ಇಂದು ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಮತದಾನ (Bypoll) ನಡೆಯುತ್ತಿದ್ದು, ನವೆಂಬರ್ 23ರಂದು ಫಲಿತಾಂಶ ಹೊರಬೀಳಲಿದೆ. ಈ ಉಪಚುನಾವಣೆಯ ಗಲಾಟೆ, ಗದ್ದಲ ಮುಗಿಯುತ್ತಿದ್ದಂತೆಯೇ ಆಡಳಿತ ಯಂತ್ರಕ್ಕೆ ಚುರುಕು ನೀಡಲು ಸಿಎಂ ಸಿದ್ದರಾಮಯ್ಯ (Cm siddaramaiah) ಮುಂದಾಗಲಿದ್ದಾರೆ ಎನ್ನಲಾಗಿದೆ.
ಈ ವರ್ಷಾಂತ್ಯ ಡಿಸೆಂಬರ್ (December) ತಿಂಗಳಲ್ಲಿ ಸಿಎಂ ಸಿದ್ದರಾಮಯ್ಯ ಸಂಪುಟ ಪುನಾರಚನೆಗೆ ಮುಂದಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಈ ಮೂಲಕ ಆಡಳಿತ ಯಂತ್ರದಲ್ಲಿ ಬದಲಾವಣೆ ತರುವ ಯೋಚನೆಯಲ್ಲಿದ್ದಾರಂತೆ.ಸದ್ಯ ತಮ್ಮ ಸಂಪುಟದಲ್ಲಿ (Cabinet) ಭ್ರಷ್ಟಾಚಾರ ಆರೋಪಕ್ಕೆ ಗುರಿಯಾಗಿರುವ ಸಚಿವರ ಕುರ್ಚಿಗಳ ಮೇಲೆ ತೂಗುಗತ್ತಿ ನೇತಾಡುತ್ತಿದೆ.
ಪ್ರಮುಖವಾಗಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ (RB timmapura) ತಮ್ಮ ಇಲಾಖೆಯಲ್ಲಿ ವರ್ಗಾವಣೆ ವಿಚಾರದಲ್ಲಿ ಭ್ರಷ್ಟಾಚಾರ ಮಾಡಿರುವ ಆರೋಪ ಹೊತ್ತಿದ್ದು, ಇನ್ನು ಎಸ್.ಎಸ್. ಮಲ್ಲಿಕಾರ್ಜುನ್ (SS Mallikarjuna’), ಕೆ.ಎನ್. ರಾಜಣ್ಣ (KN rajanna) ಹಾಗೂ ಬೋಸ ರಾಜು (Boşa raju) ಹೀಗೆ ಸುಮಾರು 8 ಸಚಿವರಿಗೆ ಕೊಕ್ ನೀಡುವ ಸಾಧ್ಯತೆಯಿದೆ ಎನ್ನಲಾಗಿದ್ದು, ಸಚಿವರ ಎದೆಯಲ್ಲಿ ಢವ ಢವ ಶುರುವಾಗಿದೆ.