ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಶಾಸಕ ಹರೀಶ್ ಪೂಂಜ ಅವರ ಹೇಳಿಕೆಯ ಸಿಡಿ ಒದಗಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ.
ಮೇ 22 ರಂದು ಅಭಿನಂದನಾ ಸಮಾರಂಭವೊಂದರಲ್ಲಿ ಸಿದ್ದರಾಮಯ್ಯ 24 ಹಿಂದು ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ಪೂಂಜ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಕುರಿತು ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು.
ಎಫ್ ಐ ಆರ್ ಹಾಗು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿನ ವಿಚಾರಣೆ ರದ್ದುಪಡಿಸಬೇಕು ಎಂದು ಶಾಸಕ ಹರೀಶ್ ಪೂಂಜ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಹರೀಶ್ ಪೂಂಜ ಉಲ್ಲೇಖಿಸಿರುವ ಹೇಳಿಕೆಯ ಸಿಡಿ ಒದಗಿಸುವಂತೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಏಕಸದಸ್ಯ ಪೀಠದಿಂದ ಕೋರ್ಟ್ ಆದೇಶ ನೀಡಿದೆ.
ಆಕ್ಷೇಪಣೆ ಸಲ್ಲಿಸಲು ಫಿರ್ಯಾದುದಾರರ ಪರ ವಕೀಲ ಬಿ. ಲತೀಫ್ ಎರಡು ವಾರಗಳ ಸಮಯಾವಕಾಶ ಕೋರಿದ್ದಾರೆ. ಹೀಗಾಗಿ ಡಿಸೆಂಬರ್ 8ಕ್ಕೆ ವಿಚಾರಣೆಯನ್ನು ನ್ಯಾಯಪೀಠ ಮುಂಡೂಡಿದೆ.