ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ (Micro finance) ಸಂಸ್ಥೆಗಳ ಹಾವಳಿಗೆ ಬ್ರೇಕ್ ಹಾಕುವ ಸಲುವಾಗಿಯೇ ಈಗಾಗಲೇ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ್ದು, ಈ ಹಿನ್ನಲೆ ಸುಗ್ರೀವಾಜ್ಞೆಯ ಅನುಷ್ಠಾನ ಕುರಿತಂತೆ ಮುಖ್ಯಮಂತ್ರಿಗಳು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳ ಜೊತೆ ವಿಡಿಯೊ ಕಾನ್ಫರೆನ್ಸ್ (Video conference) ಮೂಲಕ ಸಭೆ ನಡೆಸಿದರು.

ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್, ಸರ್ಕಾರದ ಕಾರ್ಯದರ್ಶಿ ಕಾವೇರಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ದಯಾನಂದ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಸಂಸದ ಕುಮಾರ ನಾಯಕ್ ಅವರು ಮುಖ್ಯಮಂತ್ರಿಗಳ ಜೊತೆಗೆ ಉಪಸ್ಥಿತರಿದ್ದರು.

ಈ ವೇಳೆ ಯಾವುದೇ ಕಾರಣಕ್ಕೂ ಸುಗ್ರೀವಾಜ್ಞೆ ಜಾರಿಯಲ್ಲಿ ಏನು ಲೋಪಗಳಬಾರದು. ಈಗಾಗಲೇ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಸರಣಿ ಸಾವುಗಳು ಸಂಭವಿಸಿದ್ದು, ಇನ್ನು ಯಾವುದೇ ಕಾರಣಕ್ಕೂ ಕಿರುಕುಳಗಳಿಗೆ ಆಸ್ಪದ ನೀಡದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.





