೃತ್ತಿ ತಗೋತೀನಿ ಎಂದು ಸವಾಲು ಎಸೆದಿದ್ದಾರೆ.
ಈ ದೇಶದ ಪ್ರಧಾನಿ ಆಗಿ ಇಷ್ಟೊಂದು ಸುಳ್ಳು ಹೇಳ್ತಾರೆ. ಪ್ರಚಾರ ಭಾಷಣದಲ್ಲಿ ಸುಳ್ಳು ಹೇಳ್ತಾರೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಇಂತಹ ಸುಳ್ಳು ಹೇಳೋ ಪ್ರಧಾನಿಯನ್ನು ನೋಡಿಲ್ಲ ಎಂದಿದ್ದಾರೆ. ಸಿಎಂ ಆಗೋಕೆ ಬಿಜೆಪಿಯಲ್ಲಿ 2 ಸಾವಿರ ಕೊಟಿ ಕೊಡಬೇಕು ಅಂತ ಯತ್ನಾಳ್ ಹೇಳಿದ್ದಾರೆ. ಯಡಿಯೂರಪ್ಪ, ಬೊಮ್ಮಾಯಿ ಎರಡು ಸಾವಿರ ಕೋಟಿ ಸಿಎಂ ಆಗಿದ್ದಾರೆ. ವಿಜಯೇಂದ್ರ ಅಧ್ಯಕ್ಷ ಆಗಿದ್ದು ಸಹ ಹಣ ಕೊಟ್ಟು ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ.