• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Winter Session 2025: ʼನಾನೇ ಮುಖ್ಯಮಂತ್ರಿʼ: ಸದನದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
December 16, 2025
in Top Story, ಕರ್ನಾಟಕ, ರಾಜಕೀಯ
0
Winter Session 2025: ʼನಾನೇ ಮುಖ್ಯಮಂತ್ರಿʼ: ಸದನದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram
ADVERTISEMENT

ಬೆಳಗಾವಿ: 2023ರಂತೆ 2028ರಲ್ಲಿಯೂ ಜನಾಶೀರ್ವಾದದೊಂದಿಗೆ ಕಾಂಗ್ರೆಸ್(Congress) ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ.

Belagavi Session: ಕಾಂಗ್ರೆಸ್‌  ಸರ್ಕಾರಕ್ಕೆ ಬೇಡಿಕೆ ಇಟ್ಟ ಬಿಜೆಪಿ ಶಾಸಕ ಸೋಮಶೇಖರ್‌..! #pratidhvani

ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ, ವಿರೋಧ ಪಕ್ಷದವರ ಪ್ರಶ್ನೆಗೆ ಉತ್ತರಿಸುತ್ತಾ ಮಾತನಾಡಿದ ಅವರು, ಉರಿಯುವುದರ ಮೇಲೆ ಉಪ್ಪು ಹಾಕಬಾರದೆಂಬ ಎಂಬ ಗಾದೆ ಮಾತಿದೆ. ವಿರೋಧ ಪಕ್ಷದವರು ಇರುವುದೇ ಉರಿಯುವುದರ ಮೇಲೆ ಉಪ್ಪು ಸುರಿಯಲು. ವಿರೋಧ ಪಕ್ಷದವರು ಏನೇ ಪ್ರಚೋದನೆ ಮಾಡಿದರೂ, ನಮ್ಮ ಶಾಸಕರು ಪ್ರಚೋದಿತರಾಗುವುದಿಲ್ಲ. ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿರಬೇಕೆಂದು ಜನರು ಆಶೀರ್ವಾದ ಮಾಡಿ ಕಳಿಸಿದ್ದಾರೆ. 140 ಶಾಸಕರು ನಮ್ಮೊಂದಿಗಿದ್ದಾರೆ. ವಿರೋಧ ಪಕ್ಷದವರು ಇದರಲ್ಲಿ ಹುಳಿ ಹಿಂಡುವ ಅಗತ್ಯವಿಲ್ಲ ಎಂದರು.

2023 ರಲ್ಲಿ ಜನರು ಆಶೀರ್ವಾದ ಮಾಡಿದಂತೆ 2028ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಆಡಳಿತಕ್ಕೆ ಬರಲಿದೆ. ಜನರ ನಾಡಿಮಿಡಿತ ಸರ್ಕಾರಕ್ಕೆ ತಿಳಿದಿದೆ. ಕರ್ನಾಟಕದ ಜನ ಬಿಜೆಪಿಗೆ ಎಂದಿಗೂ ಅಧಿಕಾರಕ್ಕೆ ತರುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಎರಡು ಬಾರಿ ಅಧಿಕಾರ ನಡೆಸಿದರೂ, ಒಂದು ಬಾರಿಯೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿಲ್ಲ. 2008 , 2018 ರಲ್ಲಿ ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ರಾಜ್ಯದ ಜನ ಬಿಜೆಪಿಗೆ ಆಶೀರ್ವಾದ ಮಾಡುವುದಿಲ್ಲ ಎಂಬುದು ಸ್ಪಷ್ಟವಾಗಿದೆ. 2019ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬಾರದೆಂಬ ಉದ್ದೇಶದಿಂದ ಜೆಡಿಎಸ್‌ನೊಂದಿಗೆ ಸರ್ಕಾರ ರಚಿಸಲಾಯಿತು. ಆದರೆ ಬಿಜೆಪಿಯವರು, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಉದ್ದೇಶದ ಬಗ್ಗೆ ಪ್ರಶ್ನಿಸಿದರು.

ದಾವಣಗೆರೆಯನ್ನ ವಿದ್ಯಾಕಾಶಿಯನ್ನಾಗಿ ಮಾಡಿದ್ದು Shamanuru Shivashankarappa..  #pratidhvani

ಐದು ವರ್ಷ ಸುಭದ್ರ ಸರ್ಕಾರ ನೀಡುತ್ತೇವೆ

ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡ್ ಮಾತು ಅಂತಿಮವಾಗಿರುತ್ತದೆ. ಆದರೆ ಬಿಜೆಪಿಯ ಅಧ್ಯಕ್ಷಗಿರಿ ಆಯ್ಕೆಯಲ್ಲಿ ಒಮ್ಮತ ಸಾಧಿಸಿಲ್ಲ. ಬಿಜೆಪಿಯವರಿಗೆ ಅಸೂಯೆ ಕಾಡುತ್ತಿದೆ. ಐದು ವರ್ಷ ಸುಭದ್ರ ಸರ್ಕಾರ ನೀಡುತ್ತೇವೆ ಹಾಗೂ ಮತ್ತೆ ಚುನಾವಣೆ ಎದುರಿಸಿ 2028 ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. 2013 ರಲ್ಲಿ 2023 ರಲ್ಲಿಯೂ ಕಾಂಗ್ರೆಸ್‌ಗೆ ಜನರು ಆಶೀರ್ವಾದ ಮಾಡಿದ್ದಾರೆ, ಆದರೆ ಬಿಜೆಪಿಯವರಿಗೆ ಒಮ್ಮೆಯೂ ಜನಾದೇಶ ದೊರೆತಿಲ್ಲ ಹಾಗೂ ಭವಿಷ್ಯದಲ್ಲಿಯೂ ದೊರೆಯುವುದಿಲ್ಲ. ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದೆ. ʼನಾನು ಹೋದರೆ ಹೋದೇನುʼ ಅಂತ ಕನಕದಾಸರು ಹೇಳಿದ್ದರು. ʼಇದು ನನ್ನ ಸರ್ಕಾರವಲ್ಲ, ನಮ್ಮ ಸರ್ಕಾರʼ. ಈಗಲೂ ನಾನೇ ಮುಖ್ಯಮಂತ್ರಿ. ಹೈಕಮಾಂಡ್ ಹೇಳುವ ತನಕವೂ ನಾನೇ ಮುಖ್ಯಮಂತ್ರಿ ಎಂದು ತಿಳಿಸಿದರು.

ಶಾಮನೂರು ಶಿವಶಂಕರಪ್ಪಗೆ ವಿದ್ಯೆ ಕಡಿಮೆ ಬುದ್ಧಿ ಜಾಸ್ತಿ ಎಂದ ಜೆಡಿಎಸ್‌ ಎಂಎಲ್‌ಸಿ  ಭೋಜೇಗೌಡ #pratidhvani
Tags: BelagvaiBJPCM Siddaramaiahcongressd. k. shivakumarJDSKarnataka PoliticsPoliticsWinter sessionWinter Session ̄2025
Previous Post

BBK 12: ಈ ಬಾರಿ ಮಹಿಳಾ ಸ್ಪರ್ಧಿ ವಿನ್ನರ್‌ : ಗಿಲ್ಲಿ ಫ್ಯಾನ್ಸ್‌ ನಿದ್ದೆಗೆಡಿಸಿದ ಶಾಕಿಂಗ್‌ ನ್ಯೂಸ್‌

Next Post

IPL Auction 2026: ಐಪಿಎಲ್‌ ಮಿನಿ ಹರಾಜು.. ಇಲ್ಲಿದೆ ಸಂಪೂರ್ಣ ಮಾಹಿತಿ

Related Posts

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?
Top Story

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

by ಪ್ರತಿಧ್ವನಿ
April 20, 2026
0

ಬೆಂಗಳೂರು :  ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ (Enforcement Directorate) ದಾಳಿ...

Read moreDetails
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

April 20, 2026
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
Next Post
IPL Auction 2026: ಐಪಿಎಲ್‌ ಮಿನಿ ಹರಾಜು.. ಇಲ್ಲಿದೆ ಸಂಪೂರ್ಣ ಮಾಹಿತಿ

IPL Auction 2026: ಐಪಿಎಲ್‌ ಮಿನಿ ಹರಾಜು.. ಇಲ್ಲಿದೆ ಸಂಪೂರ್ಣ ಮಾಹಿತಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada