• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿಯವರು ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು: ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
November 8, 2025
in Top Story, ಕರ್ನಾಟಕ, ರಾಜಕೀಯ
0
ಬಿಜೆಪಿಯವರು ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು: ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ನರೇಂದ್ರ ಮೋದಿ ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನದ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ-ಸಿಬಿಐ ಸೇರಿ ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಕೇವಲ ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು ಎನ್ನುವುದು ಸಾಬೀತಾಗಿದೆ. ನಾವು ಇದನ್ನು ಸಹಿಸಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟದ ಮಾರ್ಗ ಹಿಡಿಯುತ್ತೇವೆ. ಬಿಜೆಪಿ ಮತಗಳ್ಳತನದ ಮೂಲಕ‌ ಅನೇಕ ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಅಧಿಕಾರಕ್ಕೆ ಬಂದಿರುವುದು ಸ್ಪಷ್ಟವಾಗಿ ಗೊತ್ತಾಗಿದೆ. ಲೋಕಸಭೆ ವಿರೋಧಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ನಿರಂತರ ಅಧ್ಯಯನ, ತಪಾಸಣೆ ಬಳಿಕ ದಾಖಲೆ ಸಮೇತ ಮತಗಳ್ಳತನವನ್ನು ದೇಶದ ಜನರಿಗೆ ಮನವರಿಕೆ ಮಾಡಿಸಿದ್ದಾರೆ ಎಂದರು.

N. Chaluvaraya Swamy on HD Kumaraswamy : ಕುಮಾರಸ್ವಾಮಿ ಏನೇ ಹೇಳಲಿ..ನಾನಂತೂ ರೈತರ ಪರ ಇರ್ತೀನಿ.!#pratidhvani

ಸಂವಿಧಾನಬಾಹಿರವಾಗಿ ಅಧಿಕಾರ ಹಿಡಿಯುವುದು ಸಂವಿಧಾನಕ್ಕೆ ಎಸಗುವ ದ್ರೋಹ. ಪ್ರಜಾಪ್ರಭುತ್ವಕ್ಕೆ ಎಸಗಿದ ವಂಚನೆ. ರಾಹುಲ್ ಗಾಂಧಿಯವರು, ಬೆಂಗಳೂರು ಕೇಂದ್ರ ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನವನ್ನು ಸ್ಪಷ್ಟವಾಗಿ, ದಾಖಲೆ ಸಮೇತ ಬಯಲಿಗೆ ಎಳೆದು ದಾಖಲೆಗಳನ್ನು ದೇಶದ ಜನರ ಮುಂದೆ ಇಟ್ಟಿದ್ದಾರೆ. ಇಷ್ಟಾದರೂ ಚುನಾವಣಾ ಆಯೋಗ ನಾವು ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸುತ್ತಿಲ್ಲ, ದೇಶದ ಜನರ ಮುಂದೆ ಇರಿಸಿದ ದಾಖಲೆಗಳಿಗೂ ಉತ್ತರ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಚುನಾವಣಾ ಆಯೋಗ ಸ್ವತಂತ್ರ ಸಂಸ್ಥೆಯ ಸ್ಥಾನಮಾನವನ್ನು ಅಂಬೇಡ್ಕರ್ ಅವರು ಸಂವಿಧಾನದಲ್ಲಿ ನೀಡಿದ್ದಾರೆ. ಪ್ರಭುತ್ವ ಚುನಾವಣಾ ಪ್ರಕ್ರಿಯಿಯಲ್ಲಿ ಮೂಗು ತೂರಿಸಬಾರದು ಎನ್ನುವುದು ಅಂಬೇಡ್ಕರ್ ಅವರ ಸ್ಪಷ್ಟ ನಿಲುವಾಗಿತ್ತು. ಅದಕ್ಕಾಗಿ ಮುಕ್ತ ಮತ್ತು ಪಾರದರ್ಶಕ ಚುನಾವಣಾ ವ್ಯವಸ್ಥೆಯನ್ನು ನಮ್ಮ ಸಂವಿಧಾನ ರೂಪಿಸಿದೆ. ಸಂವಿಧಾನದ ಮೌಲ್ಯ ಉಳಿಯಬೇಕಾದರೆ ಸ್ವತಂತ್ರ ಚುನಾವಣಾ ಪ್ರಕ್ರಿಯೆ ನಡೆಯುವಂತೆ ನೋಡಿಕೊಳ್ಳುವುದು ಎಲ್ಲಾ ಪಕ್ಷಗಳ ಜವಾಬ್ದಾರಿ. ಆದ್ದರಿಂದ ನಾವು ಸಂವಿಧಾನದ ಮತ್ತು ಪ್ತಜಾಪ್ರಭುತ್ವ ಕಾಪಾಡಲು ಕಾಂಗ್ರೆಸ್ ಪಕ್ಷದಿಂದ ಕೋಟಿಗೂ ಅಧಿಕ ಮಂದಿಯ ಸಹಿ ಸಂಗ್ರಹ ಮಾಡಲಾಗಿದೆ. ಇದನ್ನು ಚುನಾವಣಾ ಆಯೋಗ ಮತ್ತು ರಾಷ್ಟ್ರಪತಿಗಳಿಗೂ ನೀಡಲಾಗುವುದು ಎಂದರು.

CM Siddaramaiah: ಸರ್ಕಾರವೇ ಕಾರ್ಖಾನೆ ನಡೆಸಲಿ ಎಂದ ಮಾಲೀಕರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ.!#Farmersprotest
Tags: BJPCM SiddaramaiahcongressKarnataka PoliticsPoliticsVote Chori
Previous Post

ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರ ಗೌಡಗೆ ಮತ್ತೆ ಶಾಕ್

Next Post

ಬಿಹಾರದಲ್ಲಿ ಹಿಂದುತ್ವದ ಹವಾ- ಹೇಗಿದೆ ಸಿಎಂ ಯೋಗಿ ಮತಬೇಟೆ..?

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post
ಬಿಹಾರದಲ್ಲಿ ಹಿಂದುತ್ವದ ಹವಾ- ಹೇಗಿದೆ ಸಿಎಂ ಯೋಗಿ ಮತಬೇಟೆ..?

ಬಿಹಾರದಲ್ಲಿ ಹಿಂದುತ್ವದ ಹವಾ- ಹೇಗಿದೆ ಸಿಎಂ ಯೋಗಿ ಮತಬೇಟೆ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada