ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವ್ಯಾಪ್ತಿಯ ಸಂಸ್ಥೆಗಳಲ್ಲಿ ಅರಣ್ಯ ಇಲಾಖೆಗೆ ಸಂಬಂಧಿಸಿದ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥ ಪಡಿಸುವ ಕುರಿತಂತೆ ಉನ್ನತ ಮಟ್ಟದ ಸಭೆ ನಡೆಸಿದರು. ಈ ಸಭೆಯಲ್ಲಿ ಹಲವು ಮಾಹಿತಿಗಳಿನ್ನ ಅಧಿಕಾರಿಗಳಿಂದ ಪಡೆದುಕೊಂಡಿದ್ದು, ಬಾಕಿ ಇರುವ ಎಲ್ಲಾ ಪ್ರಕರಣಗಳು ಆದಷ್ಟು ಬೇಗ ಬಗೆ ಹರಿಯ ಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನ ನೀಡಿದ್ದಾರೆ.
ಇನ್ನು ಸಿಎಂ ಸೂಚನೆಯನ್ನ ಆದಷ್ಟು ಬೇಗ ಪಾಲಿಸಲಾಗುವುದು ಎಂದು ಅಧಿಕಾರಿಗಳು, ಹೇಳಿದ್ದು ಸದ್ಯದ ಮಟ್ಟಿಗೆ ಇರುವ ಸಣ್ಣ ಸಣ್ಣ ಲೋಪಗಳನ್ನ ಬಗೆ ಹರಿಸಿ ಸಾರ್ವಜನಿಕರಿಗೆ ಯಾವುದೇ ರೀತಿಯಾದ ಸಮಸ್ಯೆ ಆಗದ ಹಾಗೆ ಕ್ರಮವನ್ನ ಕೈಗೊಳ್ಳಲಾಗುವುದು ಎಂದು ಮಾಹಿತಿಯನ್ನ ಕೂಡ ನೀಡಿದ್ದಾರೆ.
ಅರಣ್ಯ ಸಚಿವ ಈಶ್ವರ ಖಂಡ್ರೆ, ತೋಟಗಾರಿಕೆ ಮತ್ತು ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ , ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್ ಅಹ್ಮದ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕಟಾರಿಯಾ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು