• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ತಮ್ಮ ಮನೆ ದೇವರಾದ 400 ವರ್ಷಗಳ ಇತಿಹಾಸ ಇರುವ ಅಲ್ಲಾಪಟ್ಟಣದ ಅನ್ನದಾನೇಶ್ವರ ಸ್ವಾಮಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
May 2, 2025
in ಕರ್ನಾಟಕ, ರಾಜಕೀಯ
0
ತಮ್ಮ ಮನೆ ದೇವರಾದ 400 ವರ್ಷಗಳ ಇತಿಹಾಸ ಇರುವ ಅಲ್ಲಾಪಟ್ಟಣದ ಅನ್ನದಾನೇಶ್ವರ ಸ್ವಾಮಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ…ರಾಮೇಶ್ವರಾ…ಅನ್ನದಾನೇಶ್ವರಾ

ADVERTISEMENT

ಮನೆ ದೇವರ ಲಾವಣಿ ಹಾಡಿದ ಸಿ.ಎಂ ಸಿದ್ದರಾಮಯ್ಯ

ಮಂಡ್ಯ ಮೇ 2: ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ, ಅನ್ನದಾನೇಶ್ವರಾ…ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮನೆದೇವರ ಕುರಿತಾದ ಲಾವಣಿಯ ಸಾಲುಗಳನ್ನು ಹಾಡಿದರು.

ಶ್ರೀರಂಗಪಟ್ಟಣದ ಅಲ್ಲಾಪಟ್ಟಣದ ಶ್ರೀ ಅನ್ನದಾನೇಶ್ವರ ಸ್ವಾಮಿ ದೇವ್ಥಾನ ಪುನರ್ ನಿರ್ಮಾಣ, ವಿಗ್ರಹಗಳ ಸ್ಥಾಪನೆ ಹಾಗೂ ಗೋಪುರ ಕುಂಭಾಭಿಷೇಕ ನೆರವೇರಿಸಿ ಮಾತನಾಡುವ ವೇಳೆ ತಾವು ಬಾಲ್ಯದಲ್ಲಿ ಹಾಡುತ್ತಿದ್ದ, ವೀರ ಕುಣಿತದಲ್ಲಿ ನರ್ತಿಸುತ್ತಿದ್ದದ್ದನ್ನು ಉಲ್ಲೇಖಿಸಿ ಲಾವಣಿ ಹಾಡಿದರು.

ಸಿದ್ದರಾಮೇಶ್ವರ ಪೂಜೆಗೆ ವೀರಕುಣಿತದ ಜನಪದ ನೃತ್ಯ ಈಗಲೂ ಚಾಲ್ತಿಯಲ್ಲಿದೆ. ನಾನೂ ವೀರಕುಣಿತ ಸೇರಿದ್ದೆ. ಆಮೇಲೆ ರಾಜಪ್ಪ ಮೇಸ್ಟ್ರು ನನ್ನನ್ನು ಕರೆದುಕೊಂಡು ಹೋಗಿ ಐದನೇ ತರಗತಿಗೆ ಸೇರಿದರು. ಹೀಗೆ ನನ್ನ ಶಿಕ್ಷಣ ಆರಂಭವಾಯಿತು. ಅಲ್ಲಿಂದ ನಾನು ಎಲ್ಲೂ ಫೇಲಾಗಲೇ ಇಲ್ಲ ಎಂದರು.

ಜನರ ಸೇವೆಯೇ ದೇವರ ಸೇವೆ ಎಂದು ನಂಬಿದವನು ನಾನು. ಬಸವಣ್ಣನವರು ಇದನ್ನೇ “ದೇಹವೇ ದೇಗುಲ” ಎಂದು ಹಾಡಿದರು. ದೇವರು ಮತ್ತು ಜನರ ನಡುವೆ ಮಧ್ಯವರ್ತಿ ಇರಬಾರದು ಎನ್ನುವುದು ಬಸವಣ್ಣನವರ ಮೌಲ್ಯವಾಗಿತ್ತು ಎಂದರು.

ನಾವು ಮಾನವೀಯವಾಗಿ ಇದ್ದರಷ್ಟೆ ದೇವರ ಸಹಾಯ ಸಿಗುತ್ತದೆ. ಅಮಾನವೀಯತೆಯಿಂದ ನಡೆಸುವವರಿಗೆ ಯಾವ ದೇವರೂ ಸಹಾಯ ಮಾಡುವುದಿಲ್ಲ ಎಂದರು.

ಅಂಬೇಡ್ಕರ್ ಅವರ ಸಂವಿಧಾನ, ಬಸವಾದಿ ಶರಣರ ಆಶಯದಂತೆ ಜಾತಿ ನಿರ್ಮೂಲನೆ ಮಾಡಬೇಕಿದೆ. ಜಾತಿಗೆ ಚಲನೆ ಇಲ್ಲ, ವರ್ಗಕ್ಕೆ ಚಲನೆ ಇದೆ. ನಿಂತ ನೀರಾಗಿರುವ ಜಾತಿಯನ್ನು ಅಳಿಸಬೇಕಾದರೆ ಶಿಕ್ಷಣ ಮತ್ತು ಆರ್ಥಿಕ ಹಾಗೂ ಸಾಮಾಜಿಕ ಸ್ವಾತಂತ್ರ್ಯ ಮತ್ತು ಅವಕಾಶಗಳನ್ನು ಒದಗಿಸಬೇಕು. ಆಗ ಮಾತ್ರ ಜಾತಿ ಅಳಿಸುವ ದಿಕ್ಕಿನಲ್ಲಿ ಸಾಗಬಹುದು ಎಂದರು.

ಮೊದಲೆಲ್ಲಾ ವ್ಯಕ್ತಿಗಳ ಅರ್ಹತೆಯನ್ನು ಜಾತಿ ಆಧಾರದಲ್ಲಿ ಅಳೆಯುತ್ತಿದ್ದರು. ಇದು ಹೋಗಿ ನಿಜವಾದ ಅರ್ಹತೆ ಆಧಾರದಲ್ಲಿ ಅಳೆಯಬೇಕು ಎಂದರು.

ನಾನು ಉಪಮುಖ್ಯಮಂತ್ರಿಯಾಗಿ ಮೊದಲ ಬಜೆಟ್ ಮಂಡಿಸುವಾಗ “ನೂರು ಕುರಿ ಎಣಿಸಲು ಬರದವನು ಬಜೆಟ್ ಮಂಡಿಸ್ತಾನಾ” ಎಂದು ಅಣಕಿಸಿದ್ದರು. ಈಗ ನಾನು 16 ಬಜೆಟ್ ಮಂಡಿಸಿದ್ದೇನೆ. ಆದ್ದರಿಂದ ಅವಕಾಶ ಮುಖ್ಯ. ಅವಕಾಶ ಸಿಕ್ಕಾಗ ಎಲ್ಲರ ಪ್ರತಿಭೆ ಹೊರಗೆ ಬರುತ್ತದೆ ಎಂದರು.

ಆಚಾರವೇ ಸ್ವರ್ಗ, ಅನಾಚಾರವೇ ನರಕ ಎನ್ನುವ ಬಸವಣ್ಣನವರ ಸರಳ ಧರ್ಮದ ಸಾರವನ್ನು ಪಾಲಿಸಬೇಕು. ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿ ಎಂದರು.

ಮಾಡಬಾರದ ಪಾಪದ ಕೆಲಸಗಳನ್ನು ಮಾಡಿ ಒಳ್ಳೇದು ಮಾಡಪ್ಪಾ ಅಂದ್ರೆ ದೇವರು ಒಳ್ಳೇದು ಮಾಡಲ್ಲ ಎಂದರು.

Tags: CM Siddaramaiahr ashok on siddaramaiahsiddaramaiahsiddaramaiah badamiSiddaramaiah CMsiddaramaiah comedysiddaramaiah in kolarsiddaramaiah in kolar visitsiddaramaiah kolarsiddaramaiah kolar toursiddaramaiah latest newssiddaramaiah newssiddaramaiah on it raidsiddaramaiah on rsssiddaramaiah roadshowsiddaramaiah rsssiddaramaiah speechsiddaramaiah temple visitsiddaramaiah today news
Previous Post

SSLC ಫಲಿತಾಂಶ ಪ್ರಕಟ.. ಶಿಕ್ಷಣ ಇಲಾಖೆಯಿಂದ ಸುದ್ದಿಗೋಷ್ಠಿ

Next Post

ಕ್ರಿಕೆಟ್‌ ಲೋಕದ ಕಿಂಗ್‌ ವಿರಾಟ್‌ ಕೊಹ್ಲಿ ಬಯೋಪಿಕ್‌ನಲ್ಲಿ ಸಿಂಬು..?

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
Next Post
ಕ್ರಿಕೆಟ್‌ ಲೋಕದ ಕಿಂಗ್‌ ವಿರಾಟ್‌ ಕೊಹ್ಲಿ ಬಯೋಪಿಕ್‌ನಲ್ಲಿ ಸಿಂಬು..?

ಕ್ರಿಕೆಟ್‌ ಲೋಕದ ಕಿಂಗ್‌ ವಿರಾಟ್‌ ಕೊಹ್ಲಿ ಬಯೋಪಿಕ್‌ನಲ್ಲಿ ಸಿಂಬು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada