ಸಿಎಂ ಸಿದ್ದರಾಮಯ್ಯ (Cm Siddaramaiah) ಬಿಹಾರ ಚುನಾವಣಾ (Bihar election) ಪ್ರಚಾರದ ಅಖಾಡಕ್ಕಿಳಿಯಲಿದ್ದಾರೆ. ಇಂದು (ಆ .29) ಬೆಳಗ್ಗೆ ಬಿಹಾರಕ್ಕೆ ಸಿಎಂ ಪ್ರಯಾಣ ಬೆಳೆಸಲಿದ್ದಾರೆ. ರಾಹುಲ್ ಗಾಂಧಿ (Rahul gandhi) ನೇತೃತ್ವದಲ್ಲಿ ನಡೆಯುತ್ತಿರುವ ವೋಟರ್ ಅಧಿಕಾರ್ ರ್ಯಾಲಿಯಲ್ಲಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ.

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ನಡೆಯುತ್ತಿರುವ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ. ಬೆಂಗಳೂರಿನಿಂದ ಉತ್ತರ ಪ್ರದೇಶದ ಗೋರಖ್‌ಪುರಕ್ಕೆ ವಿಶೇಷ ವಿಮಾನದಲ್ಲಿ ತೆರಳಲಿದ್ದಾರೆ. ಬಳಿಕ ಅಲ್ಲಿಂದ ಸಿವಾನ್ ಜಿಲ್ಲೆಗೆ ತೆರಳಿ ಮತಗಳ್ಳತನ ವಿರುದ್ಧ ಹಮ್ಮಿಕೊಂಡಿರುವ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಡೆದಿರುವ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ರಾಹುಲ್ ಗಾಂಧಿ ನೇತೃತ್ವದಲ್ಲಿ ರ್ಯಾಲಿ ನಡೆಸಲಾಗುತ್ತಿದ್ದು, ಈ ಹಿನ್ನೆಲೆ ರ್ಯಾಲಿಯಲ್ಲಿ ಭಾಗಿಯಾಗಿ ಬೆಂಬಲ ನೀಡಲಿರುವ ಸಿಎಂ ಬಿಹಾರಕ್ಕೆ ತೆರಳುತ್ತಿದ್ದಾರೆ.