ಡಿಸೆಂಬರ್ 17ರಂದು ಬೆಳಗಾವಿಯಲ್ಲಿ (Belagavi) ನಡೆದ ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತಮ್ಮ ಪಕ್ಷದ ಶಾಸಕರಿಗೆ ಸಿಎಂ ಸಿದ್ದರಾಮಯ್ಯ (Cm siddaramiah) ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನದ ಬಿಡುಗಡೆ ಮಾಡುವ ಆಶ್ವಾಸನೆ ನೀಡಿದ್ದಾರೆ.
ಇದೇ ವೇಳೆ ನಾವು ಎಲ್ಲಾ ಪಕ್ಷದ ಶಾಸಕರಿಗೂ ಅನುದಾನ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಳೆ ಹಾನಿ ಸರಿಪಡಿಸಲು ಅಪೆಂಡಿಕ್ಸ್ ಇ ನಲ್ಲಿ 4000 ಕೋಟಿ, ಗ್ರಾಮೀಣ ರಸ್ತೆ ಹಾಳಾಗಿರುವುದಕ್ಕೆ 2000 ಕೋಟಿ ಹಾಗೆಯೇ ಸಿಟಿ, ಟೌನ್ ರಸ್ತೆಗಳಿಗೂ ಹೆಚ್ಚುವರಿ ಹಣ ಕೊಡುತ್ತಿದ್ದೇವೆ ಎಂದು ಸಿಎಂ ಹೇಳಿದ್ದಾರೆ.
ಇನ್ನು 2025 ರಲ್ಲಿ ನಮ್ಮರಾಜ್ಯದ ಆರ್ಥಿಕ ಸಾಮರ್ಥ್ಯ ಇನ್ನಷ್ಟು ಹೆಚ್ಚಲಿದೆ. ಎಲ್ಲಾ ಪಕ್ಷದ ಶಾಸಕರ ಕ್ಷೇತ್ರಗಳಿಗೂ 2,000 ಕೋಟಿ ವಿತರಣೆ ಮಾಡಲಿದ್ದೇವೆ ಎಂದು ಭರವಸೆ ನೀಡಿದ್ದಾರೆ.ಬಿಜೆಪಿಯವರ ಆರೋಪದಂತೆ ಆರ್ಥಿಕವಾಗಿ ರಾಜ್ಯ ಹಿನ್ನಡೆಯಾಗಿದ್ದರೆ GST ಸಂಗ್ರಹದಲ್ಲಿ ಮೊದಲ ಸ್ಥಾನಕ್ಕೆ ಹೇಗೆ ಬರುತ್ತಿತ್ತು ಎಂದು ಸಿಎಂ ಪ್ರಶ್ನಿಸಿದ್ದಾರೆ.