ಬೆಂಗಳೂರು : ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿರುವ ಸಿದ್ದರಾಮಯ್ಯ ಬಿಜೆಪಿಗೆ ಮೊದಲ ಶಾಕ್ ನೀಡಿದ್ದಾರೆ. ಮುಖ್ಯಮಂತ್ರಿಗಳ ಕಚೇರಿಯಿಂದ ಇಂದು ಆದೇಶ ಹೊರಬಂದಿದ್ದು ಬಿಜೆಪಿ ಸರ್ಕಾರ ಕೈಗೊಂಡಿರುವ ಎಲ್ಲಾ ಆದೇಶಗಳನ್ನು ಹಿಂಪಡೆಯುವಂತೆ ಸೂಚನೆ ನೀಡಲಾಗಿದೆ.

ಹಹಿಂದಿನ ಸರ್ಕಾರವು ಕೈಗೊಂಡ ಎಲ್ಲಾ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಇಲಾಖೆಗಳು ಮತ್ತು ನಿಗಮಗಳು/ಮಂಡಳಿಗಳು/ಇಲಾಖೆಗಳ ಎಲ್ಲಾ ಮುಂದಿನ ಬಿಡುಗಡೆ/ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಎಲ್ಲಾ ಕಾಮಗಾರಿಗಳನ್ನು ನಿಲ್ಲಿಸಬೇಕು. ಪ್ರಾರಂಭಿಸದಿರುವುನ್ನೂ ತಡೆಹಿಡಿಯಬೇಕು ಎಂದು ಮುಖ್ಯಮಂತ್ರಿಗಳ ಕಚೇರಿಯಿಂದ ಆದೇಶ ಹೊರಡಿಸಲಾಗಿದೆ .
ಬಿಜೆಪಿ ಸರ್ಕಾರದಿಂದ ಮಂಜೂರಾದ ಕಾಮಗಾರಿಗಳಲ್ಲಿ ಪಾವಿತ್ರ್ಯತೆ ಇಲ್ಲ ಎಂದು ಶಾಸಕರು ಹಾಗೂ ಜನಸಾಮಾನ್ಯರು ನೀಡಿದ ದೂರನ್ನು ಪರಿಗಣನೆಗೆ ತೆಗೆದುಕೊಂಡು ಕಾಂಗ್ರೆಸ್ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.