ಬಿಜೆಪಿಯವರು (Bjp) ದೇಶವನ್ನು ಹಿಂದೂಸ್ಥಾನ, ಹಿಂದೂರಾಷ್ಟ್ರ ಮಾಡ್ತೀವಿ ಅಂತ ಹೊರಟಿದ್ದಾರೆ.ಏಕ ಭಾಷೆ ಏಕ ಸಂಹಿತೆ ಜಾರಿಗೆ ತರಲು ಹೊರಟ್ಟಿದ್ದಾರೆ.ಪ್ರಜಾಪ್ರಭುತ್ವ ಉಳಿಸಬೇಕು ಪ್ರಜಾಪ್ರಭುತ್ವ ರಕ್ಷಣೆ ಆಗಬೇಕು. ನಾವೆಲ್ಲರೂ ಕೂಡ ಎರಡನೇ ಹೋರಾಟವನ್ನು ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ (Cm siddaramaiah) ಹೇಳಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರಿಂದ ಮಾತ್ರ ಸಂವಿಧಾನ ಉಳಿಸಲು ಸಾಧ್ಯ. ಇದು ಅತ್ಯಂತ ಅಗತ್ಯ ಮತ್ತು ಅನಿವಾರ್ಯವಾಗಿದೆ. ಬಿಜೆಪಿ ಮತ್ತು ಆರ್ ಎಸ್ ಎಸ್ (Bjp & RSS) ನವರು ಗಾಂಧಿ ಕೊಂದವರನ್ನು ಆರಾಧಿಸುತ್ತಾರೆ.ಗೋಡ್ಸೆ ಒಬ್ಬ ಹಂತಕ ಮತಾಂಧ ಅವನನ್ನು ಪೂಜಿಸ್ತಾರೆ ಆರ್ ಎಸ್ ಎಸ್ ನವರು ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಗೋಳವಾಲ್ಕರ್ ಸಂವಿಧಾನದಲ್ಲಿ ಭಾರತೀಯತೆಯೇ ಇಲ್ಲ ಎಂದಿದ್ದರು.ಸಂವಿಧಾನವನ್ನೇ ರೀರೈಟ್ ಮಾಡಿ ಮನುಸ್ಮೃತಿ ತರಲು ಹೊರಟಿದ್ದಾರೆ.ಸಂವಿಧಾನ ವಿರೋಧಿ ಗಳ ವಿರುದ್ದ ನಾವು ಹೋರಾಟ ಮಾಡಬೇಕಾಗುತ್ತದೆಕೆಲವು ಮತಾಂಧ ಶಕ್ತಿಗಳು ನಮ್ಮ ಸಂವಿಧಾನಕ್ಕೆ ಧಕ್ಕೆ ತರುವ ಪ್ರಯತ್ನ ಮಾಡ್ತಿದ್ದಾರೆ.ಸಂವಿಧಾನದ ರಕ್ಷಣೆ ಆದ್ರೆ ನಮ್ಮೆಲ್ಲರ ರಕ್ಷಣೆ ಆಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.