• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇವರಾಜ ಅರಸು ರಾಜ್ಯ ಕಂಡ ಮುತ್ಸದ್ದಿ ರಾಜಕಾರಣಿ ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
June 6, 2025
in Top Story, ಕರ್ನಾಟಕ, ರಾಜಕೀಯ
0
ದೇವರಾಜ ಅರಸು ರಾಜ್ಯ ಕಂಡ ಮುತ್ಸದ್ದಿ ರಾಜಕಾರಣಿ ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು : ಜೂನ್ -06 : ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು
ರಾಜ್ಯ ಕಂಡಂಥ ಮುತ್ಸದ್ದಿ ರಾಜಕಾರಣಿಗಳಲ್ಲಿ ಒಬ್ಬರು.ಬಡವರು, ಅನ್ಯಾಯ, ತುಳಿತಕ್ಕೊಳಗಾದವರಿಗೆ, ಅವಕಾಶಗಳಿಂದ ವಂಚಿತರಾದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ADVERTISEMENT

ಅವರು ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರಿನ ವಿಧಾನಸೌಧದ ಪಶ್ಚಿಮ ದ್ವಾರದ ಮುಂಭಾಗ ಇರುವ ಬೆಂಗಳೂರು ಇರುವ ಮಾಜಿ ಮುಖ್ಯಮಂತ್ರಿ ರವರದ ಡಿ ದೇವರಾಜ ಅರಸುರವರ 43ನೇ ಪುಣ್ಯ ಸ್ಮರಣೆ ಅಂಗವಾಗಿ ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

Siddaramaiah on Dayanand Suspend:ಬಿಜೆಪಿಯವರು ರಾಜಕೀಯಕ್ಕೆ ಮಾತ್ನಾಡ್ತಾರೆ ಬಿಡಿ ಎಂದ ಸಿದ್ರಾಮಯ್ಯ#pratidhvani

ದಿವಂಗತ ದೇವರಾಜ ಅರಸು ಅವರ ಪುಣ್ಯ ತಿಥಿಯಂದು ಸರ್ಕಾರ ಹಾಗೂ ಏಳು ಕೋಟಿ ಕನ್ನಡಿಗರ ವತಿಯಿಂದ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಿ ಸ್ಮರಿಸಿಕೊಂಡಿದೆ ಎಂದರು.

ರಾಜಕೀಯದಲ್ಲಿ ಅವಕಾಶ ಸಿಗದ ಜನಾಂಗದವರಿಗೆ ಪ್ರಾತಿನಿಧ್ಯ ದೊರಕಿಸಿಕೊಟ್ಟರು
ಅವರಿಂದಾಗಿ ಬಡತನ ನಿರ್ಮೂಲನಾ ಕಾರ್ಯಕ್ರಮ ಕರ್ನಾಟಕದಲ್ಲಿ ಅಚ್ಚುಕಟ್ಟಾಗಿ ನೆರವೇರಿತು. ರಾಜಕೀಯದಲ್ಲಿ ಅವಕಾಶ ಸಿಗದ ಜನಾಂಗದವರಿಗೆ ಪ್ರಾತಿನಿಧ್ಯ ದೊರಕಿಸಿಕೊಟ್ಟರು. ಹಾವನೂರು ಆಯೋಗವನ್ನು ರಚನೆ ಮಾಡಿ, ಅದರ ವರದಿ ಪಡೆದು ಜಾರಿ ಮಾಡಿ ಉದ್ಯೋಗದಲ್ಲಿ ಮೀಸಲಾತಿ ಕೊಟ್ಟರು ಎಂದರು.

ಸಾಮಾಜಿಕ ನ್ಯಾಯದಲ್ಲಿ ಬಲವಾದ ನಂಬಿಕೆ ಇಟ್ಟ ದೇವರಾಜ ಅರಸು ಅವರು ನಿರ್ಗತಿಕರು, ಭೂ ರಹಿತರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದರು. ಉಳುವವನೇ ಭೂಮಿಯ ಒಡೆಯ ಕಾನೂನು ಜಾರಿ ಮಾಡಿ ಭೂರಹಿತರನ್ನು ಭೂ ಒಡೆಯರಾಗಿಸಿದರು. ಜೀತ ಪದ್ಧತಿಯನ್ನು ರದ್ದು ಮಾಡಿ, ಮಲ ಹೊರುವ ಪದ್ಧತಿಯನ್ನು ನಿಲ್ಲಿಸಿದರು. ಅವರ ಕಾರ್ಯಕ್ರಮಗಳ ಉದ್ದನೆಯ ಪಟ್ಟಿಯೇ ಇದೆ. ದೀರ್ಘ ಕಾಲ ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು ಎಂದರು.

ಸಾಮಾಜಿಕ ನ್ಯಾಯದ ಪರವಾಗಿ ಬದ್ಧತೆಯಿದ್ದ ರಾಜಕಾರಣಿ
ಮೈಸೂರು ರಾಜ್ಯಕ್ಕೆ 1973 ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದ ಮುತ್ಸದ್ದಿ , ಜನಪರವಾದ ಕಾಳಜಿ, ಸಾಮಾಜಿಕ ನ್ಯಾಯದ ಪರವಾಗಿ ಬದ್ಧತೆಯಿರುವ ರಾಜಕಾರಣಿಯನ್ನು ಸರ್ಕಾರ ಸ್ಮರಿಸಿದೆ. ಅವರು ಮಾಡಿರುವ ಕೆಲಸಗಳು ನಮಗೆ ಸ್ಫೂರ್ತಿ ಮತ್ತು ಪ್ರೇರಣೆ. ನಮ್ಮ ಸರ್ಕಾರ ಅವರಿಂದ ಸ್ಪೂರ್ತಿ ಪಡೆದು ಸಾಮಾಜಿಕ ನ್ಯಾಯಾದೆಡೆಗೆ ದೃಢವಾದ ಹೆಜ್ಜೆಗಳನ್ನು ಇರಿಸಿದ್ದೇವೆ. ಅದೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದರು.

Tags: chief minister d devaraj urschief minister d devaraj urs daughterchief minister d devaraj urs familychief minister d devaraj urs life storychief minister d devaraj urs photoschief minister d devaraj urs sadhanechief minister d devaraj urs samadhichief minister d devaraj urs wifecm siddaramaiah with d devaraj urs carD Devaraj Ursd devaraj urs birthdayd devaraj urs card. devaraj ursdevaraj urs
Previous Post

ಕಾಲ್ತುಳಿತ ಕೇಸ್ ನಲ್ಲಿ ನಿಜವಾದ ಅಪರಾಧಿ ಡಿಕೆ ಶಿವಕುಮಾರ್ – ಆದ್ರೆ ಬಲಿಪಶು ಆಗಿದ್ದು ಮಾತ್ರ ಬಿ.ದಯಾನಂದ್ ..! 

Next Post

ಮೊದಲು ಡಿಸಿಎಂ, ಗೃಹ ಸಚಿವರ ರಾಜೀನಾಮೆ ಪಡೆಯಿರಿ – ಕಾಲ್ತುಳಿತ ಪ್ರಕರಣದ ಬಗ್ಗೆ ನಿಖಿಲ್ ಆಕ್ರೋಶ ! 

Related Posts

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ
Top Story

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

by ಪ್ರತಿಧ್ವನಿ
April 20, 2026
0

ಬೆಂಗಳೂರು : ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರ ಮಾಜಿ ಸಂಸದ ಡಾ. ಚೆಲ್ಲ ಕುಮಾರ್ ಡಿ.ಎಂ.ಕೆ. ನೇತೃತ್ವದ ಮೈತ್ರಿಕೂಟದಲ್ಲಿ ಕೃಷ್ಣಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ...

Read moreDetails
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
Next Post
ಮೊದಲು ಡಿಸಿಎಂ, ಗೃಹ ಸಚಿವರ ರಾಜೀನಾಮೆ ಪಡೆಯಿರಿ – ಕಾಲ್ತುಳಿತ ಪ್ರಕರಣದ ಬಗ್ಗೆ ನಿಖಿಲ್ ಆಕ್ರೋಶ ! 

ಮೊದಲು ಡಿಸಿಎಂ, ಗೃಹ ಸಚಿವರ ರಾಜೀನಾಮೆ ಪಡೆಯಿರಿ - ಕಾಲ್ತುಳಿತ ಪ್ರಕರಣದ ಬಗ್ಗೆ ನಿಖಿಲ್ ಆಕ್ರೋಶ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada